ಸಭೆ
ಜುಲೈ 28 ರಿಂದ ಹಾರಂಗಿ ಅಣೆಕಟ್ಟೆ ಕಾಲುವೆಗಳಿಗೆ ನೀರು ಹರಿಸಲು ನಿರ್ಧಾರ
ಕುಶಾಲನಗರ, ಜು 22: ಜುಲೈ 28 ರಿಂದ ಕಾಲುವೆಗಳಿಗೆ ನೀರು ಹರಿಸಲು ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಹಾರಂಗಿ ನೀರಾವರಿ ವಿಭಾಗದ ಕಾರ್ಯಪಾಲಕ ಎಂಜಿನಿಯರ್ ಪುಟ್ಟಸ್ವಾಮಿ ತಿಳಿಸಿದ್ದಾರೆ.
ಹಾರಂಗಿ ನೀರಾವರಿ ಸಲಹಾ ಸಮಿತಿ ಸಭೆಯು ಸಚಿವರಾದ ಕೆ.ವೆಂಕಟೇಶ್ ಅವರ ಉಪಸ್ಥಿತಿಯಲ್ಲಿ, ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ.ಮಂತರ್ ಗೌಡ ಅವರ ಅಧ್ಯಕ್ಷತೆಯಲ್ಲಿ ಸೋಮವಾರ ಬೆಂಗಳೂರಿನಲ್ಲಿ ನಡೆಯಿತು. ಹುಣಸೂರು, ಕೆ.ಆರ್.ನಗರ, ಕ್ಷೇತ್ರದ ಶಾಸಕರು, ಸಲಹಾ ಸಮಿತಿ ಸದಸ್ಯರು, ನೀರಾವರಿ ಇಲಾಖೆಯ ಹಿರಿಯ ಎಂಜಿನಿಯರ್ ಗಳು ಇತರರು ಪಾಲ್ಗೊಂಡಿದ್ದರು.