ಕುಶಾಲನಗರ, ಸೆ 09: ಕೊಡಗು ವಿಶ್ವವಿದ್ಯಾಲಯದ ಸಂಯೋಜಿತ ಮಹಾವಿದ್ಯಾಲಯಗಳಾದ ಸರ್ವೋದಯ ಬಿಎಡ್ ಕಾಲೇಜು ಮತ್ತು ಸಾಯಿ ಶಂಕರ ಬಿಎಡ್ ಕಾಲೇಜುಗಳಲ್ಲಿ 2024-25ನೇ ಶೈಕ್ಷಣಿಕ ಸಾಲಿನಲ್ಲಿ ವ್ಯಾಸಂಗ ಮಾಡುತ್ತಿರುವ ಬಿಎಡ್ ಪ್ರಶಿಕ್ಷಣಾರ್ಥಿಗಳ ಪ್ರಥಮ ಸೆಮಿಸ್ಟರ್ ಫಲಿತಾಂಶವನ್ನು ದಿನಾಂಕ:09.09.2024ರ ಸೋಮವಾರದಂದು ಪ್ರಕಟಿಸಲಾಗಿದೆ.
ಕೊಡಗು ವಿಶ್ವವಿದ್ಯಾಲಯವು ಸ್ನಾತಕ ಪದವಿಗಳ ಫಲಿತಾಂಶವನ್ನು ಅತ್ಯಂತ ಕಡಿಮೆ ಅವಧಿಯಲ್ಲಿ ಪ್ರಕಟಿಸಿದಂತೆಯೇ ಬಿಎಡ್ ಪ್ರಶಿಕ್ಷಣಾರ್ಥಿಗಳ ಫಲಿತಾಂಶವನ್ನು ಯುಜಿಸಿ ನಿಯಮಾನುಸಾರ ಕೂಡ ಶೀಘ್ರವಾಗಿ ಪ್ರಕಟಿಸುವ ಮೂಲಕ ಪರೀಕ್ಷಾ ಮತ್ತು ಮೌಲ್ಯಮಾಪನ ಕಾರ್ಯವನ್ನು ಯಶಸ್ವಿಯಾಗಿ ನಿರ್ವಹಿಸಿದೆ.
ಕೊಡಗು ವಿಶ್ವವಿದ್ಯಾಲಯದ ಕುಲಪತಿಗಳಾಗಿರುವ ಪ್ರೊ. ಅಶೋಕ ಸಂಗಪ್ಪ ಆಲೂರರವರು ಕೊಡಗು ವಿಶ್ವವಿದ್ಯಾಲಯದ ಚೊಚ್ಚಲ ಪ್ರಶಿಕ್ಷಣಾರ್ಥಿಗಳ ಫಲಿತಾಂಶವನ್ನು ಪ್ರಕಟಿಸಿದರು.
ಇದೇ ಸಂದರ್ಭದಲ್ಲಿ ಕೊಡಗು ವಿಶ್ವವಿದ್ಯಾಲಯದ ಕುಲಸಚಿವರು (ಮೌಲ್ಯಮಾಪನ) ಆದ ಪ್ರೊ. ಸುರೇಶ್ ಎಂ ಅವರು, ಕೊಡಗು ವಿಶ್ವವಿದ್ಯಾಲಯದ ಸ್ನಾತಕ ಮತ್ತು ಸ್ನಾತಕೋತ್ತರ ಪದವಿ ಪರೀಕ್ಷೆಗಳ ಸಸಂಯೋಜಕರಾದ ಪ್ರೊ. ರವಿಶಂಕರ್ ಅವರು, ಯಯುಸಿಎಂಎಸ್ ನೋಡಲ್ ಅಧಿಕಾರಿ ಗಗನ್ ಹೆಚ್.ಎಸ್. ಅವರು ಉಪಸ್ಥಿತರಿದ್ದರು .
Back to top button
error: Content is protected !!