ಕುಶಾಲನಗರ, ಆ 26: ಕುಶಾಲನಗರದ ಸಂಚಾರಿ ಪೊಲೀಸ್ ಠಾಣೆಯ ನೂತನ ಠಾಣಾಧಿಕಾರಿ ಗಣೇಶ್ ಅವರ ಠಾಣಾ ವ್ಯಾಪ್ತಿಯಲ್ಲಿ ಸಂಚಾರಿ ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಹಲವು ಜಾಗೃತಿ ಕಾರ್ಯಕ್ರಮಗಳನ್ನು ನಿರಂತರವಾಗಿ ಹಮ್ಮಿಕೊಳ್ಳುತ್ತಿದ್ದಾರೆ.
ಸಾರ್ವಜನಿಕ ಸೇವೆಯಲ್ಲಿ ತೊಡಗಿರುವ ಆಟೋ ಚಾಲಕರಿಂದ ಪ್ರಯಾಣಿಕರಿಗೆ ಹಾಗೂ ಇತರೆ ಸವಾರರಿಗೆ ಅನಾನುಕೂಲ ಸೃಷ್ಠಿಯಾಗಬಾರದು ಎಂಬ ಉದ್ದೇಶದಿಂದ ಎಲ್ಲಾ ಆಟೋ ನಿಲ್ದಾಣಗಳಿಗೆ ತೆರಳಿ ಚಾಲಕರನ್ನು ತಪಾಸಣೆಗೆ ಒಳಪಡಿಸಲಾಯಿತು. ಡ್ರಿಂಕ್ & ಡ್ರೈವ್ ಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಈ ತಪಾಸಣೆ ಕಾರ್ಯ ಕೈಗೊಂಡಿದ್ದು ಮದ್ಯ ಸೇವಿಸಿದ್ದ ಚಾಲಕರನ್ನು ಠಾಣೆಗೆ ಕರೆದೊಯ್ಯಲಾಗಿದೆ. ಈ ಕಾರ್ಯಾಚರಣೆ ನಿರಂತರವಾಗಿ ನಡೆಯಲಿರುವ ಕಾರಣ ಎಲ್ಲರೂ ಎಚ್ಚರವಹಿಸಿ ಸಂಚಾರಿ ನಿಯಮ ಪಾಲನೆಗೆ ಮುಂದಾಗುವಂತೆ ಗಣೇಶ್ ಅವರು ಕೋರಿದ್ದಾರೆ.
Back to top button
error: Content is protected !!