ಮಳೆ

ನೀರಾವರಿ ನಿಗಮದಿಂದ ಪ್ರವಾಹ ಮುನ್ನೆಚ್ಚರಿಕೆ ವಹಿಸಲು ಸೂಚನೆ: ಹಾರಂಗಿ ಬಹುತೇಕ ಭರ್ತಿ

ನದಿ ಪಾತ್ರದ ಜನತೆ ಸುರಕ್ಷಿತ ಸ್ಥಳಗಳಿಗೆ ತೆರಳಲು ಸೂಚನೆ

ಕುಶಾಲನಗರ, ಜು 14:ಹಾರಂಗಿ ಜಲಾನಯನ ಪ್ರದೇಶದಲ್ಲಿ ಹೆಚ್ಚಾಗಿ ಮಳೆಯಾಗುತ್ತಿದ್ದು, ಹಾರಂಗಿ ಜಲಾಶಯಕ್ಕೆ ಒಳಹರಿವಿನ ಪ್ರಮಾಣ ಹೆಚ್ಚಾಗುತ್ತಿರುತ್ತದೆ. ಹಾಗೂ ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ಜಲಾನಯನ ಪ್ರದೇಶಗಳಲ್ಲಿ ಭಾರಿ ಪ್ರಮಾಣದಲ್ಲಿ ಮಳೆಯಾಗುವ ಸಂಭವವಿದ್ದು, ಒಳಹರಿವಿನ ಪ್ರಮಾಣ ಮತ್ತಷ್ಟು ಹೆಚ್ಚಾಗುವ ಸಂಭವವಿರುತ್ತದೆ. ಜಲಾಶಯವು ಶೀಘ್ರವೇ ಗರಿಷ್ಟ ಮಟ್ಟ ತಲುಪುವುದರಿಂದ ನದಿಗೆ ಹೆಚ್ಚುವರಿ ನೀರನ್ನು ಹರಿಸಲಾಗುವುದು.

ಆದ್ದರಿಂದ ಸಾರ್ವಜನಿಕರಿಗೆ ಈ ಮೂಲಕ ತಿಳಿಯಪಡಿಸುವುದೇನೆಂದರೆ ಹಾರಂಗಿ ಮತ್ತು ಕಾವೇರಿ ನದಿಯ ಪಾತ್ರದಲ್ಲಿರುವ ಮತ್ತು ನದಿಯ ಎರಡು ದಂಡೆಯಲ್ಲಿ ವಾಸಿಸುತ್ತಿರುವ ಜನರು ತಮ್ಮ ಆಸ್ತಿ ಪಾಸ್ತಿ ಹಾಗೂ ಜನಜಾನುವಾರು ರಕ್ಷಣೆಗಳ ಬಗ್ಗೆ ಮುನ್ನೆಚ್ಚರಿಕೆ ವಹಿಸಿ ಸುರಕ್ಷಿತ ಸ್ಥಳಗಳಿಗೆ ತೆರಳಲು ನೀರಾವರಿ ನಿಗಮದ ಕಾರ್ಯಪಾಲಕ ಅಭಿಯಂತರ ಪುಟ್ಟಸ್ವಾಮಿ ಪ್ರಕಟಣೆ ಮೂಲಕ ಕೋರಿದ್ದಾರೆ.

Related Articles

Leave a Reply

Your email address will not be published. Required fields are marked *

Back to top button
error: Content is protected !!