ಸಭೆ

ಕರ್ನಾಟಕ ರಕ್ಷಣಾ ವೇದಿಕೆಯ ವಿವಿಧ ಘಟಕಗಳ ಪದಾಧಿಕಾರಿಗಳ ನೇಮಕ, ಪದಗ್ರಹಣ

ಕುಶಾಲನಗರ, ಅ. 15: ಕರ್ನಾಟಕ ರಕ್ಷಣಾ ವೇದಿಕೆ (ನಾರಾಯಣ ಗೌಡ ಬಣ) ವತಿಯಿಂದ ಕುಶಾಲನಗರ ಪ್ರವಾಸಿ ಮಂದಿರದಲ್ಲಿ ಕಾರ್ಯಕರ್ತರ ಸಭೆ ಹಮ್ಮಿಕೊಳ್ಳಲಾಗಿತ್ತು.

ಕರವೇ ರಾಜ್ಯ ಸಂಚಾಲಕಿ ದೀಪ ಪೂಜಾರಿ ನೇತೃತ್ವದಲ್ಲಿ ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷೆ ಜ್ಯೋತಿ ಕುದುಪಜೆ,ಕುಶಾಲನಗರ ತಾಲೂಕು ಘಟಕದ ಅಧ್ಯಕ್ಷರಾದ ಬಿ.ಜೆ.ಅಣ್ಣಯ್ಯ ಹಾಗೂ ಹಾನಗಲ್ ರೂಪಾ ಗಣೇಶ್ ಸಮ್ಮುಖದಲ್ಲಿ ನಡೆದ ಸಭೆಯಲ್ಲಿ ಸಂಘಟನೆ ಹಾಗೂ ಜನಪರ ಹೋರಾಟಗಳನ್ನು ಹಮ್ಮಿಕೊಳ್ಳುವ ಕುರಿತು ಚರ್ಚೆ ನಡೆಯಿತು.
ಆಂಗ್ಲಭಾಷಾ ನಾಮಫಲಕಗಳ ತೆರವು ಕಾರ್ಯಾಚರಣೆ ಸೇರಿದಂತೆ ಸರಕಾರಿ ಆಸ್ಪತ್ರೆ, ಪುರಸಭೆ, ಕಂದಾಯ ಇಲಾಖೆಯಲ್ಲಿ ಜನಸಾಮಾನ್ಯರಿಗೆ ಉಂಟಾಗುತ್ತಿರುವ ಅನಾನುಕೂಲಗಳ ಬಗ್ಗೆ ಸಭೆಯಲ್ಲಿ ವಿಚಾರ ಪ್ರಸ್ತಾಪವಾಯಿತು. ಇವುಗಳ
ವಿರುದ್ದ ಹೋರಾಟ ರೂಪಿಸಲು ಸಭೆಯಲ್ಲಿ ಚರ್ಚಿಸಲಾಯಿತು.
ಇದೇ ಸಂದರ್ಭ ವಿವಿಧ ಘಟಕಗಳಿಗೆ ಆಯ್ಕೆಯಾದ ಪದಾಧಿಕಾರಿಗಳಿಗೆ ಪದಗ್ರಹಣ ನೆರವೇರಿಸಿ ಪ್ರಮಾಣ ಪತ್ರ ಹಸ್ತಾಂತರಿಸಲಾಯಿತು. ವಿವಿಧ ಹುದ್ದೆಗಳಿಗೆ ನೂತನವಾಗಿ ನೇಮಕಗೊಂಡವರು ಅತ್ಯುತ್ತಮ ಕಾರ್ಯಕ್ರಮಗಳನ್ನು ರೂಪಿಸಿ ತಮ್ಮ ಜವಾಬ್ದಾರಿ ನಿರ್ವಹಿಸುವುದರೊಂದಿಗೆ ಮತ್ತಷ್ಟು ಉನ್ನತ ಹುದ್ದೆ ಅಲಂಕರಿಸಲು ರಾಜ್ಯ ಸಂಚಾಲಕಿ ದೀಪ ಪೂಜಾರಿ ಅವರು ಸೂಚಿಸಿದರು.
ತಾಲೂಕು ಘಟಕದ ಅಧ್ಯಕ್ಷ ಬಿ.ಜೆ.ಅಣ್ಣಯ್ಯ ಮಾತನಾಡಿ, ಮಡಿಕೇರಿ ವಿಧಾನಸಭಾ ಕ್ಷೇತ್ರ ಸೇರಿದಂತೆ ಕುಶಾಲನಗರ ನಗರ ಹಾಗೂ ಹೋಬಳಿ ಘಟಕಗಳಿಗೆ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆಸಿದ್ದು ರಾಜ್ಯಾಧ್ಯಕ್ಷ ನಾರಾಯಣಗೌಡರ ಆದೇಶದಂತೆ ಮುಂದಿನ ದಿನಗಳಲ್ಲಿ ವಿವಿಧ ಘಟಕಗಳಿಗೆ ನೂತನ ಪದಾಧಿಕಾರಿಗಳ ನೇಮಕಾತಿ ಮಾಡಲಾಗುವುದು ಎಂದು ತಿಳಿಸಿದರು.
ಈ ಸಂದರ್ಭ ಮಹಿಳಾ ಘಟಕದ ಪ್ರಧಾನ ಕಾರ್ಯದರ್ಶಿ ದಿವ್ಯ ದೇವಾಂಗ, ಮಡಿಕೇರಿ ವಿಧಾನಸಭಾ ಕ್ಷೇತ್ರ ಅಧ್ಯಕ್ಷ ಆನಂದ್ ಗೌಡ,
ತಾಲೂಕು ಘಟಕ ಗೌರವಾಧ್ಯಕ್ಷ ರೋನಾಲ್ಡ್, ಉಪಾಧ್ಯಕ್ಷ ಎಸ್.ಎಸ್.ಫಯಾಜುದ್ದೀನ್, ಪ್ರಧಾನ ಕಾರ್ಯದರ್ಶಿ ಕುಮಾರ್ ಆರ್.ದೇವಾಂಗ, ನಗರ ಘಟಕ ಅಧ್ಯಕ್ಷ ಯೋಗೇಶ್, ಜಿಲ್ಲಾ ಯುವ ಘಟಕ ಅಧ್ಯಕ್ಷ ಸಾಗರ್ ತೊರೆನೂರು, ಪ್ರಮುಖರಾದ ಜಯಸ್ವಾಮಿ, ರಾಕೇಶ್, ರವಿ, ನಾಗೇಶ್ ಪೂಜಾರಿ ಸೇರಿದಂತೆ ವಿವಿಧ ಘಟಕದ ಪದಾಧಿಕಾರಿಗಳು ಇದ್ದರು.

Related Articles

Leave a Reply

Your email address will not be published. Required fields are marked *

Back to top button
error: Content is protected !!