ಪಿರಿಯಾಪಟ್ಟಣ ಸೆ 11: ಮುಂಬರುವ ಸ್ಥಳಿಯ ಸಂಸ್ಥೆಗಳ ಚುನಾವಣೆಗೆ ಸದಸ್ಯತ್ವ ಅಭಿಯಾನ ಸಹಕಾರಿಯಾಗಲಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಸದಸ್ಯರನ್ನು ನೊಂದಣಿ ಮಾಡಲು ಕಾರ್ಯಕರ್ತರು ಮುಂದಾಗಬೇಕು ಎಂದು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ತಿಳಿಸಿದರು.
ಪಟ್ಟಣದ ಬಿಜೆಪಿ ಪಕ್ಷದ ಕಚೇರಿಯಲ್ಲಿ ಬಿಜೆಪಿ ಪಕ್ಷದ ವತಿಯಿಂದ ಆಯೋಜಿಸಿದ್ದ ಸದಸ್ಯತ್ವ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದರು.
ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸಂವಿಧಾನದ ಪರವಾಗಿ ಕೆಲಸ ಮಾಡುತ್ತಿರುವ ಏಕೈಕ ಪಕ್ಷ ಬಿಜೆಪಿ. ದೇಶದ ಅಭಿವೃದ್ಧಿ ಹಾಗೂ ಹಿಂದೂ ಧರ್ಮದ ಉದ್ದಾರವನ್ನೇ ಧ್ಯೇಯವಾಗಿ ಇಟ್ಟುಕೊಂಡು, ವಿಕಸಿತ ಹಾಗೂ ಸುಭದ್ರ ಭಾರತ ನಿರ್ಮಾಣಕ್ಕೆ ಶ್ರಮಿಸುತ್ತಿರುವ ಮೋದಿ ಅವರ ಕೈ ಬಲಪಡಿಸಲು ಪಕ್ಷದ ಸದಸ್ಯರನ್ನು ಹೆಚ್ಚಿಸೋಣ ಎಂದರು.
ತಾಲ್ಲೂಕು ಬಿಜೆಪಿ ಘಟಕದ ಅಧ್ಯಕ್ಷ ಪಿ.ರಾಜೇಂದ್, ಮಾತನಾಡಿ ಸುಳ್ಳು ಆಶ್ವಾಸನೆ ನೀಡಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಒಂದು ವರ್ಷದ ಆಡಳಿತದಲ್ಲೇ ಮೂರು ಪ್ರಮುಖ ಹಗರಣದ ಆರೋಪಕ್ಕೆ ಗುರಿಯಾಗಿದೆ. ಹೀಗಾಗಿ ಜನರಿಗೆ ನಮ್ಮ ಪಕ್ಷದ ಅಗತ್ಯತೆಯ ಬಗ್ಗೆ ಸ್ಪಷ್ಟತೆಯಿದೆ. ಅಭಿಯಾನದಲ್ಲಿ ಸದಸ್ಯರ ಸಂಖ್ಯೆ ಹೆಚ್ಚಾದಷ್ಟು ಮುಂಬರುವ ಸ್ಥಳೀಯ ಚುನಾವಣೆ ಎದುರಿಸಲು ಸಹಕಾರಿಯಾಗಲಿದ್ದು, ಪ್ರತಿ ಬೂತ್‌ನಲ್ಲಿ 100 ಸದಸ್ಯತ್ವ ನೋಂದಣಿಯ ಗುರಿ ನೀಡಲಾಗಿದೆ. ಮುಂಬರುವ ತಾಲ್ಲೂಕು ಪಂಚಾಯಿತಿ, ಜಿಲ್ಲಾ ಪಂಚಾಯತ್ ಚುನಾವಣೆಯನ್ನು ದೃಷ್ಟಿಯಲ್ಲಿಟ್ಟುಕೊಂಡು ಈ ಅಭಿಯಾನ ಯಶಸ್ವಿಗೊಳಿಸೋಣ. ಮನೆ– ಮನೆಗೆ ತೆರಳಿ ಸದಸ್ಯತ್ವ ನೋಂದಣಿ ಜೊತೆಗೆ ಮತದಾರರ ಪಟ್ಟಿ ಪರಿಷ್ಕರಣೆಯೂ ಮಾಡೋಣ ಎಂದರು.
ಈ ಸಂದರ್ಭದಲ್ಲಿ ಮಾಜಿ ಶಾಸಕ ಹೆಚ್.ಸಿ.ಬಸವರಾಜು, ತಾಲ್ಲೂಕು ಪ್ರಧಾನ ಕಾರ್ಯದರ್ಶಿ ಹೆಮ್ಮಿಗೆ ರವಿ, ನಿಕಟಪೂರ್ವ ಅಧ್ಯಕ್ಷ ಎಂ.ಎಂ.ರಾಜೇಗೌಡ, ಮುಖಂಡರಾದ ಕೌಲನಹಳ್ಳಿ ಸೋಮಶೇಖರ್, ಬೆಮ್ಮತ್ತಿ ಚಂದ್ರು, ಪಿ.ಕೆ.ರಾಘವೇಂದ್ರ ಸೇರಿದಂತೆ ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.
Back to top button
error: Content is protected !!