ಕುಶಾಲನಗರ ಜು 24: ಜಿಲ್ಲೆಯ ಬಸವನಹಳ್ಳಿ ಮತ್ತು ತಿತಿಮತಿ ಲ್ಯಾಂಪ್ಸ್ ಸಹಕಾರ ಸಂಘಗಳ ಅಭಿವೃದ್ಧಿಗೆ ಪೂರಕವಾಗಲು ಸಹಕಾರ ಇಲಾಖೆಯ ವತಿಯಿಂದ ಹೆಚ್ಚುವರಿಯಾಗಿ ಅನುದಾನವನ್ನು ಬಿಡುಗಡೆ ಮಾಡುವಂತೆ ಡಿಕೇರಿ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಅವರ ನೇತೃತ್ವದ ಜಿಲ್ಲಾ ಲ್ಯಾಂಪ್ಸ್ ಸಹಕಾರ ಸಂಘಗಳ ಅಧ್ಯಕ್ಷರುಗಳು ರಾಜ್ಯ ಸಹಕಾರ ಸಚಿವರಾದ ಕೆ.ಎನ್. ರಾಜಣ್ಣ ಅವರನ್ನು ಬೆಂಗಳೂರಿನ ವಿಧಾನಸೌಧ ಕಛೇರಿಯಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಿದರು.
ಈ ಸಂದರ್ಭ ಮಡಿಕೇರಿ ಕ್ಷೇತ್ರ ಶಾಸಕ ಡಾ. ಮಂತರ್ ಗೌಡ, ಬಸವನಹಳ್ಳಿ ಗಿರಿಜನ ಸಹಕಾರ ಸಂಘದ ಅಧ್ಯಕ್ಷ ಎಸ್. ಆರ್. ಅರುಣ್ ರಾವ್, ತಿತಿಮತಿ ಸಹಕಾರ ಸಂಘದ ಅಧ್ಯಕ್ಷ ಪಿ.ಕೆ. ಮಣಿ, ಕೂಡಿಗೆ ಗ್ರಾಮ ಪಂಚಾಯತಿ ಸದಸ್ಯರಾದ ಎಸ್. ಎನ್. ಅನಂತ, ಕೆ. ಎಸ್. ಶಿವಕುಮಾರ್ ಹಾಜರಿದ್ದರು.
Back to top button
error: Content is protected !!