ಕುಶಾಲನಗರ, ಜು 02: ದಶಕಗಳದ ಲೋಕಾರ್ಪಣೆ ಯಾಗದೆ ನೆನೆಗುದಿಗೆ ಬಿದ್ದಿರುವ ಕುಶಾಲನಗರದ ಕಲಾಭವನಕ್ಕೆ ಹೆಚ್ಚುವರಿ ಅಭಿವೃದ್ಧಿ ಕೆಲಸಗಳಿಗೆ ರೂ 1 ಕೋಟಿ ಅನುದಾನ ಬಿಡುಗಡೆಯಾಗಿದೆ ಎಂದು ಮಡಿಕೇರಿ ಕ್ಷೇತ್ರ ಶಾಸಕ ಡಾ.ಮಂಥರ್ ಗೌಡ ತಿಳಿಸಿದರು.
ಅಧಿಕಾರಿಗಳೊಂದಿಗೆ ಕಲಾಭವನ ಪರಿಶೀಲಿಸಿದ ಶಾಸಕರು ಬಾಕಿ ಉಳಿದಿರುವ ಕೆಲಸಗಳ ಬಗ್ಗೆ ಮಾಹಿತಿ ಪಡೆದುಕೊಂಡರು.
ಶೀಘ್ರವಾಗಿ ಒಳಾಂಗಣದಲ್ಲಿ ಅವಶ್ಯವಿರುವ ಕೆಲಸಗಳನ್ನು ಪೂರ್ಣಗೊಳಿಸಿ ಲೋಕಾರ್ಪಣೆ ಗೆ ಕ್ರಮಕೈಗೊಳ್ಳಲು ಸೂಚಿಸಿದರು.
ಈ ಸಂದರ್ಭ ಗ್ಯಾರೆಂಟಿ ಯೋಜನೆಗಳ ಅನುಷ್ಠಾನ ಸಮಿತಿ ತಾಲೂಕು ಅಧ್ಯಕ್ಷ ವಿ.ಪಿ.ಶಶಿಧರ್, ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಪ್ರಮೋದ್ ಮುತ್ತಪ್ಪ, ಕೆಪಿಸಿಸಿ ಸದಸ್ಯ ಮಂಜುನಾಥ್ ಗುಂಡುರಾವ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಕುಮಾರ್ ಸೇರಿದಂತೆ ಮುಖಂಡರಾದ ಜೋಸೆಫ್ ವಿಕ್ಟರ್ ಸೋನ್ಸ್, ಎಂ.ಕೆ.ದಿನೇಶ್, ಹರೀಶ್, ರಂಜನ್, ಆದಂ, ರಮೇಶ್ ಮತ್ತಿತರರು ಇದ್ದರು.
Back to top button
error: Content is protected !!