ಕುಶಾಲನಗರ, ಜು 22: ಕುಶಾಲನಗರ ತಾಲೂಕು ವ್ಯಾಪ್ತಿಯ ವಿವಿಧೆಡೆ ಮಳೆಹಾನಿ ಪ್ರದೇಶಗಳಿಗೆ ಮಾಜಿ ಶಾಸಕ ಅಪ್ಪಚ್ಚುರಂಜನ್ ಭೇಟಿ ನೀಡಿ ಪರಿಶೀಲಿಸಿದರು.
ಕುಶಾಲನಗರ ಪುರಸಭೆ, ಕೂಡುಮಂಗಳೂರು, ಗುಡ್ಡೆಹೊಸೂರು ಗ್ರಾಪಂ ವ್ಯಾಪ್ತಿಯಲ್ಲಿ ಮಳೆಯಿಂದ ಕುಸಿದ ಮನೆಗಳನ್ನು ವೀಕ್ಷಿಸಿದ ಅಪ್ಪಚ್ಚುರಂಜನ್ ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿ ಆಹಾರ ಕಿಟ್ ವಿತರಣೆ ಮಾಡಿದರು.
ಬಳಿಕ ಕುಶಾಲನಗರ ಪುರಸಭೆ ವ್ಯಾಪ್ತಿಯಲ್ಲಿ ನದಿ ತಟದ ಸಾಯಿ ಬಡಾವಣೆ, ಕುವೆಂಪು ಬಡಾವಣೆಗೆ ಭೇಟಿ ನೀಡಿದ ಅವರು, ಪ್ರವಾಹ ತಡೆಗಟ್ಟಲು ನಿರ್ಮಿಸುತ್ತಿರುವ ತಡೆಗೋಡೆಯನ್ನು ವೀಕ್ಷಿಸಿದರು.
ಸಾಯಿ ಬಡಾವಣೆಯಲ್ಲಿ ನಿರ್ಮಾಣ ಹಂತದಲ್ಲಿರುವ ತಡೆಗೋಡೆ ಕಾಮಗಾರಿ ಪರಿಶೀಲಿಸಿದ ಅವರು ನೀರಾವರಿ ನಿಗಮದ ಅಭಿಯಂತರರಿಗೆ ಅಗತ್ಯ ಸೂಚನೆಗಳನ್ನು ನೀಡಿದರು.
ಕುವೆಂಪು ಬಡಾವಣೆಯಲ್ಲಿ ಈಗಾ್ಗಲೆ ನಿರ್ಮಾಣಗೊಂಡಿರುವ ತಡೆಗೋಡೆ ಪರಿಶೀಲಿಸಿ ತಡೆಗೋಡೆ ಆವರಣದಲ್ಲಿ ಮಡುಗಟ್ಟಿರುವ ಮಳೆ ನೀರನ್ನು ಶೀಘ್ರವಾಗಿ ವಿಲೇವಾರಿ ಮಾಡುವಂತೆ ಸ್ಥಳೀಯ ಆಡಳಿತಕ್ಕೆ ನಿರ್ದೇಶನ ನೀಡಿದರು.
ಇದೇ ಸಂದರ್ಭ ಪ್ರವಾಸಿ ಮಂದಿರದಲ್ಲಿ ಕಾರ್ಯಕರ್ತರನ್ನು ಭೇಟಿ ಮಾಡಿ ಚರ್ಚಿಸಿದರು.
ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಸರಕಾರ ಇದ್ದ ಸಂದರ್ಭ ನೀಡುತ್ತಿದ್ದ ಮಳೆಹಾನಿ ಪರಿಹಾರಕ್ಕಿಂತ ಹೆಚ್ಚಿನ ಮೊತ್ತವನ್ನು ಇಂದಿನ ಕಾಂಗ್ರೆಸ್ ಸರಕಾರ ನೀಡಲು ಮುಂದಾಗಬೇಕಿದೆ.
