ಕುಶಾಲನಗರ, ಅ 17:ತಲಕಾವೇರಿ ಕ್ಷೇತ್ರದಲ್ಲಿ ಪವಿತ್ರ ತೀರ್ಥೋದ್ಭವ ಹಿನ್ನೆಲೆಯಲ್ಲಿ ಕುಶಾಲನಗರ ಶ್ರೀ ಅಯ್ಯಪ್ಪ ಸ್ವಾಮಿ ದೇವಾಲಯ ಕಾವೇರಿ ಆರತಿ ಕ್ಷೇತ್ರದಲ್ಲಿ ಜೀವನದಿಗೆ 164 ನೇಯ ಮಹಾ ಆರತಿ ಮತ್ತು ವಿಶೇಷ ಪೂಜಾ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.
ಕಾವೇರಿ ಮಹಾ ಆರತಿ ಬಳಗದ ಆಶ್ರಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ಅರ್ಚಕರಾದ ಕೃಷ್ಣಮೂರ್ತಿ ಭಟ್ ಅವರು ಬೆಳಗ್ಗೆ 7 ಗಂಟೆಯಿಂದ ಕುಂಕುಮಾರ್ಚನೆ ಅಷ್ಟೋತ್ತರ ನಂತರ ನದಿಗೆ ಸಾಮೂಹಿಕವಾಗಿ ಆರತಿ ಬೆಳಗಿ ಪ್ರಾರ್ಥನೆ ಸಲ್ಲಿಸಲಾಯಿತು.
ಈ ಸಂದರ್ಭ ಆರತಿ ಬಳಗದ ಪ್ರಮುಖರಾದ ವನಿತಾ ಚಂದ್ರಮೋಹನ್,
ಮಂಡೆಪಂಡ ಬೋಸ್ ಮೊಣ್ಣಪ್ಪ, ಡಿ ಆರ್ ಸೋಮಶೇಖರ್, ವಿ ಡಿ ಪುಂಡರಿಕಾಕ್ಷ, ಧರಣಿ ಸೋಮಯ್ಯ ಎ ಪಿ ಸುಬ್ಬಯ್ಯ,ಮತ್ತು ಸ್ಥಳೀಯ ದೇವಾಲಯಗಳ ಸಮಿತಿ ಸದಸ್ಯರು ಇದ್ದರು.
Back to top button
error: Content is protected !!