ಮನವಿ

ಬೀದಿ ನಾಯಿಗಳಿಂದ ಸಾರ್ವಜನಿಕರಿಗೆ ಸಮಸ್ಯೆ: ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗಳಿಗೆ ಮನವಿ

ಕುಶಾಲನಗರ,ಜು೧೨: ಕುಶಾಲನಗರ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಬೀದಿ ನಾಯಿಗಳಿಂದ ಸಾರ್ವಜನಿಕರಿಗೆ ಸಮಸ್ಯೆ ಉಂಟಾಗಿದ್ದು, ಕೂಡಲೇ ಜಿಲ್ಲಾಧಿಕಾರಿಗಳು ಈ ಬಗ್ಗೆ ಸೂಕ್ತ ಕ್ರಮ‌ವಹಿಸಬೇಕು ಎಂದು ಕೂಡುಮಂಗಳೂರು ಗ್ರಾಮ‌ ಪಂಚಾಯಿತಿ ಸದಸ್ಯರಾದ ಕೆ.ಬಿ.ಶಂಶುದ್ಧೀನ್ ಅವರು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದ್ದಾರೆ.
ಪಟ್ಟಣ, ಗ್ರಾಮಾಂತರ ಪ್ರದೇಶಗಳಲ್ಲಿ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿದ್ದು, ಸಾರ್ವಜನಿಕರು ಭಯದಿಂದ ಸಂಚರಿಸುವಂತಾಗಿದೆ. ಸಣ್ಣ ಪುಟ್ಟ ಮಕ್ಕಳು, ಶಾಲಾ ವಿದ್ಯಾರ್ಥಿಗಳು, ವೃದ್ಧರು‌ ಸೇರಿದಂತೆ ಸಾರ್ವಜನಿಕರು ತಿರುಗಾಡುವ ರಸ್ತೆಯಲ್ಲಿ, ಬೀದಿ ನಾಯಿಗಳು ಗುಂಪು ಗುಂಪಾಗಿ ಸಂಚರಿಸುತ್ತಿವೆ. ಪಾದಚಾರಿಗಳು ಬೀದಿ ನಾಯಿಗಳಿಂದ ದಾಳಿಗೊಳಗಾಗುವ ಆತಂಕದಲ್ಲಿ ರಸ್ತೆ ಸಂಚರಿಸಬೇಕಾಗಿದೆ. ಅಲ್ಲದೇ ಬೀದಿನಾಯಿಗಳು ಶಾಲಾ ವಿದ್ಯಾರ್ಥಿಗಳ ಮೇಲೆ, ಸಾರ್ವಜನಿಕರ ದಾಳಿ ನಡೆಸಿದ ಘಟನೆಗಳು ಕೂಡಾ ನಡೆಯುತ್ತಿವೆ. ಈ ಬಗ್ಗೆ ಸಂಬಂಧಿಸಿದ ಅಧಿಕಾರಿಗಳು ಕ್ರಮವಹಿಸಲು ಮುಂದಾಗುತ್ತಿಲ್ಲ. ಸಣ್ಣ ಪುಟ್ಟ ಮಕ್ಕಳ ಜೀವನದೊಂದಿಗೆ ಅಧಿಕಾರಿಗಳು ಚಲ್ಲಾಟವಾಡುತ್ತಿದ್ದಾರೆ ಎಂದು ಆರೋಪಿಸಿರುವ ಕೆ.ಬಿ.ಶಂಶುದ್ಧೀನ್, ನೆರೆ ರಾಜ್ಯಗಳಲ್ಲಿ ಪುಟ್ಟ ಮಕ್ಕಳು ಬೀದಿನಾಯಿಗಳಿಂದ ಮೃತಪಟ್ಟ ಘಟನೆಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಾಗೂ ಮಾಧ್ಯಮಗಳಲ್ಲಿ ನೋಡುತ್ತಲೇ ಇದ್ದೇವೆ. ಆದ್ದರಿಂದ ಜಿಲ್ಲಾಧಿಕಾರಿಗಳು ಸಂಬಂಧಿಸಿದ ಅಧಿಕಾರಿಗಳೊಂದಿಗೆ ಚರ್ಚೆ‌ ನಡೆಸಿ, ಬೀದಿನಾಯಿಗಳ ಸಮಸ್ಯೆಗೆ ಪರಿಹಾರ ಕಂಡುಕೊಡಬೇಕು ಕೂಡುಮಂಗಳೂರು ಗ್ರಾಮ ಪಂಚಾಯಿತಿ ಸದಸ್ಯರಾದ ಕೆ.ಬಿ.ಶಂಶುದ್ಧೀನ್ ಮನವಿ ಮಾಡಿಕೊಂಡಿದ್ದಾರೆ.

Related Articles

Leave a Reply

Your email address will not be published. Required fields are marked *

Back to top button
error: Content is protected !!