ರಾಜಕೀಯ
ಸದಸ್ಯತ್ವ ನೊಂದಣಿಯಲ್ಲಿ ಬಿಜೆಪಿ ವಿಶ್ವ ದಾಖಲೆ : ಬಿಜೆಪಿ ತಾಲ್ಲೂಕು ಅಧ್ಯಕ್ಷ ಪಿ.ರಾಜೇಂದ್ರ

ಪಿರಿಯಾಪಟ್ಟಣ ಆ31: ಹೆಚ್ಚಿನ ಸಂಖ್ಯೆಯ ಕಾರ್ಯಕರ್ತರು ಹಾಗೂ ನೊಂದಾವಣಿ ಸದಸ್ಯತ್ವವನ್ನು ಹೊಂದಿರುವ ರಾಜಕೀಯ ಪಕ್ಷಗಳಲ್ಲಿ ಬಿಜೆಪಿ ಪಕ್ಷ ಪ್ರಪಂಚದಲ್ಲಿಯೇ ಮೊದಲ ಸ್ಥಾನದಲ್ಲಿದೆ ಎಂದು ಪಿರಿಯಾಪಟ್ಟಣ ತಾಲೂಕು ಬಿಜೆಪಿ ಘಟಕದ ಅಧ್ಯಕ್ಷ ಪಿ.ರಾಜೇಂದ್ರ ತಿಳಿಸಿದರು.
ಪಟ್ಟಣದ ಬಿಜೆಪಿ ಪಕ್ಷದ ಕಚೇರಿಯಲ್ಲಿ ಬಿಜೆಪಿ ಸದಸ್ಯತ್ವ ಅಭಿಯಾನ 2024 ಮಾಹಿತಿ ಕಾರ್ಯಾಗಾರದಲ್ಲಿ ಮಾತನಾಡಿದರು.
ಈ ಹಿಂದೆ ನಡೆದ ಸದಸ್ಯತ್ವ ನೋಂದಣಿಗಿಂತಲೂ 2024 ರ ಸದಸ್ಯತ್ವ ಅಭಿಯಾನ ಅತಿ ಹೆಚ್ಚಿನ ಸಾಮಾನ್ಯ ಸದಸ್ಯರನ್ನು ಸೇರ್ಪಡೆಗೊಳಿಸುವ ಗುರಿಯನ್ನು ಹೊಂದಲಾಗಿದ್ದು ಪಕ್ಷದ ಕಾರ್ಯಕರ್ತರು ಮುತುವರ್ಜಿಯಿಂದ ಕೆಲಸ ನಿರ್ವಹಿಸಬೇಕು, ಪರಿಣಾಮಕಾರಿಯಾಗಿರುವ ಈ ಬಿಜೆಪಿ ಸದಸ್ಯತ್ವ ನೋಂದಣಿ ಅಭಿಯಾನ ಪರಿಕಲ್ಪನೆಗೆ ಹೆಚ್ಚು ಮಹತ್ವ ದೊರೆತಿರುವ ಕಾರಣಕ್ಕೆ ಕಾಂಗ್ರೆಸ್‌ನವರು ಬಿಜೆಪಿ ಮಾದರಿಯನ್ನು ನಕಲು ಮಾಡುತ್ತಿರುವುದೇ ಸಾಕ್ಷಿಯಾಗಿದೆ. ಸೆ.2 ರಿಂದ ಅಭಿಯಾನ ಆರಂಭಗೊಳ್ಳಲಿದ್ದು, ಪ್ರಧಾನಿ ನರೇಂದ್ರ ಮೋದಿ, ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ರಾಜ್ಯದಲ್ಲಿ ಬಿ.ವೈ.ವಿಜೆಯೇಂದ್ರ ಚಾಲನೆ ನೀಡಲಿದ್ದಾರೆ ಎಂದರು.
ಈ ಸಂದರ್ಭದಲ್ಲಿ ಸದಸ್ಯತ್ವ ಅಭಿಯಾನದ ಜಿಲ್ಲಾ ಉಸ್ತುವಾರಿ ಚಂದ್ರಶೇಖರ್, ಮಾಜಿ ಶಾಸಕ ಹೆಚ್.ಸಿ.ಬಸವರಾಜು, ನಿಕಟಪೂರ್ವ ಅಧ್ಯಕ್ಷ ಎಂ.ಎಂ.ರಾಜೇಗೌಡ, ಕಿರಣ್ ಜಯರಾಂ ಮಾತನಾಡಿದರು.
ಕಾರ್ಯಕ್ರಮದಲ್ಲಿ ಮಾಜಿ ಅಧ್ಯಕ್ಷ ಟಿ.ಜೆ.ರವಿ, ಆರ್.ಟಿ.ಸತೀಶ್, ಪ್ರಧಾನ ಕಾರ್ಯದರ್ಶಿ ಹೆಮ್ಮಿಗೆ ರವಿ ಮುಖಂಡರಾದ ಪಿ.ಕೆ.ರಾಘವೇಂದ್ರ, ಸೋಮಶೇಖರ್, ವಿಕ್ರಂ ರಾಜ್ ಸೇರಿದಂತೆ ಕಾರ್ಯಕರ್ತರು ಉಪಸ್ಥಿತರಿದ್ದರು.



