ಕುಶಾಲನಗರ, ಏ 08: ಹೆಚ್.ಶಿವರಾಮೇಗೌಡರ ಕರ್ನಾಟಕ ರಕ್ಷಣಾ ವೇದಿಕೆಯ ಕುಶಾಲನಗರ ತಾಲೂಕು ಅಧ್ಯಕ್ಷರಾಗಿ ಕೂಡ್ಲೂರು ನವಗ್ರಾಮದ ಪುಟ್ಟಸ್ವಾಮಿ ಎಸ್.ಎನ್. ಅವರನ್ನು ನೇಮಕಗೊಳಿಸಿ ಜಿಲ್ಲಾಧ್ಯಕ್ಷ ಡಾ.ಬಿ.ಎ.ದಿನೇಶ್ ಶೆಟ್ಟಿ ಆದೇಶ ಹೊರಡಿಸಿದ್ದಾರೆ.
ಕನ್ನಡ ನಾಡು, ನುಡಿ, ಜಲ, ಗಡಿ, ಸಂಸ್ಕೃತಿಯನ್ನು ಉಳಿಸಿ ಬೆಳೆಸುವ ಮಹತ್ತರ ಜವಾಬ್ದಾರಿಯನ್ನು ದ್ವೇಷಾಸೂಯೆ, ವ್ಯಕ್ತಿಗತ ಪ್ರತಿಷ್ಠೆ ಬದಿಗೊತ್ತಿ ಸಂಘದ ಗುರಿ, ಧ್ಯೇಯಕ್ಕೆ ಬದ್ದರಾಗಿ ಕಾರ್ಯನಿರ್ವಹಿಸುವಂತೆ ರಾಜ್ಯಾಧ್ಯಕ್ಷರ ಅನುಮೋದನೆಯೊಂದಿಗೆ ನೂತನ ಅಧ್ಯಕ್ಷರಿಗೆ ಆದೇಶ ಪ್ರತಿ ಹಸ್ತಾಂತರಿಸಲಾಗಿದೆ ಎಂದು ಜಿಲ್ಲಾಧ್ಯಕ್ಷ ಡಾ.ಬಿ.ಎ.ದಿನೇಶ್ ಶೆಟ್ಟಿ ತಿಳಿಸಿದ್ದಾರೆ.
Back to top button
error: Content is protected !!