ಕೃಷಿ

ಶಿವಮೊಗ್ಗದಲ್ಲಿ ಕೃಷಿ ಮತ್ತು ತೋಟಗಾರಿಕಾ ಮೇಳ: ಜಿಲ್ಲೆಯ ನೂರಾರು ರೈತರು ಭಾಗಿ

ಕುಶಾಲನಗರ, ಅ. 18: ಶಿವಮೊಗ್ಗದ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ ಸಭಾಂಗಣದಲ್ಲಿ ನಡೆದ ನಾಲ್ಕು ದಿನಗಳ ಕಾಲ ನಡೆದ ಕೃಷಿ ಮತ್ತು ತೋಟಗಾರಿಕಾ ಮೇಳಕ್ಕೆ ಕುಶಾಲನಗರ ತಾಲ್ಲೂಕು ವ್ಯಾಪ್ತಿಯ ಕೂಡಿಗೆಯ ರಾಮೇಶ್ವರ ಕೂಡುಮಂಗಳೂರು ಕೃಷಿ ಪತ್ತಿನ ಸಹಕಾರ ಸಂಘ ಆಡಳಿತ ಮಂಡಳಿ ಸದಸ್ಯರು ಸೇರಿದಂತೆ ಸಂಘದ ಕಾರ್ಯವ್ಯಾಪ್ತಿಯ ಎಲ್ಲಾ ಗ್ರಾಮಗಳ ನೂರಾರು ಸದಸ್ಯರು ಶಿವಮೊಗ್ಗದ ಕೃಷಿ ಮೇಳದಲ್ಲಿ ಭಾಗವಹಿಸಿದರು.
ಕೂಡಿಗೆಯ ರಾಮೇಶ್ವರ ಕೂಡುಮಂಗಳೂರು ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಕೆ.ಕೆ ಹೇಮಂತ್ ಕುಮಾರ್ ನವರ ನೇತ್ರತ್ವದಲ್ಲಿ ನೂರಾರು ರೈತರು ಮೇಳದಲ್ಲಿ ಭಾಗವಹಿಸಿ ಸುಸ್ಧಿರ ಅಡಿಕೆ ಕೃಷಿ, ಪೌಷ್ಠಿಕ ಆಹಾರಕ್ಕಾಗಿ ವಿಕಸಿಕ ಕೃಷಿ, ಆರ್ಥಿಕ ಸದೃಢತೆಗಾಗಿ ಹಾಗೂ ವಾಣಿಜ್ಯ ಬೆಳೆಗಳ ಮಾಹಿತಿ, ಸೇರಿದಂತೆ ಪ್ರಗತಿ ಪರ ರೈತರು ಹಾಗೂ ವಿಜ್ಞಾನಗಳಿಂದ ಚರ್ಚಾ ಗೋಷ್ಠಿಯಲ್ಲಿ ಭಾಗವಹಿಸಿ ಕೃಷಿಗೆ ಸಂಬಂಧಿಸಿದಂತೆ ಹೊಸ ಆವಿಷ್ಕಾರಗಳ ಬಗ್ಗೆ ಹೆಚ್ಚಿನ ಮಾಹಿತಿಯನ್ನು ಪಡೆದರು. ಕೃಷಿ ಮೇಳದಲ್ಲಿ ಹಾಕಲಾಗಿದ್ದ ಸಾವಿರಾರು ಕೃಷಿ ವಸ್ತುಗಳ ಪ್ರದರ್ಶನ, ಮಾರಾಟ ಮಳಿಗೆಗಳಿಗೆ ರೈತರು ಭೇಟಿ ನೀಡಿ ಕೃಷಿ ಸಂಬಂಧಿಸಿದ ಮಾಹಿತಿಯನ್ನು ಪಡೆದುಕೊಂಡರು.
ಕೃಷಿ ಮೇಳದಲ್ಲಿ ಜಿಲ್ಲೆಯ ಪೊನ್ನಂಪೇಟೆ ಕೃಷಿ ಮತ್ತು ತೋಟಗಾರಿಕಾ ಕಾಲೇಜಿನ ಪ್ರಾಧ್ಯಾಪಕ ತಂಡ ವತಿಯಿಂದ ವಸ್ತು ಪ್ರದರ್ಶನದಲ್ಲಿ ಕೃಷಿ ಮಳಿಗೆಯನ್ನು ತೆರೆಯಲಾಗಿತ್ತು. ಅಲ್ಲದೆ ಜಿಲ್ಲಾ ಕೃಷಿ ಮತ್ತು ತೋಟಗಾರಿಕಾ ಕಾಲೇಜಿನ ಉಪನ್ಯಾಸಕರು ಮತ್ತು ಸಿಬ್ಬಂದಿ ವರ್ಗದವರು ಜಿಲ್ಲೆಯ ರೈತರಿಗೆ ಕೃಷಿ ಮೇಳದ ವೀಕ್ಷಣೆ ಮಾಡಿರುವುದರ ಜೊತೆಯಲ್ಲಿ ವಿವಿಧ ಕೃಷಿ ಯೋಜನೆಯ ಸಂಪೂರ್ಣವಾದ ಮಾಹಿತಿಯನ್ನು ಸಂಬಂಧಿಸಿದವರಿಂದ ಒದಗಿಸಿದರು.
ಈ ಸಂದರ್ಭದಲ್ಲಿ ಸಹಕಾರ ಸಂಘದ ಉಪಾಧ್ಯಕ್ಷ ಕೆ.ವಿ ಬಸಪ್ಪ , ಬಸವನಹಳ್ಳಿ ಸಹಕಾರ ಸಂಘದ ಅಧ್ಯಕ್ಷ , ಎಸ್ . ಆರ್ . ಅರುಣ್ ರಾವ್,ಸಂಘದ ‌ನಿರ್ದೆಶಕರಾದ ಕೆ.ಪಿ. ರಾಜು, ರಾಮಚಂದ್ರ, ಎಸ್. ಎಸ್ ಕೃಷ್ಣ,. ಕೃಷ್ಣಗೌಡ, ಜಯಶ್ರೀ, ನಾಗರಾಜು, ರಮೇಶ್, ಕುಮಾರ್ ಸೇರಿದಂತೆ ಪ್ರಗತಿಪರ ರೈತರಾದ ಕೆ.ವಿ. ಸಣ್ಣಪ್ಪ, ನಾಗರಾಜು ಶಶಿಕುಮಾರ್, ಸೋಮಣ್ಣ,ಮಂಜುನಾಥ ಸೇರಿದಂತೆ ಮಹಿಳಾ ರೈತರು, ಪುರುಷ ರೈತರು ಭಾಗವಹಿಸಿದ್ದರು.

Related Articles

Leave a Reply

Your email address will not be published. Required fields are marked *

Back to top button
error: Content is protected !!