ಪಿರಿಯಾಪಟ್ಟಣ ಆ 31: ತಾಲೂಕಿನ ಹಿಟ್ನೆ ಹೆಬ್ಬಾಗಿಲು ಗ್ರಾಮದ ಸರ್ಕಾರಿ ಪ್ರೌಢಶಾಲೆ ವಿದ್ಯಾರ್ಥಿಗಳು, ಹೋಬಳಿ ಮಟ್ಟದ ಕ್ರೀಡಾಕೂಟದಲ್ಲಿ ಸಮಗ್ರ ಪ್ರಶಸ್ತಿ ಪಡೆದು ತಾಲ್ಲೂಕು ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗುವ ಮೂಲಕ ಶಾಲೆಗೆ ಮತ್ತು ಗ್ರಾಮಕ್ಕೆ ಕೀರ್ತಿ ತರುವ ಕೆಲಸ ಮಾಡಿದ್ದಾರೆ ಎಂದು ಗ್ರಾಮದ ಮುಖಂಡ ಕೆಇಬಿ ಮಲ್ಲೇಶ್ ತಿಳಿಸಿದರು.
ಹಿಟ್ನೆ ಹೆಬ್ಬಾಗಿಲು ಗ್ರಾಮದ ಪ್ರೌಢಶಾಲೆಯ ಆವರಣದಲ್ಲಿ ಕ್ರೀಡಾಕೂಟದಲ್ಲಿ ಉತ್ತಮ ಸಾಧನೆ ಮಾಡಿ ಗ್ರಾಮಕ್ಕೆ ಕೀರ್ತಿ ತಂದ ವಿದ್ಯಾರ್ಥಿಗಳಿಗೆ ಅಭಿನಂದನೆ ಸಲ್ಲಿಸಿ ಮಾತನಾಡಿದರು.
ಸರ್ಕಾರಿ ಶಾಲೆಗಳೆಂದರೆ ಮೂಗು ಮುರಿಯುವವರ ನಡುವೆಯೇ ಇಂದಿನ ಕಾಲಘಟ್ಟದಲ್ಲಿ ಮಕ್ಕಳ ಶಕ್ತಿ ಸಾಮರ್ಥ್ಯ ತಿಳಿಯದೆ ಕೇವಲ ಬಣ್ಣಬಣ್ಣದ ಬದುಕಿನ ಆಸೆಗಾಗಿ ಖಾಸಗಿ ಶಾಲೆಗಳತ್ತಾ ಮುಖ ಮಾಡುತ್ತಿದ್ದಾರೆ. ಆದರೆ ಪಿರಿಯಾಪಟ್ಟಣ ತಾಲೂಕಿನ ಮಾದರಿ ಶಾಲೆಗಳಲ್ಲಿ ಒಂದು ಹೆಗ್ಗಳಿಕೆಗೆ ಪಾತ್ರವಾಗಿರುವ ಹಿಟ್ನೆ ಹೆಬ್ಬಾಗಿಲು ಸರ್ಕಾರಿ ಪ್ರೌಢಶಾಲೆ ಇದೀಗ ಫುಲ್ ಹೈಟೆಕ್ ಆಗಿದೆ. ವಿಶೇಷ ಎಂದರೆ ಈ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಪ್ರತಿವರ್ಷದಂತೆ ಈ ವರ್ಷವೂ ಕೂಡ ಹೋಬಳಿ ಮಟ್ಟದ ಕ್ರೀಡಾಕೂಟದಲ್ಲಿ ಸಮಗ್ರ ಪ್ರಶಸ್ತಿ ಪಡೆದು ತಾಲ್ಲೂಕು ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿ ಖಾಸಗಿ ಶಾಲೆಗೆ ಸೆಡ್ಡು ಹೊಡೆಯುತ್ತಿದ್ದಾರೆ. ಈ ಶಾಲೆ ಇರುವ ಗ್ರಾಮದಲ್ಲಿ ಹಿಂದುಳಿದ ಸಮುದಾಯದವರೇ ಹೆಚ್ಚಿದ್ದು, ಎಲ್ಲಾ ಪೋಷಕರು ತಮ್ಮ ಮಕ್ಕಳನ್ನು ಈ ಶಾಲೆಗೆ ಸೇರಿಸಿ ಸೇರಿಸುವ ಮೂಲಕ ಸರ್ಕಾರಿ ಶಾಲೆಗಳ ಬಲವರ್ಧನೆಗೆ ಸಹಕಾರಿಯಾಗಿದ್ದಾರೆ ಎಂದರು.
