ಕಾರ್ಯಕ್ರಮ

ಹಿಟ್ನೆಹೆಬ್ಬಾಗಿಲಿನಲ್ಲಿ ವಿಶ್ವಕರ್ಮ ಜಯಂತಿ ಆಚರಣೆ

ಪಿರಿಯಾಪಟ್ಟಣ, ಸೆ 17: ವಿಶ್ವಕರ್ಮ ಸಮಾಜವು ಒಂದು ಜಾತಿಯಲ್ಲ, ಅದೊಂದು ಸಂಸ್ಕೃತಿ ಎಂದು ಹಿಟ್ನೆಹೆಬ್ಬಾಗಿಲು ಹಿಟ್ನೆ ಹೆಬ್ಬಾಗಿಲು ವಿಶ್ವಕರ್ಮ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಸುರೇಶ್ ಚಾರ್ ತಿಳಿಸಿದರು.

ತಾಲ್ಲೂಕಿನ ಹಿಟ್ನೆಹೆಬ್ಬಾಗಿಲು ಗ್ರಾಮದ ವಿಶ್ವಕರ್ಮ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ಆಯೋಜಿಸಿದ್ದ ವಿಶ್ವಕರ್ಮ ಜಯಂತಿ ಕಾರ್ಯಕ್ರಮದಲ್ಲಿ ವಿಶ್ವಕರ್ಮರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಮಾತನಾಡಿದರು.
ವಿಶ್ವಕರ್ಮ ಸಮಾಜದ ಜನರು ಶತ-ಶತಮಾನಗಳಿಂದ ಪಂಚ ಕಸುಬುಗಳ ಮೂಲಕ ದೇಶದ ಸಂಸ್ಕೃತಿ ಬಿಂಬುಸುವ ಕಾರ್ಯದಲ್ಲಿ ತೊಡಗಿದ್ದಾರೆ. ಅದ್ಭುತ ಕೆತ್ತನೆಯ ಮೂಲಕ ಐತಿಹಾಸಿಕ ಸ್ಮಾರಕ, ದೇವಸ್ಥಾನಗಳನ್ನು ನಿರ್ಮಿಸಿದ ಕೀರ್ತಿ ವಿಶ್ವಕರ್ಮದ ಶಿಲ್ಪಿಗಳಿಗೆ ಸಲ್ಲುತ್ತದೆ. ವಿಶ್ವಕರ್ಮ ಸಮಾಜ ಭಾರತ ದೇಶದಲ್ಲಿ ವಿಗ್ರಹ ಮತ್ತು ಶಿಲ್ಪಕಲೆಯಿಂದ ಗುರುತಿಸಿಕೊಂಡಿದ್ದು, ಈ ನಿಟ್ಟಿನಲ್ಲಿ ಸರ್ಕಾರವು ವಿಶ್ವಕರ್ಮ ಸಮಾಜದ ಜನರಿಗೆ ರೂಪಿಸಿರುವ ಕಾರ್ಯಕ್ರಮಗಳು
ಯೋಜನೆಗಳು ಅರ್ಹರಿಗೆ ತಲುಪುಂತಾಗಬೇಕು ಸರ್ಕಾರವು ಜಾರಿಗೊಳಿಸಿರುವ ಯೋಜನೆಗಳನ್ನು ಪಡೆಯಲು ಗ್ರಾಮೀಣ ಭಾಗದಲ್ಲಿ ಸಮಾಜವನ್ನು ಸಂಘಟಿಸುವ ಕೆಲಸವಾಗಬೇಕು ಎಂದರು.
ತಾಲೂಕು ವಿಶ್ವಕರ್ಮ ಸೇವಾ ಸಮಿತಿಯ ನಿರ್ದೇಶಕ ಹೆಚ್.ಆರ್.ಹರೀಶ್ ಮಾತನಾಡಿ ಈ ದಿನ ರಾಜ್ಯದಾದ್ಯಂತ ವಿಶ್ವಕರ್ಮ ಜಯಂತ್ಯೋತ್ಸವ ಕಾರ್ಯಕ್ರಮವನ್ನು ಆಚರಿಸಲಾಗುತ್ತದೆ ಅದೇ ರೀತಿ ತಾಲೂಕಿನ ನಾನಾ ಗ್ರಾಮಗಳಲ್ಲೂ ಜಯಂತಿ ಕಾರ್ಯಕ್ರಮ ನಡೆಯುತ್ತಿದ್ದು ಇದೇ ಸೆಪ್ಟೆಂಬರ್ 28 ರಂದು ತಾಲ್ಲೂಕು ಮಟ್ಟದಲ್ಲಿ ಆಯೋಜಿಸಲಾಗಿದ್ದು ಕಾರ್ಯಕ್ರಮಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕಾಗಿ ಮಾನವಿ ಮಾಡಿದರು.
ಈ ಸಂದರ್ಭದಲ್ಲಿ ಸಂಘದ ಉಪಾದ್ಯಕ್ಷ ರಾಜಶೇಖರ ಚಾರಿ, ನಿರ್ದೇಶಕರಾದ ಅಂಗಡಿ ಮಧು, ಹೆಚ್
ಎಲ್‌.ಸಂತೋಷ್, ಹೆಚ್.ಆರ್.ಮನು, ಹೆಚ್.ಆರ್.ಹರೀಶ್, ಶಂಕರಚಾರಿ, ಪುನೀತ್, ಕುಮಾರ್ ಚಾರಿ, ಮೆಕಾನಿಕ್ ಮಧು ಸೇರಿದಂತೆ ಗ್ರಾಮಸ್ಥರು ಹಾಗೂ ವಿಶ್ವಕರ್ಮಸಮಾಜದ ಬಂಧುಗಳು ಹಾಜರಿದ್ದರು.

Related Articles

Leave a Reply

Your email address will not be published. Required fields are marked *

Back to top button
error: Content is protected !!