ಪ್ರತಿಭಟನೆ

ಕೇಂದ್ರ ಸರಕಾರದ ವಿರುದ್ದ ಕುಶಾಲನಗರದಲ್ಲಿ ಕಾಂಗ್ರೆಸ್ ಪ್ರತಿಭಟನೆ

ಕುಶಾಲನಗರ ಆ 3: ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ದ ಕೇಂದ್ರದ ಬಿಜೆಪಿ ಸರಕಾರ ಪಿತೂರಿ ನಡೆಸುತ್ತಿದೆ ಎಂದು ಆರೋಪಿಸಿ ಕುಶಾಲನಗರ ಬ್ಲಾಕ್ ಕಾಂಗ್ರೆಸ್ ವತಿಯಿಂದ ಕುಶಾಲನಗರದಲ್ಲಿ ಬಿಜೆಪಿ ವಿರುದ್ದ ಪ್ರತಿಭಟನೆ ನಡೆಯಿತು.
ಕಾಂಗ್ರೆಸ್ ಕಛೇರಿಯಿಂದ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ವೃತ್ತದವರೆಗೆ ಪ್ರತಿಭಟನಾಕಾರರು ಮೆರವಣಿಗೆ ನಡೆಸಿದರು. ಕಾರ್ಯಪ್ಪ ವೃತ್ತದಲ್ಲಿ ಮಾನವ ಸರಪಳಿ ರಚಿಸಿ ಕೆಲಕಾಲ‌ ರಸ್ತೆ ತಡೆ ನಡೆಸಿ ಆಕ್ರೋಷ ವ್ಯಕ್ತಪಡಿಸಲಾಯಿತು.
ಕೇಂದ್ರದ ಬಿಜೆಪಿ‌ ನಾಯಕರಾದ ನರೇಂದ್ರ ಮೋದಿ, ಅಮಿತ್ ಶಾ, ಸಂವಿಧಾನ ವಿರೋಧಿ ಕಾರ್ಯ ನಡೆಸುತ್ತಿದ್ದಾರೆ. ಕರ್ನಾಟಕದ ರಾಜ್ಯಪಾಲರು ಕೇಂದ್ರದ ಕೈಗೊಂಬೆಯಂತೆ ವರ್ತಿಸುತ್ತಿದ್ದಾರೆ ಎಂದು ಆರೋಪಿಸಿ ಧಿಕ್ಕಾರ ಕೂಗಿದರು.
ನಂತರ ತಹಸೀಲ್ದಾರ್ ಕಛೇರಿಗೆ ಮೆರವಣಿಗೆ ‌ಮೂಲಕ ತೆರಳಿ ಮನವಿ ಸಲ್ಲಿಸಲಾಯಿತು.
ಈ ಸಂದರ್ಭ ಪ್ರತಿಭಟನಾಕಾರರನ್ನು ಉದ್ದೇಶಿಸಿ‌ ಮಾತನಾಡಿದ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಿ.ಪಿ.ಶಶಿಧರ್, ಅಧಿಕಾರ ಕೈತಪ್ಪಿ ಹೋದ ಕಡೆಗಳಲ್ಲಿ ಬಿಜೆಪಿ‌ ವಾಮಮಾರ್ಗದ ಮೂಲಕ ಅಧಿಕಾರ ಪಡೆಯುವ ಯತ್ನ ನಡೆಸುವುದು ಸಾಮಾನ್ಯ. ಬಿಜೆಪಿ ವಿರುದ್ದ ದನಿ ಎತ್ತಿದರೆ ಅವರ ವಿರುದ್ದ ಪಿತೂರಿ ನಡೆಸಿ ಪ್ರಕರಣ ದಾಖಲಿಸುವ ಪ್ರವೃತ್ತಿ ಹೊಂದಿರುವ ಕೇಂದ್ರ ಸರಕಾರ ಕರ್ನಾಟಕದ ಮುಖ್ಯಮಂತ್ರಿ ವಿರುದ್ದ ಇ.ಡಿ.,ಸಿಬಿಐ ಅನ್ನು ದುರ್ಬಳಕೆ ಮಾಡಿಕೊಂಡು‌ ಹತ್ತಿಕ್ಕುವ ಪ್ರಯತ್ನ ನಡಸುತ್ತಿರುವುದು ಖಂಡನೀಯ. ಯಾವುದೇ ಭ್ರಷ್ಟಾಚಾರವಿಲ್ಲದ ಪ್ರಕರಣ ಬಳಸಿಕೊಂಡು‌ ಸಿದ್ದರಾಮಯ್ಯ ಅವರನ್ನು ಹತ್ತಿಕ್ಕಲು‌ ಮುಂದಾಗಿರುವ ಕೇಂದ್ರ ಸರಕಾರದ ಅವರ ವಿರುದ್ದ ಹಮ್ಮಿಕೊಂಡಿರುವ ಮೈಸೂರು ಛಲೋ ಆಂದೋಲನ ಅರ್ಥಹೀನ ಎಂದರು.
ಪ್ರತಿಭಟನೆಯಲ್ಲಿ ಕುಶಾಲನಗರ ಯೋಜನಾ ಪ್ರಾಧಿಕಾರ ಅಧ್ಯಕ್ಷ ಪ್ರಮೋದ್ ಮುತ್ತಪ್ಪ, ಕೆಪಿಸಿಸಿ ಸದಸ್ಯರಾದ ಮಂಜುನಾಥ್ ಗುಂಡುರಾವ್, ನಟೇಶ್ ಗೌಡ, ಪ್ರಮುಖರಾದ ಶಿವಶಂಕರ್, ಕಿರಣ್, ಪದ್ಮಾ, ಜಗದೀಶ್, ಶಾಜಿ, ಖಲೀಮುಲ್ಲಾ, ಟಿ.ಪಿ.ಹಮೀದ್, ನವೀನ್ ಗೌಡ, ಅಣ್ಣಯ್ಯ ರಫೀಕ್, ಶಿವಮ್ಮ, ಕೃಷ್ಣೇಗೌಡ, ಶೇಖರ್,
ಆದಂ, ರೋಷನ್ ‌ಮತ್ತಿತರರು ಇದ್ದರು.

Related Articles

Leave a Reply

Your email address will not be published. Required fields are marked *

Back to top button
error: Content is protected !!