ಕುಶಾಲನಗರ,ಜು 20: ಕೂಡುಮಂಗಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ನವಗ್ರಾಮದಲ್ಲಿ ಬಂಡೆ ಕುಸಿದು ಬಿದ್ದ ಪರಿಣಾಮ ಮನೆಗೆ ಹಾನಿ ಸಂಭವಿಸಿದ ಘಟನೆ ನಡೆದಿದ್ದು, ಸ್ಥಳಕ್ಕೆ ಕೂಡುಮಂಗಳೂರು ಗ್ರಾ.ಪಂ ಅಧ್ಯಕ್ಷ ಬಾಸ್ಕರ್ ನಾಯಕ್, ಸ್ಥಳೀಯ ಸದಸ್ಯರಾದ ಕೆ.ಬಿ.ಶಂಶುದ್ಧೀನ್ ಹಾಗೂ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು.
ನವಗ್ರಾಮದ ವಿಶೇಷ ಚೇತನರಾದ ಗುರುಮೂರ್ತಿ ಅವರ ಮನೆಗೆ ಬಂಡೆ ಬಿದ್ದು ಮನೆಗೆ ಹಾನಿ ಸಂಭವಿಸಿದೆ. ಅದೃಷ್ಟವಶಾತ್ ಮನೆಯವರಿಗೆ ಯಾವುದೇ ಅನಾಹುತ ಸಂಭವಿಸಲಿಲ್ಲ. ಮಳೆಯ ಅವಾಂತರದಿಂದ ಅಪಘಾತ ಸಂಭವಿಸಿದ್ದು, ಸರ್ಕಾರದಿಂದ ಸೂಕ್ತ ಪರಿಹಾರ ಒದಗಿಸಿಕೊಡುವಂತೆ ಗುರು ಮೂರ್ತಿ ಹಾಗೂ ಸದಸ್ಯ ಸಂಶುದ್ದಿನ್ ಆಗ್ರಹಿಸಿದ್ದಾರೆ.
ಈ ಸಂದರ್ಭ ಕೂಡುಮಂಗಳೂರು ಗ್ರಾ.ಪಂ ಪಿಡಿಓ ಸಂತೋಷ್, ಗ್ರಾಮ ಲೆಕ್ಕಿಗ ಗುರುದರ್ಶನ್, ಸಿಬ್ಬಂದಿ ಲೋಕೇಶ್ ಇದ್ದರು.
Back to top button
error: Content is protected !!