ಮನವಿ

ಬ್ಯಾಡಗೊಟ್ಟದಲ್ಲಿ ಕಾಯ್ದಿರಿಸಿದ ಜಾಗದಲ್ಲಿ ನಿವೇಶನ ರಹಿತರಿಗೆ ನಿವೇಶನ: ಶಾಸಕ ಡಾ.ಮಂತರ್ ಗೌಡ

ಕುಶಾಲನಗರ, ಸೆ. 9: ಕೂಡಿಗೆ ಗ್ರಾಮ ಪಂಚಾಯತಿ ವ್ಯಾಪ್ತಿಯ ಬ್ಯಾಡಗೊಟ್ಟ ಗ್ರಾಮದಲ್ಲಿ ಈಗಾಗಲೇ ಕಾಯ್ದಿರಿಸಲಾಗಿರುವ ಎರಡು ಎಕರೆ ಪ್ರದೇಶದಲ್ಲಿ ನಿವೇಶನ ರಹಿತರಿಗೆ ನಿವೇಶನ ನೀಡಲು ಕ್ರಮವಹಿಸಲಾಗುವುದು ಎಂದು ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ತಿಳಿಸಿದರು.
ಅವರು ಕೂಡಿಗೆ ಗ್ರಾಮಕ್ಕೆ ಆಗಮಿಸಿದ ಸಂದರ್ಭದಲ್ಲಿ ಗ್ರಾಮಸ್ಥರು ನಿವೇಶನಕ್ಕಾಗಿ ನೀಡಿದ ಮನವಿಯನ್ನು ಸ್ವೀಕರಿಸಿ ಮಾತನಾಡಿದರು. ಗ್ರಾಮ ಪಂಚಾಯತಿ ಮಾಸಿಕ ಸಭೆಯ ತೀರ್ಮಾನದಂತೆ ಈಗಾಗಲೇ ನಿವೇಶನ ರಹಿತರ ಪಟ್ಟಿಯು ಸಿದ್ದವಾಗಿದ್ದು ಅರ್ಹ ಫಲಾನುಭವಿಗಳಿಗೆ ಮನೆಗಳ ನಿರ್ಮಾಣಕ್ಕೆ ಜಾಗವನ್ನು ಒದಗಿಸಲಾಗುವುದು ಅಲ್ಲದೆ ಸರಕಾರವು ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯತಿಗಳಿಗೆ ವಿವಿಧ ಯೋಜನೆಯ ಅಡಿಯಲ್ಲಿ ವಿವಿಧ ಕಾಮಗಾರಿಗಳನ್ನು ಕೈಗೊಳ್ಳಲು ಈಗಾಗಲೇ ಅನುದಾನವನ್ನು ಬಿಡುಗಡೆ ಮಾಡಲಾಗಿದೆ. ಅದರನ್ವಯ ಗ್ರಾಮಾಂತರ ಪ್ರದೇಶಗಳ ಅಭಿವೃದ್ಧಿಗೆ ಹೆಚ್ಚಾಗಿ ಅನುದಾನವನ್ನು ನೀಡುವ ಮೂಲಕ ಅಭಿವೃದ್ಧಿ ಪಡಿಸಲಾಗುವುದು ಎಂದರು.
ಈ ಸಂದರ್ಭದಲ್ಲಿ ತಾಲ್ಲೂಕು ಗ್ಯಾರಂಟಿ ಸಮಿತಿಯ ಅಧ್ಯಕ್ಷ ವಿ.ಪಿ. ಶಶಿಧರ್, ಗ್ರಾಮ ಪಂಚಾಯತಿ ಸದಸ್ಯರಾದ ಟಿ.ಪಿ.ಹಮೀದ್, ಅರುಣ್ ರಾವ್, ಅನಂತ, ಶಿವಕುಮಾರ್, ಸೇರಿದಂತೆ ಗ್ರಾಮದ ಪ್ರಮುಖರು ಹಾಜರಿದ್ದರು.

Related Articles

Leave a Reply

Your email address will not be published. Required fields are marked *

Back to top button
error: Content is protected !!