ಕುಶಾಲನಗರ,ಆ 30: ಕೂಡುಮಂಗಳೂರು ಗ್ರಾ.ಪಂ ನ ಸುಂದರನಗರದ ಕಾಫಿ ವರ್ಕ್ಸ್ ಒಂದರಲ್ಲಿ ಕೂಲಿ ಕಾರ್ಮಿಕನೋರ್ವ ಸಾವನ್ನಪ್ಪಿದ್ದು, ಪೊಲೀಸ್ ಇಲಾಖೆ ಸೂಕ್ತ ರೀತಿಯಲ್ಲಿ ತನಿಖೆ ನಡೆಸಬೇಕು ಎಂದು ಕೂಡುಮಂಗಳೂರು ಗ್ರಾ.ಪಂ ಕೆ.ಬಿ.ಶಂಶುದ್ಧೀನ್ ಮತ್ತಿತರರು ಆಗ್ರಹಿಸಿದ್ದಾರೆ.
ಕುಶಾಲನಗರದ ಡಿ.ವೈ.ಎಸ್.ಪಿ ಕಚೇರಿ ಮುಂಭಾಗ ಪತ್ರಕರ್ತರೊಡನೆ ಮಾತನಾಡಿದ ಅವರು, ಸುಂದರನಗರದ ಉಮಾ ಕಾಫಿ ವರ್ಕ್ಸ್ ನಲ್ಲಿ ಬಿಹಾರ ರಾಜ್ಯದ ಕೂಲಿ ಕಾರ್ಮಿಕನೋರ್ವ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿದ್ದಾರೆ. ಮೃತ ವ್ಯಕ್ತಿಯ ಮೃತದೇಹವನ್ನು ಖಾಸಗಿ ವ್ಯಕ್ತಿ ಶವಾಗಾರಕ್ಕೆ ತಲುಪಿಸಿರುವುದು ಇನ್ನಷ್ಟು ಅನುಮಾನ ಗಳಿಗೆ ಕಾರಣವಾಗಿದ್ದು, ಪೊಲೀಸರು ಈ ಬಗ್ಗೆ ಸೂಕ್ತ ರೀತಿಯಲ್ಲಿ ತನಿಖೆ ನಡೆಸಬೇಕು. ಈ ಸಾವು ಕೊಲೆಯಾಗಿದ್ದಲ್ಲಿ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು. ಈ ಸ್ಥಿತಿ ಸ್ಥಳೀಯ ಕೂಲಿ ಕಾರ್ಮಿಕರಿಗೆ ಆಗಬಾರದು ಎಂಬ ದೃಷ್ಟಿಯಿಂದ ಪೊಲೀಸರಿಗೆ ಸೂಕ್ತ ರೀತಿಯಲ್ಲಿ ತನಿಖೆ ನಡೆಸುವಂತೆ ಅವರು ಆಗ್ರಹಿಸಿದ್ದಾರೆ.
ಸುಂದರನಗರ ಮುಖಂಡ ಹರೀಶ್ ಮಾತನಾಡಿ, ಕೂಲಿ ಕಾರ್ಮಿಕನ ಸಾವಿನ ಬಗ್ಗೆ ಅನುಮಾನ ಮೂಡಿದ್ದು, ಈ ಬಗ್ಗೆ ಡಿ.ವೈ.ಎಸ್.ಪಿ ಅವರಿಗೆ ದೂರು ನೀಡಲಾಗಿದೆ. ಆದ್ದರಿಂದ ಪೊಲೀಸರು ಈ ಬಗ್ಗೆ ಕ್ರಮ ಕೈಗೊಳ್ಳಬೇಕು ಅವರು ಆಗ್ರಹಿಸಿದ್ದಾರೆ.
ಈ ಸಂದರ್ಭ ಸ್ಥಳೀಯ ನಿವಾಸಿ ಮಾರಿಮುತ್ತು ಇದ್ದರು.
Back to top button
error: Content is protected !!