ಕಾಮಗಾರಿ
ಪ್ರಾರ್ಥನಾ ಮಂದಿರ ಕಾಂಪೌಂಡ್ ನಿರ್ಮಾಣ ಕಾಮಗಾರಿಗೆ ಗುದ್ದಲಿ ಪೂಜೆ
ಕುಶಾಲನಗರ, ಜು 29: ನಂಜರಾಯಪಟ್ಟಣ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಒಳಪಡುವ ನಂಜರಾಯಪಟ್ಟಣ ಗ್ರಾಮದ ಮುಸ್ಲಿಂ ಸಮುದಾಯದ ಪ್ರಾರ್ಥನಾ ಮಂದಿರಕ್ಕೆ ಕಾಂಪೌಂಡ್ ನಿರ್ಮಾಣ ಕಾಮಗಾರಿಯ ಗುದ್ದಲಿ ಪೂಜೆಯನ್ನು ಮಾಡಲಾಯಿತು.
ರೂ 2 ಲಕ್ಷ ವೆಚ್ಚದ ಕಾಮಗಾರಿಗೆ ಗ್ರಾಪಂ ಅಧ್ಯಕ್ಷ ಸಿ.ಎಲ್.ವಿಶ್ವ ಭೂಮಿಪೂಜೆ ನೆರವೇರಿಸಿದರು.
ಈ ಸಂದರ್ಭ ಗ್ರಾಪಂ ಉಪಾಧ್ಯಕ್ಷೆ ಕುಸುಮ, ಸದಸ್ಯರುಗಳಾದ ಜಾಜಿ, ಸಮೀರ, ಗಿರಿಜಮ್ಮ, ಲೋಕನಾಥ್, ಮುಸ್ಲಿಂ ಜಮಾಯತ್ ಸಮಿತಯ ಅಧ್ಯಕ್ಷ ಅಮೀರ್, ಮಾಜಿ ಅಧ್ಯಕ್ಷ ಅಬ್ದುಲ್ಲಾ, ಸದಸ್ಯರುಗಳಾದ ಆರಿಸ್ , ಶರೀಫ್, ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಶೇಷಗಿರಿ, ಗ್ರಾಮ ಪಂಚಾಯಿತಿ ಸಿಬ್ಬಂದಿಗಳು ಮತ್ತು ಗ್ರಾಮಸ್ಥರು ಹಾಜರಿದ್ದರು.