ಕ್ರೈಂ

ಅಕ್ರಮವಾಗಿ ನಾಡ ಬಂದೂಕುಗಳನ್ನು ತಯಾರಿಸಿ ಮಾರಾಟ: ಆರೋಪಿಗಳ‌ ಬಂಧನ

ಕುಶಾಲನಗರ, ಆ 15: ಭಾಗಮಂಡಲ ಪೊಲೀಸ್ ಠಾಣಾ ವ್ಯಾಪ್ತಿಯ ಸಣ್ಣಪುಲಿಕೋಟು ಗ್ರಾಮದ ಮನೆಯೊಂದರಲ್ಲಿ ಅಕ್ರಮವಾಗಿ ನಾಡ ಬಂದೂಕುಗಳನ್ನು ತಯಾರಿಸಿ ಮಾರಾಟ ಮಾಡುತ್ತಿರುವ ಖಚಿತ ಮಾಹಿತಿ ಹಿನ್ನೆಲೆಯಲ್ಲಿ  ಮಹೇಶ್ ಕುಮಾರ್, ಡಿಎಸ್‌ಪಿ, ಮಡಿಕೇರಿ ಉಪವಿಭಾಗ,  ಅನೂಪ್ ಮಾದಪ್ಪ, ಸಿಪಿಐ, ಮಡಿಕೇರಿ ಗ್ರಾಮಾಂತರ ವೃತ್ತ, &  ಶೋಭಾ ಲಾಮಾಣಿ, ಪಿಎಸ್‌ಐ, ಭಾಗಮಂಡಲ ಪೊಲೀಸ್ ಠಾಣೆ ಹಾಗೂ ಸಿಬ್ಬಂದಿಗಳ ವಿಶೇಷ ತಂಡವನ್ನು ರಚಿಸಿ ತನಿಖೆ ಕೈಗೊಂಡು ಮಾಹಿತಿ ಸಂಗ್ರಹಿಸಿ ದಿನಾಂಕ: 15-08-2024 ರಂದು ಸಣ್ಣಪುಲಿಕೋಟು ಗ್ರಾಮದ ಬಾಡಿಗೆ ಮನೆಯಲ್ಲಿ ವಾಸವಿದ್ದ ಕೇರಳ ರಾಜ್ಯ ಇಡುಕ್ಕಿ ಜಿಲ್ಲೆ ಮೂಲದ ಸುರೇಶ್ ಎಂಬಾತನ ಮನೆಯ ಮೇಲೆ ಧಾಳಿ ನಡೆಸಿ ಅಕ್ರಮವಾಗಿ ನಾಡ ಬಂದೂಕು ತಯಾರಿಸಲು ಬಳಸುತ್ತಿದ್ದ ಸಾಮಾಗ್ರಿಗಳು & 02 – ನಾಡ ಬಂದೂಕು(ಎಸ್.ಬಿ.ಬಿ.ಎಲ್) ಹಾಗೂ 01 ನಾಡ ಪಿಸ್ತೂಲ್ ಅನ್ನು ವಶಪಡಿಸಿಕೊಂಡು ಭಾಗಮಂಡಲ ಪೊಲೀಸ್ ಠಾಣೆಯಲ್ಲಿ ಕಲಂ: 3, 25 Indian Arms Act ಅಡಿಯಲ್ಲಿ ಪ್ರಕರಣ ದಾಖಲಿಸಿ ಆರೋಪಿ ಸುರೇಶ್, 52 ವರ್ಷ ಎಂಬಾತನನ್ನು ಹಾಗೂ ಆರೋಪಿ ಸುರೇಶ್ ಅಕ್ರಮವಾಗಿ ತಯಾರಿಸಿರುವ ನಾಡ ಬಂದೂಕುಗಳನ್ನು ಖರೀದಿ ಮಾಡಿದ್ದ 1) ಎನ್.ಜೆ.ಶಿವರಾಮ, 45 ವರ್ಷ, ಚೇತುಕಾಯ ಗ್ರಾಮ, ಕರಿಕೆ, 2) ಎಸ್.ರವಿ, 35 ವರ್ಷ, ಮಾಗಳಿ ಗ್ರಾಮ, ಪಿರಿಯಾಪಟ್ಟಣ, ಮತ್ತು 3) ಕೋಟಿ, 55 ವರ್ಷ, ದೊಡ್ಡಪುಲಿಕೋಟು, ಭಾಗಮಂಡಲ ರವರುಗಳಿಂದ ತಲಾ ಒಂದು ನಾಡ ಬಂದೂಕು (ಎಸ್.ಬಿ.ಬಿ.ಎಲ್) ಅನ್ನು ವಶಪಡಿಸಿಕೊಂಡು ದಸ್ತಗಿರಿ ಮಾಡಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿರುತ್ತದೆ ಹಾಗೂ ಒಟ್ಟು 05 – ನಾಡ ಬಂದೂಕು(ಎಸ್.ಬಿ.ಬಿ.ಎಲ್) ಹಾಗೂ 01 – ನಾಡ ಪಿಸ್ತೂಲ್ ಅನ್ನು ವಶಪಡಿಸಿಕೊಳ್ಳಲಾಗಿರುತ್ತದೆ.

ಸದರಿ ಪ್ರಕರಣದ ಆರೋಪಿಗಳನ್ನು ಬಂಧಿಸುವಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸಿದ ಅಧಿಕಾರಿ ಹಾಗೂ ಸಿಬ್ಬಂದಿರವರುಗಳನ್ನು  ಕೆ. ರಾಮರಾಜನ್, ಐಪಿಎಸ್, ಪೊಲೀಸ್ ಅಧೀಕ್ಷಕರು, ಕೊಡಗು ಜಿಲ್ಲೆ, ಮಡಿಕೇರಿ ರವರು ಶ್ಲಾಘಿಸಿರುತ್ತಾರೆ.

Related Articles

Leave a Reply

Your email address will not be published. Required fields are marked *

Back to top button
error: Content is protected !!