ಈ ಸಂದರ್ಭದಲ್ಲಿ ಕ್ರೀಡಾಂಗಣದಲ್ಲಿ ಪಾಲ್ಗೊಂಡು ಸಮಗ್ರ ಪ್ರಶಸ್ತಿಗೆ ಭಾಜನರಾದ ವಿದ್ಯಾರ್ಥಿಗಳನ್ನು ಅಭಿನಂದಿಸಲಾಯಿತು.
ಈ ಸಂದರ್ಭದಲ್ಲಿ ದೈಹಿಕ ಶಿಕ್ಷಕ ಮದನ್ ಕುಮಾರ್ ಮಾತನಾಡಿ 2024-25 ನೇ ಸಾಲಿನ ಹೋಬಳಿ ಮಟ್ಟದ ಕ್ರೀಡಾಕೂಟದಲ್ಲಿ ನಮ್ಮ ಶಾಲೆಯ ಮಕ್ಕಳು ಬಾಲಕಿಯರ ವಿಭಾಗದಲ್ಲಿ ಥ್ರೋಬಾಲ್, ಖೋಖೋ, ಬಾಲಕರ ವಿಭಾಗದಲ್ಲಿ ಖೋಖೋ ಪ್ರಥಮ ಸ್ಥಾನ ಪಡೆದು ತಾಲ್ಲೂಕು ಮಟ್ಟಕ್ಕೆ ಆಯ್ಕೆಯಾಗಿದ್ದಾರೆ, ಮಣಿಕಂಠ ಎಂಬುವ ವಿದ್ಯಾರ್ಥಿ ಚಕ್ರ ಎಸೆತ, ಗುಂಡು ಎಸೆತ, ತ್ರಿವಿಧ ಜಿಗಿತದಲ್ಲಿ ಪ್ರಥಮ ಹಾಗೂ ದ್ವಿತೀಯ ಸ್ಥಾನ ಪಡೆದು ವೈಯಕ್ತಿಕ ಚಾಂಪಿಯನ್ ಪ್ರಶಸ್ತಿ ಪಡೆದರೆ ಕಾರ್ತಿಕ್ 100 ಮೀಟರ್ ಓಟ, 200 ಮೀಟರ್ ಓಟ, ಶಿವು 1500 ಮೀಟರ್ ಓಟ ಐಶ್ವರ್ಯ ಚಕ್ರ ಎಸೆತ, ಜವೆಲಿನ್ ತ್ರೋ ನಲ್ಲಿ ಬಹುಮಾನ ಪಡೆದು ತಾಲ್ಲೂಕು ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ ಎಂದರು.
ಈ ಸಂದರ್ಭದಲ್ಲಿ ಗ್ರಾಮದ ಮುಖಂಡ ಜಯಶಂಕರ್, ಕನಕ ರಾಜು , ಸುಬ್ರಹ್ಮಣ್ಯ, ಶಿಕ್ಷಕರಾದ ಸುರೇಶ್, ನಂಜುಂಡಸ್ವಾಮಿ, ಕಾಂತೇಶ್ ಮಾನೇಕಾರ್, ಎಸ್‌ಡಿಎಂಸಿ ಸದಸ್ಯರು ಮತ್ತು ಗ್ರಾಮಸ್ಥರು ಉಪಸ್ಥಿತರಿದ್ದರು.
Back to top button
error: Content is protected !!