ಕ್ರೈಂ

ಗಾಂಜಾ ಮಾರಾಟ: ಇಬ್ಬರ ಬಂಧನ

ಕುಶಾಲನಗರ, ಆ 11:ವಿರಾಜಪೇಟೆ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಅರ್ಜಿ ಗ್ರಾಮದಲ್ಲಿ ಆಕ್ರಮವಾಗಿ ನಿಷೇಧಿತ ಮಾದಕ ವಸ್ತು ಗಾಂಜಾ ಸರಬರಾಜು/ಮಾರಾಟ ಮಾಡುತಿದ್ದ ವ್ಯಕ್ತಿಗಳನ್ನು ಪತ್ತೆ ಹಚ್ಚುವಲ್ಲಿ ಕೊಡಗು ಜಿಲ್ಲಾ ಪೊಲೀಸ್ ಯಶಸ್ವಿಯಾಗಿದೆ.

ಕೊಡಗು ಜಿಲ್ಲಾ ವ್ಯಾಪ್ತಿಯಲ್ಲಿ ಮಾದಕ ವಸ್ತುಗಳ ಮಾರಾಟದ ಬಗ್ಗೆ ನಮ್ಮ ಕಛೇರಿ ಠಾಣೆಗಳಿಗೆ ಸಾರ್ವಜನಿಕರಿಂದ ದೂರು ಬರುತ್ತಿದ್ರು, ನಿಷೇಧಿತ ಮಾದಕ ವಸ್ತುಗಳ ಮಾರಾಟ/ಸರಬರಾಜು/ ಬಳಕೆಯನ್ನು ತಡೆಗಟ್ಟುವ ಹಿನ್ನೆಲೆಯಲ್ಲಿ ಶ್ರೀ.ಮಹೇಶ್ ಕುಮಾರ್, ಡಿಎಸ್‌ಪಿ, ವಿರಾಜಪೇಟೆ ಉಪವಿಭಾಗ, ಶ್ರೀ.ಅನೂಪ್ ಮಾದಪ್ಪ, ಸಿಪಿಐ, ವಿರಾಜಪೇಟೆ ವೃತ್ತ ಹಾಗೂ ಶ್ರೀ ಪ್ರಮೋದ್, ಪಿಎಸ್.ಐ. ವಿರಾಜಪೇಟೆ ನಗರ ಪೊಲೀಸ್ ಠಾಣೆ ಮತ್ತು ಸಿಬ್ಬಂದಿಗಳ ತಂಡವನ್ನು ರಚಿಸಿ ತನಿಖೆ ಕೈಗೊಂಡು ಮಾಹಿತಿ ಸಂಗ್ರಹಿಸಿ ದಿನಾಂಕ: 09-08-2025 ರಂದು ಅರ್ಜಿ ಗ್ರಾಮದ ಪೆರಂಬಾಡಿ ರಸ್ತೆಯಲ್ಲಿ ನಿಷೇಧಿತ ಮಾದಕ ವಸ್ತುವನ್ನು ಸರಬರಾಜು/ಮಾರಾಟ ಮಾಡುತ್ತಿರುವ ಕುರಿತು ಖಚಿತ ಮಾಹಿತಿ ಹಿನ್ನಲೆಯಲ್ಲಿ ದಾಳಿ ನಡೆಸಿ ಮೈಸೂರು ಜಿಲ್ಲೆ, ಹುಣಸೂರು ತಾ, ಹುಣಸೂರು ಟೌನ್, ನಿವಾಸಿಗಳಾದ ಅನೀಸ್ ಅಹ್ಮದ್, 45 ವರ್ಷ ಮತ್ತು ಚೇತನ್ ಪಿ. 40 ವರ್ಷ ಎಂಬಾತನನ್ನು 7. ಕೆಜಿ 872 ಗ್ರಾಂ ಗಾಂಜಾ ನಿಷೇಧಿತ ಮಾದಕ ವಸ್ತುವಿನೊಂದಿಗೆ ದಸ್ತಗಿರಿ ಮಾಡಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿರುತ್ತದೆ ಹಾಗೂ ಕೃತ್ಯಕ್ಕೆ ಬಳಸಿದ ಕೆ.ಎ-01 ಎಜಿ-5549 ಮಾರುತಿ ಸಿಫ್ಟ್ ಕಾರು ಮತ್ತು 01 ಮೋಬೈಲ್ ಅನ್ನು ವಶಪಡಿಸಿಕೊಳ್ಳಲಾಗಿದೆ.

ಸದರಿ ಪ್ರಕರಣದ ಆರೋಪಿಗಳನ್ನು ಬಂಧಿಸುವಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸಿದ ಅಧಿಕಾರಿ ಹಾಗೂ ಸಿಬ್ಬಂದಿರವರುಗಳನ್ನು ಶ್ರೀ ಕೆ. ರಾಮರಾಜನ್, ಐಪಿಎಸ್, ಪೊಲೀಸ್ ಅಧೀಕ್ಷಕರು, ಕೊಡಗು ಜಿಲ್ಲೆ, ಮಡಿಕೇರಿ ಮತ್ತು ಶ್ರೀ. ಜಿ.ಪಿ.ದಿನೇಶ್ ಕುಮಾರ್, ಹೆಚ್ಚುವರಿ ಪೊಲೀಸ್ ಅಧೀಕ್ಷಕರು, ಕೊಡಗು ಜಿಲ್ಲೆ, ಮಡಿಕೇರಿ ರವರು

ವಿಶೇಷ ಸೂಚನೆ: ಯುವಕ-ಯುವತಿಯರು ಮಾದಕ ವೈಸನಿಗಳಾಗಿ ತಮ್ಮ ಜೀವನವನ್ನು ಹಾಳು ಮಾಡಿಕೊಳ್ಳುವುದನ್ನು ತಡೆಗಟ್ಟುವ ಸಲುವಾಗಿ ಹಾಗೂ ಡ್ರಗ್ಸ್ ಮತ್ತು ಮಾದಕ ದ್ರವ್ಯಗಳ ಮುಕ್ತ ಜಿಲ್ಲೆಯಾನ್ನಾಗಿಸಲು ಸಹಕಸುವ ನಿಟ್ಟಿನಲ್ಲಿ ನಿಷೇಧಿತ ಮಾದಕ ವಸ್ತುಗಳನ್ನು ಬಳಸುವ ಹಾಗೂ ಸರಬರಾಜು/ಮಾರಾಟ ಮಾಡುವ ವ್ಯಕ್ತಿಗಳು ಕಂಡುಬಂದಲ್ಲಿ ಸ್ಥಳೀಯ ಪೊಲೀಸ್ ಠಾಣೆ ಹಾಗೂ ಕೆ.ಎಸ್.ಪಿ ತಂತ್ರಾಶದ ಮೂಲಕ ಮಾಹಿತಿ ನೀಡುವಂತೆ ಹಾಗೂ ಸಹಕರಿಸುವಂತೆ ಸಾರ್ವಜನಿಕರಲ್ಲಿ ಕೋರುತೇವೆ, ಆಕ್ರಮ ಚಟುವಟಿಕೆಗಗಳ ಕುರಿತು ಮಾಹಿತಿ ಒದಗಿಸುವವರ ವಿವರಗಳನ್ನು ಗುಪ್ತವಾಗಿಡಲಾಗುವುದು.

Related Articles

Leave a Reply

Your email address will not be published. Required fields are marked *

Back to top button
error: Content is protected !!