ಕ್ರೈಂ

ಚಿನ್ನಾಭರಣ, ದ್ವಿಚಕ್ರ ವಾಹನ, ನಗದು ಕಳವು ಪ್ರಕರಣ: ಆರೋಪಿ‌ ಬಂಧನ

ಕುಶಾಲನಗರ, ಜು 02: ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ತಾಳತ್ ಮನೆ ನಿವಾಸಿಯದ ಭರತ್ ಎಂಬವರು ಕೋಳಿ ಅಂಗಡಿ ಹಾಗೂ ಐಸ್‌ಕ್ರಿಮ್/ಜ್ಯೂಸ್ ಅಂಗಡಿ ಇದ್ದು, ಸದರಿ ಅಂಗಡಿಯಲ್ಲಿದ್ದ ರೂ 10,000/- ನಗದು ಮತ್ತು ಅಂದಾಜು 52 ಗ್ರಾಂ ತೂಕದ ಚಿನ್ನಾಭರಣಗಳು ಹಾಗೂ ಅಂಗಡಿಯ ಮುಂಭಾಗ ನಿಲ್ಲಿಸಿದ್ದ ಒಂದು ದ್ವಿ-ಚಕ್ರ ವಾಹನವನ್ನು ದಿನಾಂಕ: 05-06-2024 ರಂದು ಅಪರಿಚಿತ ವ್ಯಕ್ತಿಗಳು ಕಳವು ಮಾಡಿರುವ ಕುರಿತು ದೂರು ಸ್ವೀಕರಿಸಿದ್ದು, ಘಟನೆ ಸ್ಥಳಕ್ಕೆ ಮಡಿಕೇರಿ ಗ್ರಾಮಾಂತರ ಠಾಣೆ ಅಧಿಕಾರಿ ಮತ್ತು ಸಿಬ್ಬಂದಿಗಳು ಭೇಟಿ ನೀಡಿ ಕೃತ್ಯಕ್ಕೆ ಸಂಬಂಧಿಸಿದ ಮಾಹಿತಿ ಹಾಗೂ ಸಾಕ್ಷ್ಯಾಧಾರಗಳನ್ನು ಕಲೆಹಾಕಿ ಆರೋಪಿಗಳನ್ನು ಪತ್ತೆ ಹಚ್ಚಲು ಮಹೇಶ್ ಕುಮಾರ್, ಡಿಎಸ್‌ಪಿ. ಮಡಿಕೇರಿ ಉಪವಿಭಾಗ,  ಉಮೇಶ್.ಯು. ಪಿಐ.  ವೆಂಕಟ್, ಪಿಎಸ್‌ಐ ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣೆ & ಠಾಣಾ ಸಿಬ್ಬಂದಿಗಳು ಹಾಗೂ ತಾಂತ್ರಿಕ ಸಿಬ್ಬಂದಿಗಳ ವಿಶೇಷ ತಂಡವನ್ನು ರಚಿಸಿ ತನಿಖೆ ಕೈಗೊಂಡು ಮಾಹಿತಿ ಸಂಗ್ರಹಿಸಿ ದಿ: 01-07-2024 ರಂದು ನಾಲಾಡಿ ಗ್ರಾಮ ನಿವಾಸಿಯಾದ ಅಶೋಕ.ಕೆ.ಸಿ, (35 ವರ್ಷ) ಎಂಬಾತನನ್ನು ದಸ್ತಗಿರಿ ಮಾಡಲಾಗಿರುತ್ತದೆ ಹಾಗೂ ಕಳವು ಮಾಡಿದ್ದ 21.3 ಗ್ರಾಂ ಚಿನ್ನಾಭರಣಗಳನ್ನು ಮತ್ತು ದ್ವಿ-ಚಕ್ರ ವಾಹನವನ್ನು ವಶಪಡಿಸಿಕೊಳ್ಳಲಾಗಿದೆ.

ಸದರಿ ಮೇಲ್ಕಂಡ ಆರೋಪಿಯು ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಬೆಟ್ಟಗೇರಿಯಲ್ಲಿನ ಅಂಗಡಿ ಕಳವು ಮಾಡಿರುವುದು ಹಾಗೂ ಸಿದ್ದಾಪುರ ಪೊಲೀಸ್ ಠಾಣಾ ವ್ಯಾಪ್ತಿಯ ಅರೆಕಾಡು ಗ್ರಾಮದಲ್ಲಿನ ಚಾಮುಂಡೇಶ್ವರಿ ದೇವಾಸ್ಥಾನದಲ್ಲಿ ಹುಂಡಿ ಕಳವು ಮಾಡಿರುವುದು ತನಿಖೆಯಲ್ಲಿ ಕಂಡುಬಂದಿರುತ್ತದೆ.

ಸದರಿ ಪ್ರಕರಣದ ಆರೋಪಿಯನ್ನು ಪತ್ತೆ ಹಚ್ಚಿ ಕಳವು ಮಾಲನ್ನು ವಶಪಡಿಸಿಕೊಳ್ಳುವಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸಿದ ಅಧಿಕಾರಿ ಹಾಗೂ ಸಿಬ್ಬಂದಿಗಳನ್ನು ಕೆ. ರಾಮರಾಜನ್, ಐಪಿಎಸ್, ಪೊಲೀಸ್ ಅಧೀಕ್ಷಕರು, ಕೊಡಗು ಜಿಲ್ಲೆ, ಮಡಿಕೇರಿ ರವರು ಶ್ಲಾಘಿಸಿರುತ್ತಾರೆ.

Related Articles

Leave a Reply

Your email address will not be published. Required fields are marked *

Back to top button
error: Content is protected !!