ಕುಶಾಲನಗರ, ಆ 23: ಪುರಸಭೆಯಲ್ಲಿ ಅಧಿಕಾರ ದೊರೆಯದ ಹಿನ್ನಲೆಯಲ್ಲಿ ಮುಳ್ಳುಸೋಗೆ ಗ್ರಾಮಪಂಚಾಯಿತಿಯ ಅಸಮಾಧಾನಿತ ಮಾಜಿ ಜನಪ್ರತಿನಿಧಿಗಳು ವಿನಾಕಾರಣ ಹಾಲಿ ಶಾಸಕರ ಮೇಲೆ ಆರೋಪ ಮಾಡಿತ್ತಿರುವುದು ಹಾಸ್ಯಾಸ್ಪದ ಎಂದು ಕುಶಾಲನಗರ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ವಿ.ಪಿ.ಶಶಿಧರ್ ಆರೋಪಿಸಿದ್ದಾರೆ.
ಕುಶಾಲನಗರದಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಕುಶಾಲನಗರ ಪುರಸಭೆ ವ್ಯಾಪ್ತಿಗೆ ಸೇರ್ಪಡೆಗೊಂಡಿರುವ ಮುಳ್ಳುಸೋಗೆ ಗ್ರಾಮವನ್ನು ಅಭಿವೃದ್ಧಿ ದೃಷ್ಟಿಯಿಂದ ಕಡೆಗಣಿಸಲಾಗುತ್ತಿದೆ ಎಂಬ ಆರೋಪ ಸಮಂಜಸವಲ್ಲ. ಕಳೆದ ಎರಡು ವರ್ಷಗಳ ಹಿಂದೆ ಪುರಸಭೆಯಾಗಿ ಮೇಲ್ದರ್ಜೆಗೇರಿಸಬೇಕು ಎಂಬ ಉದ್ದೇಶದಿಂದ ಮುಳ್ಳುಸೋಗೆ ಗ್ರಾಮ ಪಂಚಾಯತಿ ಸದಸ್ಯರು ಹಾಗೂ ಗ್ರಾಮಸ್ಥರು ಸ್ವಯಂ ಪ್ರೇರಣೆಯಿಂದ ಒಪ್ಪಿಗೆ ಸೂಚಿಸಿದ್ದಾರೆ.
ಇದೀಗ ಮಾಜಿ ಜನಪ್ರತಿನಿಧಿಗಳಾದ ಶಿವಾನಂದ, ಆಸಿಫ್, ರಾಜೇಶ್ ಅವರು, ಕುಶಾಲನಗರ ಪುರಸಭೆ ಅಭಿವೃದ್ಧಿಗೆ ಶ್ರಮಿಸುತ್ತಿರುವ ಶಾಸಕರ ಮಂತರ್ ಗೌಡ ಅವರನ್ನು ರಾಜಕೀಯ ಲಾಭಕ್ಕಾಗಿ ಚುನಾವಣೆ ಗೆ ಬೆಂಬಲ ನೀಡುತ್ತಿದ್ದಾರೆ ಎಂದು ನೀಡಿರುವ ಹೇಳಿಕೆ ಬಾಲಿಶವಾಗಿದೆ ಎಂದು ಟೀಕಿಸಿದರು.
ಮಡಿಕೇರಿ ಕ್ಷೇತ್ರದ ಶಾಸಕರಾಗಿ ಡಾ.ಮಂತರ್ ಗೌಡ ಅವರು ಆಯ್ಕೆಯಾದ ಮೇಲೆ ಮುಳ್ಳುಸೋಗೆ ವ್ಯಾಪ್ತಿಯ ಐವರು ಸದಸ್ಯರನ್ನು ಪುರಸಭೆಗೆ ನಾಮನಿರ್ದೇಶನ ಮಾಡಿದ್ದಾರೆ. ಜೊತೆಗೆ ಮುಳ್ಳುಸೋಗೆ ಗ್ರಾಮದ ಅಭಿವೃದ್ಧಿ ಶ್ರಮಿಸುತ್ತಿದ್ದಾರೆ.
ಮುಳ್ಳುಸೋಗೆ ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷ ಎಂ.ಎಸ್.ಶಿವಾನಂದ ಅವರು ಕುಶಾಲನಗರ ಪಂಚಾಯಿತಿ ಚುನಾವಣೆಗೆ ಹೈಕೋರ್ಟ್ ನಿಂದ ತಡೆಯಾಜ್ಞೆ ತಂದಿದ್ದಾರೆ. ಜೊತೆಗೆ ನ್ಯಾಯಾಲಯವು ಪುರಸಭೆಯ ಎರಡನೇ ಹಂತದ ಅಧ್ಯಕ್ಷ ,ಉಪಾಧ್ಯಕ್ಷರ ಚುನಾವಣೆಗೆ ಹೊಸದಾಗಿ ನೋಟಿಫಿಕೇಷನ್ ಹೊರಡಿಸಿ ಚುನಾವಣೆ ನಡೆಸುವಂತೆ ತಿಳಿಸಿದೆ. ಆದರೆ ನ್ಯಾಯಾಲಯದ ತೀರ್ಪು ಅನ್ನು ಸರಿಯಾಗಿ ಅರ್ಥ ಮಾಡಿಕೊಳ್ಳದೆ ನ್ಯಾಯಾಂಗ ನಿಂದನೆ ಮಾಡುತ್ತಿದ್ದಾರೆ. ತಮ್ಮನ್ನು ಹೊರತುಪಡಿಸಿ ಇತರೆ ಕೆಲವು ಸದಸ್ಯರನ್ನು ಪುರಸಭೆಗೆ ನಾಮನಿರ್ದೇಶನ ಮಾಡಿದ ಕಾರಣ ಈ ರೀತಿ ಆರೋಪಿಸುವುದು ಸರಿಯಲ್ಲ ಎಂದರು.
ಗೋಷ್ಠಿಯಲ್ಲಿದ್ದ ಪುರಸಭೆ ನಾಮನಿರ್ದೇಶಿತ ಸದಸ್ಯರಾದ ಜಗದೀಶ್, ಎಂ.ಎಂ.ಪ್ರಕಾಶ್, ಎಂ.ವಿ.ಹರೀಶ್, ನವೀನ್ ಗೌಡ, ಪದ್ಮಾ ಅವರು, ಹಾಲಿ ಶಾಸಕರ ಕಾರ್ಯವೈಖರಿ ಬೆಂಬಲಿಸಿದ್ದು, ಮುಳ್ಳುಸೋಗೆ ಭಾಗಕ್ಕೆ ಅಲ್ಪ ಅವಧಿಯಲ್ಲಿ ಹಲವು ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕರು ಅನುದಾನ ಒದಗಿಸಿದ್ದಾರೆ. ಬೇಸಿಗೆ, ಮಳೆಗಾಲದಲ್ಲಿ ಸಮಸ್ಯೆಗಳಿಗೆ ಸ್ಪಂದಿಸಿ ಮುಳ್ಳುಸೋಗೆ ಭಾಗಕ್ಕೆ ಯಾವುದೇ ಕೊರತೆಯಾಗದಂತೆ ಎಚ್ಚರವಹಿಸುತ್ತಿದ್ದಾರೆ. ಈ ನಿಟ್ಟಿನಲ್ಲಿ ನಾವೂ ಕೂಡ ಜನಸಾಮಾನ್ಯರ ಸಮಸ್ಯೆಗಳಿಗೆ ಸ್ಪಂದಿಸುತ್ತಿದ್ದೇವೆ ಎಂದರು.
Back to top button
error: Content is protected !!