ನಮ್ಮ ಸರಕಾರದ ಅವಧಿಯಲ್ಲಿ ರೂ 1 ಲಕ್ಷದಿಂದ 10 ಲಕ್ಷದವರೆಗೆ ಪರಿಹಾರ ನೀಡಿದ್ದೇವೆ. ಸಂತ್ರಸ್ಥರೆಲ್ಲರಿಗೂ ಕಿಟ್ ಒದಗಿಸಲು ಕ್ರಮವಹಿಸಿದ್ದೆವು. ಇಂದಿನ ರಾಜ್ಯ ಸರಕಾರ ಮನೆ ಕಳೆದುಕೊಂಡವರಿಗೆ 15 ಲಕ್ಷ ರೂಗಳನ್ನು ಒದಗಿಸಲು ಮುಂದಾಗಬೇಕಿದೆ. ಕಾಂಗ್ರೆಸ್ ಸರಕಾರ ಹಾಗೂ ಜನಪ್ರತಿನಿಧಿಗಳು ಜನಸಾಮಾನ್ಯರ ಕಷ್ಟಗಳಿಗೆ ಸ್ಪಂದಿಸುವ ಮನಸ್ಸು ಮಾಡಬೇಕಿದೆ ಎಂದರು.
138 ಕೋಟಿ ರೂಗಳ
ಹೂಳೆತ್ತುವ ಕಾಮಗಾರಿ ಪರಿಪೂರ್ಣವಾಗಿ ಆರಂಭಗೊಂಡಿಲ್ಲ. ಈ ಕಾಮಗಾರಿಗೆ ಎಷ್ಟು ಹಣ ಬಿಡುಗಡೆಯಾಗಿದೆ, ಎಷ್ಟು ಖರ್ಚಾಗಿದೆ, ಎಲ್ಲೆಲ್ಲಿಗೆ ವಿನಿಯೋಗಿಸಲಾಗಿದೆ ಎಂಬ ಬಗ್ಗೆ ತನಿಖೆಯ ಅಗತ್ಯವಿದೆ ಎಂದರು.
ಮುಂಬರುಡ ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್ ಚುನಾವಣೆಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ಜಯಗಳಿಸಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದ ಅವರು, ಲೋಕಸಭಾ ಚುನಾವಣೆಯಲ್ಲಿ ಬಿಟ್ಟಿ ಭಾಗ್ಯಗಳ ನಡುವೆಯೂ ನಮ್ಮ ಪಕ್ಷದ ಅಭ್ಯರ್ಥಿ ಅತ್ಯಧಿಕ ಮತಗಳಿಂದ ಗೆಲುವು ಸಾಧಿಸಿದ್ದಾರೆ. ಇದಕ್ಕೆ ಕಾರ್ಯಕರ್ತರ ಶ್ರಮವೇ ಅತ್ಯಂತ ಮಹತ್ವದ್ದು ಎಂದು ಅವರು ಶ್ಲಾಘಿಸಿದರು.
ಈ ಸಂದರ್ಭ ನಗರ ಬಿಜೆಪಿ ಅಧ್ಯಕ್ಷ ಚರಣ್, ಪ್ರಧಾನ ಕಾರ್ಯದರ್ಶಿ ಮಧುಸೂದನ್, ಯುವಮೋರ್ಚಾ ಅಧ್ಯಕ್ಷ ರಾಮನಾಥನ್, ಪ್ರಧಾನ ಕಾರ್ಯದರ್ಶಿ ಸಚಿನ್, ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಆರ್.ಕೆ.ಚಂದ್ರ, ಪುರಸಭಾ ಸದಸ್ಯರಾದ ಅಮೃತ್ ರಾಜ್, ಜೈವರ್ಧನ್, ಡಿ.ಕೆ.ತಿಮ್ಮಪ್ಪ, ಕೂಡುಮಂಗಳೂರು ಗ್ರಾಪಂ ಅಧ್ಯಕ್ಷ ಭಾಸ್ಕರ್ ನಾಯಕ್,
ಪ್ರಮುಖರಾದ ಹೇರೂರು ಚಂದ್ರಶೇಖರ್, ವೈಶಾಖ್, ಪ್ರವೀಣ್, ಆದರ್ಶ್, ದಿನೇಶ್, ಅನುದೀಪ್, ಕುಮಾರಪ್ಪ, ಪುಂಡರೀಕಾಕ್ಷ, ಮಣಿ, ಆಸಿಫ್, ಆಯಾ ಗ್ರಾಪಂ ವ್ಯಾಪ್ತಿಯ ಜನಪ್ರತಿನಿಧಿಗಳು, ಬಿಜೆಪಿ ಮುಖಂಡರು ಇದ್ದರು.
Back to top button
error: Content is protected !!