ಕ್ರೈಂ

ನೆಲ್ಲಿಹುದಿಕೇರಿಯಲ್ಲಿ ಅಕ್ರಮವಾಗಿ ನಿಷೇಧಿತ ಮಾದಕ ವಸ್ತು ಸರಬರಾಜು/ಮಾರಾಟ: ಇಬ್ಬರ ಬಂಧನ

ಕುಶಾಲನಗರ, ಆ 14: ಸಿದ್ದಾಪುರ ಪೊಲೀಸ್ ಠಾಣಾ ವ್ಯಾಪ್ತಿಯ ನೆಲ್ಲಿಹುದಿಕೇರಿ ಗ್ರಾಮದ ಎಂ.ಜಿ ಕಾಲೋನಿಯಲ್ಲಿ ಅಕ್ರಮವಾಗಿ ನಿಷೇಧಿತ ಮಾದಕ ವಸ್ತು ಗಾಂಜಾ ಸರಬರಾಜು/ಮಾರಾಟ ಮಾಡುತಿದ್ದ ವ್ಯಕ್ತಿಗಳನ್ನು ಪತ್ತೆ ಹಚ್ಚುವಲ್ಲಿ ಕೊಡಗು ಜಿಲ್ಲಾ ಪೊಲೀಸ್ ಯಶಸ್ವಿಯಾಗಿದೆ.

ಕೊಡಗು ಜಿಲ್ಲಾ ವ್ಯಾಪ್ತಿಯಲ್ಲಿ ಮಾದಕ ವಸ್ತುಗಳ ಮಾರಾಟದ ಬಗ್ಗೆ ನಮ್ಮ ಕಛೇರಿ ಠಾಣೆಗಳಿಗೆ ಸಾರ್ವಜನಿಕರಿಂದ ದೂರು ಬರುತ್ತಿದ್ದು, ನಿಷೇಧಿತ ಮಾದಕ ವಸ್ತುಗಳ ಮಾರಾಟ/ಸರಬರಾಜು/ ಬಳಕೆಯನ್ನು ತಡೆಗಟ್ಟುವ ಹಿನ್ನೆಲೆಯಲ್ಲಿ ಶ್ರೀ ಮಹೇಶ್ ಕುಮಾರ್, ಡಿಎಸ್‌ ಪಿ, ಮಡಿಕೇರಿ ಉಪವಿಭಾಗ, ಶ್ರೀ ರಾಜು, ಸಿಪಿಐ, ಮಡಿಕೇರಿ ನಗರ ವೃತ್ತ ಹಾಗೂ ಶ್ರೀ ರಾಘವೇಂದ್ರ, ಪಿಎಸ್‌ಐ, ಸಿದ್ದಾಪುರ ಪೊಲೀಸ್ ಠಾಣೆ ಮತ್ತು ಸಿಬ್ಬಂದಿಗಳ ತಂಡವನ್ನು ರಚಿಸಿ ತನಿಖೆ ಕೈಗೊಂಡು ಮಾಹಿತಿ ಸಂಗ್ರಹಿಸಿ ದಿ: 13-08-2024 ರಂದು ನೆಲ್ಲಿಹುದಿಕೇರಿಯ ಎಂ.ಜಿ ಕಾಲೋನಿ ರಸ್ತೆಯಲ್ಲಿ TATA ACE GOODS ವಾಹನದಲ್ಲಿ ನಿಷೇಧಿತ ಮಾದಕ ವಸ್ತುವನ್ನು ಸರಬರಾಜು/ಮಾರಾಟ ಮಾಡುತ್ತಿರುವ ಕುರಿತು ಖಚಿತ ಮಾಹಿತಿ ಹಿನ್ನಲೆಯಲ್ಲಿ ಧಾಳಿ ನಡೆಸಿ ನೆಲ್ಲಿಹುದಿಕೇರಿ ಗ್ರಾಮದ ನಿವಾಸಿಗಳಾದ ಪ್ರದೀಶ್, 30 ವರ್ಷ ಮತ್ತು ಫಾರೂಕ್, 28 ವರ್ಷ ಎಂಬುವವರನ್ನು 191 ಗ್ರಾಂ ಗಾಂಜಾ ನಿಷೇಧಿತ ಮಾದಕ ವಸ್ತುವಿನೊಂದಿಗೆ ದಸ್ತಗಿರಿ ಮಾಡಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿರುತ್ತದೆ ಹಾಗೂ ಕೃತ್ಯಕ್ಕೆ ಬಳಸಿದ TATA ACE GOODS ವಾಹನವನ್ನು ವಶಪಡಿಸಿಕೊಳ್ಳಲಾಗಿರುತ್ತದೆ.

ಸದರಿ ಪ್ರಕರಣದ ಆರೋಪಿಯನ್ನು ಬಂಧಿಸುವಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸಿದ ಅಧಿಕಾರಿ ಹಾಗೂ ಸಿಬ್ಬಂದಿರವರುಗಳನ್ನು ಶ್ರೀ ಕೆ. ರಾಮರಾಜನ್, ಐಪಿಎಸ್, ಪೊಲೀಸ್ ಅಧೀಕ್ಷಕರು, ಕೊಡಗು ಜಿಲ್ಲೆ, ಮಡಿಕೇರಿ ರವರು ಶ್ಲಾಘಿಸಿರುತ್ತಾರೆ.

Related Articles

Leave a Reply

Your email address will not be published. Required fields are marked *

Back to top button
error: Content is protected !!