ಕಾರ್ಯಕ್ರಮ

ಒಕ್ಕೂಟಕ್ಕೆ ಗುಣಮಟ್ಟದ ಹಾಲು ಪೂರೈಕೆ ಮಾಡಿ: ಮೈಮುಲ್ ನಿರ್ದೇಶಕ ಡಿ.ಎ.ಪ್ರಕಾಶ್.,

ಪಿರಿಯಾಪಟ್ಟಣ ಸೆ 17: ರೈತರು ಕೃಷಿಯೊಂದಿಗೆ ಹೈನುಗಾರಿಕೆಯನ್ನು ಉಪ ಕಸುಬಾಗಿ ಸ್ವೀಕರಿಸಿ ಆರ್ಥಿಕವಾಗಿ ಅಭಿವೃದ್ಧಿ ಹೊಂದಬೇಕು ಎಂದು ಮೈಮುಲ್ ಮೈಸೂರು ಜಿಲ್ಲಾ ಹಾಲು ಒಕ್ಕೂಟದ ನಿರ್ದೇಶಕ ಡಿ.ಎ.ಪ್ರಕಾಶ್ ತಿಳಿಸಿದರು.

ತಾಲ್ಲೂಕಿನ ತೆಲುಗಿನಕುಪ್ಪೆ ಹಾಲು ಉತ್ಪಾದಕರ ಸಹಕಾರ ಸಂಘದ 2023-24 ನೇ ಸಾಲಿನ ವಾರ್ಷಿಕ ಮಹಾಸಭೆಯಲ್ಲಿ ಮಾತನಾಡಿದರು.

ತಾಲ್ಲೂಕಿನ ರೈತರು ವ್ಯವಸಾಯದ ಜೊತೆಗೆ ಹೈನುಗಾರಿಯಲ್ಲಿ ಆರ್ಥಿಕವಾಗಿ ಸದೃಢರಾಗುತಿದ್ದಾರೆ, ರೈತರು ಒಕ್ಕೂಟಕ್ಕೆ ಉತ್ತಮ ಗುಣಮಟ್ಟದ ಹಾಲು ಪೂರೈಕೆ ಮಾಡುವುದರಿಂದ ಅಧಿಕ ಲಾಭ ಪಡೆಯುವುದರ ಜೊತೆಗೆ ಸಂಘದ ಹೆಸರನ್ನು ಅಜರಾಮರವಾಗುವಂತೆ ಮಾಡಬಹುದು. ಈ ನಿಟ್ಟಿನಲ್ಲಿ ಒಕ್ಕೂಟವು ಹೈನುಗಾರಿಕೆಯನ್ನು ಉತ್ತೇಜಿಸಲು ಹೈನುಗಾರಿಕೆಯಲ್ಲಿ ತೊಡಗುವ ರೈತರಿಗೆ ವಿವಿಧ ವಿಮಾ ಸೌಲಭ್ಯಗಳು, ರೈತರ ಮಕ್ಕಳಿಗೆ ವಿದ್ಯಾಭ್ಯಾಸಕ್ಕೆ ಪ್ರೋತ್ಸಾಹ ಹಾಗೂ ಪುರಸ್ಕಾರ, ರೈತ ಕಲ್ಯಾಣ ಯೋಜನೆ, ರಾಸುಗಳಿಗೆ ವಿಮಾ ಸೌಲಭ್ಯ, ಅಫಘಾತ ಹಾಗೂ ಅಕಾಲಿಕ ಮರಣ ಹೊಂದಿದ ರೈತ ಕುಟುಂಬಗಳಿಗೆ ಆರ್ಥಿಕ ಸಹಾಯ ಸೇರಿದಂತೆ ವಿವಿಧ ಯೋಜನೆಗಳನ್ನು ಜಾರಿಗೊಳಿಸಿದ್ದು ರೈತರು ಈ ಅವಕಾಶವನ್ನು ಸದ್ಬಳಕೆ ಮಾಡಿಕೊಳ್ಳಬೇಕು ಎಂದರು.
ತೆಲುಗಿನಕುಪ್ಪೆ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ಸೋಮೇಗೌಡ ಮಾತನಾಡಿ ಹಾಲು ಉತ್ಪಾದಕರ ಸಹಕಾರ ಸಂಘಗಳು ರೈತರ ಜೀವನಾಡಿ. ಹೈನುಗಾರಿಕೆಯಿಂದ ಹೆಚ್ಚಿನ ಲಾಭವಿದೆ. ಸಹಕಾರ ಸಂಘಗಳು ಹಾಗೂ ಸಹಕಾರ ತತ್ವದ ಆಧಾರದಡಿ ಪರಸ್ಪರ ಸಹಕಾರದಿಂದ ಸಂಘವನ್ನು ಉನ್ನತ ಮಟ್ಟಕ್ಕೆ ತರಲು ಸದಸ್ಯರು, ಆಡಳಿತ ಮಂಡಲಿ ಹಾಗೂ ನೌಕರವರ್ಗ ಶ್ರಮವಹಿಸಬೇಕು, ಸರ್ಕಾರ ಹಾಗೂ ಒಕ್ಕೂಟದಿಂದ ಅನೇಕ ಸವಲತ್ತುಗಳನ್ನು ನೀಡಲಾಗಿದೆ. ರಾಸುಗಳಿಗೆ ವಿಮೆ ಮಾಡಿಸಲು ಒಕ್ಕೂಟದಿಂದ ಶೇ. 50ರಷ್ಟು ಅನುಧಾನ ನೀಡುತ್ತಿದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಹಾಲು ಉತ್ಪಾದಕರ ಸಹಕಾರ ