ಸಭೆ

ಕೂಡುಮಂಗಳೂರು ಗ್ರಾಪಂ ಮಾಸಿಕ ಸಭೆ: 15ನೇ ಹಣಕಾಸು ಕ್ರಿಯಾ ಯೋಜನೆಗೆ ಅನುಮೋದನೆ

ಕುಶಾಲನಗರ ಸೆ 30: ಕೂಡುಮಂಗಳೂರು ಗ್ರಾಮ ಪಂಚಾಯತಿ ಮಾಸಿಕ ಸಭೆಯು ಗ್ರಾಮ ಪಂಚಾಯತಿ ಅಧ್ಯಕ್ಷ ಭಾಸ್ಕರ್ ನಾಯಕ್ ಅಧ್ಯಕ್ಷತೆಯಲ್ಲಿ ಪಂಚಾಯತಿ ಸಭಾಂಗಣದಲ್ಲಿ ನಡೆಯಿತು.
ಸಭೆಯಲ್ಲಿ ಅಭಿವೃದ್ಧಿಗೆ ಪೂರಕವಾದ ಅಂಶಗಳ ಬಗ್ಗೆ ಮೊದಲು ಚರ್ಚೆಗಳನ್ನು ನಡೆಸಿ ನಂತರ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಈಗಾಗಲೇ ಕೈಗೊಂಡಿರುವ ಸ್ವಚ್ಛತೆಗೆ ಪೂರಕವಾಗಿ ಮತ್ತು ಮುಂದಿನ ದಿನಗಳಲ್ಲಿ ಕುಡಿಯುವ ನೀರಿನ ಟ್ಯಾಂಕ್ ಗಳ ಶುದ್ಧೀಕರಣ, ಸ್ವಚ್ಚತೆಗೆ ಹೆಚ್ಚಿನ ಅದ್ಯತೆ ನೀಡುವ ಬಗ್ಗೆ ಚರ್ಚೆಗಳು ನಡೆದವು.  ಬಸವತ್ತೂರು ಗ್ರಾಮದಲ್ಲಿರುವ ಆನೆ ಕೆರೆಯ ಸಮೀಪದಲ್ಲಿ ಕೋಳಿ ತ್ಯಾಜ್ಯವನ್ನು ಹಾಕುತ್ತಿರುವ ಬಗ್ಗೆ ಚರ್ಚೆಗಳು ನಡೆದವು. 15ನೇ ಹಣಕಾಸು ಯೋಜನೆಯ ಕಾಮಗಾರಿಗಳ ಕ್ರಿಯಾ ಯೋಜನೆಯ ಅನುಮೋದನೆ ಮತ್ತು ಬಾಕಿ ಇರುವ ಕಾಮಗಾರಿಗಳನ್ನು ಪೂರ್ಣಗೊಳಿಸಯವ ಸಂಬಂಧ ಚರ್ಚೆಗಳು ನಡೆದವು.
ಜಲ ಜೀವನ್ ಕುಡಿಯುವ ನೀರಿನ ಯೋಜನೆಯನ್ನು ಸಂಪೂರ್ಣವಾಗಿ ಪೂರ್ಣಗೊಳಿಸಲು ಸಭೆಯಲ್ಲಿ ಹಾಜರಿದ್ದ ಸದಸ್ಯರು ಒತ್ತಾಯ ಮಾಡಿದರು.  ಈಗಾಗಲೇ ಕೈಗೊಂಡಿರುವ ಕ್ರಿಯಾ ಯೋಜನೆಯ ಅನುಮೋದನೆ ಕಾಮಗಾರಿಗಳನ್ನು ಪೂರ್ಣಗೊಳಿಸುವ ಬಗ್ಗೆ ವಿಷಯಗಳ ಪ್ರಸ್ತಾವನೆ ನಡೆಸಿ ಗ್ರಾಮದ ಅಭಿವೃದ್ಧಿಗೆ ಸಂಬಂಧಿಸಿದಂತೆ ವಿವಿಧ ಯೋಜನೆಗಳ ತಯಾರಿಸುವ ಚರ್ಚೆಗಳು ನಡೆದವು. ಹಾಜರಿದ್ದ ಸದಸ್ಯರು ತಮ್ಮ ತಮ್ಮ ವಾರ್ಡ್ ನ ಅಭಿವೃದ್ಧಿಯ ಯೋಜನೆಗೆ ಸಂಬಂಧಿಸಿದ ಅಭಿಪ್ರಾಯ ವ್ಯಕ್ತಪಡಿಸಿದರು. ಬಾಕಿ ಇರುವ ಮನೆಗಳ ನಿರ್ಮಾಣದ ಬಗ್ಗೆ ಚರ್ಚೆಗಳು ನಡೆದವು.
ಸಭೆಯಲ್ಲಿ ಅಭಿವೃದ್ಧಿ ಅಧಿಕಾರಿ ಸಂತೋಷ್, ಸರಕಾರದ ಹೊಸ ಯೋಜನೆಗಳ ಬಗ್ಗೆ ಮಾಹಿತಿ ನೀಡಿದರು‌ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಗಳ ಬಗ್ಗೆ ಸಮಗ್ರವಾದ ಮಾಹಿತಿಯನ್ನು ನೀಡಿ ಗ್ರಾಮ ಪಂಚಾಯತಿ ವತಿಯಿಂದ ಕೈಗೊಳ್ಳಲಾಗುವ ಕಾಮಗಾರಿಗಳನ್ನು ಅನುಷ್ಠಾನಗೊಳಿಸಲು ಸಂಪೂರ್ಣವಾದ ಮಾಹಿತಿಯನ್ನು ನೀಡಿದರು. ಸಭೆಗೆ ಬಂದ ಸಾರ್ವಜನಿಕರ ಅರ್ಜಿಗಳ ಬಗ್ಗೆ ಚರ್ಚೆಗಳು ನಡೆದವು.
ಈ ಸಂದರ್ಭದಲ್ಲಿ ಉಪಾಧ್ಯಕ್ಷೆ ಶಶಿಕಲಾ ಸದಸ್ಯರು ಹಾಜರಿದ್ದರು.

Related Articles

Leave a Reply

Your email address will not be published. Required fields are marked *

Back to top button
error: Content is protected !!