ಕಾರ್ಯಕ್ರಮ

ಸುವರ್ಣ ಸಂಭ್ರಮ ಕನ್ನಡ ರಥಕ್ಕೆ ಕುಶಾಲನಗರದಲ್ಲಿ ಭವ್ಯ ಸ್ವಾಗತ

ಕುಶಾಲನಗರ, ಸೆ 11:
ಸೋಮವಾರಪೇಟೆ ತಾಲೂಕಿನಿಂದ ಕುಶಾಲನಗರ ತಾಲ್ಲೂಕು ವ್ಯಾಪ್ತಿಗೆ ಆಗಮಿಸಿದ ಸುವರ್ಣ ಸಂಭ್ರಮ ಕನ್ನಡ ರಥವನ್ನು ಕುಶಾಲನಗರ ತಾಲೂಕು ಆಡಳಿತ, ಪುರಸಭೆ ವತಿಯಿಂದ ಬೈಚನಹಳ್ಳಿ ಮಾರಮ್ಮ ದೇವಾಲಯ ಬಳಿ ಅದ್ದೂರಿಯಾಗಿ ಸ್ವಾಗತಿಸಲಾಯಿತು.

ತಹಸೀಲ್ದಾರ್ ಕಿರಣ್ ಗೌರಯ್ಯ, ಪುರಸಭೆ ಮುಖ್ಯಾಧಿಕಾರಿ ಕೃಷ್ಣಪ್ರಸಾದ್ ಸೇರಿದಂತೆ ಕನ್ನಡಪರ ಸಂಘಟನೆಗಳು, ಸಾಹಿತ್ಯ ಪರಿಷತ್, ವಿವಿಧ ಸಂಘಸಂಸ್ಥೆಗಳ ಪ್ರಮುಖರು, ಜನಪ್ರತಿನಿಧಿಗಳು ಕನ್ನಡಾಂಭೆಗೆ ಪುಷ್ಪಾರ್ಚನೆ‌ ಮಾಡುವ ಮೂಲಕ ರಥವನ್ನು ಬರಮಾಡಿಕೊಂಡರು.

ವಿವಿಧ ಶಾಲಾ ಕಾಲೇಜು ವಿದ್ಯಾರ್ಥಿಗಳ ಸಮ್ಮುಖದಲ್ಲಿ ಡೋಲು ಕುಣಿತದೊಂದಿಗೆ ರಥವನ್ನು ಪಟ್ಟಣದಲ್ಲಿ ಮೆರವಣಿಗೆ ನಡೆಸಲಾಯಿತು.

Related Articles

Leave a Reply

Your email address will not be published. Required fields are marked *

Back to top button
error: Content is protected !!