ಕುಶಾಲನಗರ ಏ 23: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಮಂಗಳವಾರ ಬೆಳಗ್ಗೆ ಕುಶಾಲನಗರದಲ್ಲಿ ಪೊಲೀಸ್ ಪಥ ಸಂಚಲನ ನಡೆಯಿತು.
ಕುಶಾಲನಗರ ಬೈಚನಹಳ್ಳಿ ಪೆಟ್ರೋಲ್ ಬಂಕ್ ಬಳಿಯಿಂದ ಹೊರಟ ಪಥ ಸಂಚಲನ ಕಾರ್ಯಕ್ರಮಕ್ಕೆ ಕೊಡಗು ಜಿಲ್ಲಾ ಪೊಲೀಸ್ ಹೆಚ್ಚುವರಿ ವರಿಷ್ಠಾಧಿಕಾರಿ ಸುಂದರ್ ರಾಜ್ ಅವರು ಚಾಲನೆ ನೀಡಿದರು.
ಸೋಮವಾರಪೇಟೆ ಪೊಲೀಸ್ ಉಪವಿಭಾಗದ ಡಿ ವೈ ಎಸ್ ಪಿ ಆರ್ ವಿ ಗಂಗಾಧರಪ್ಪ ಅವರ ನೇತೃತ್ವದಲ್ಲಿ ಏಳು ಮಂದಿ ಇನ್ಸ್ಪೆಕ್ಟರ್ ಗಳು, ಉಪ ನಿರೀಕ್ಷಕ ಅಧಿಕಾರಿಗಳು ಸಿಬ್ಬಂದಿಗಳು, ಜಿಲ್ಲಾ ಮೀಸಲು ಪಡೆಯ ಸಿಬ್ಬಂದಿಗಳು, ಮತ್ತು ಗುಜರಾತ್ ರಾಜ್ಯದ ವಿಶೇಷ ಭದ್ರತಾ ಪಡೆ ಹಿರಿಯ ಅಧಿಕಾರಿಗಳು, ಯೋಧರು ಸೇರಿದಂತೆ ಸುಮಾರು 300ಕ್ಕೂ ಅಧಿಕ ಪೊಲೀಸರು ಕುಶಾಲನಗರ ಪಟ್ಟಣ ಮುಖ್ಯ ರಸ್ತೆ ಹಾಗೂ ವಿವಿಧ ಬಡಾವಣೆಗಳಲ್ಲಿ ಪಥ ಸಂಚಲನ ನಡೆಸಿದರು.
Back to top button
error: Content is protected !!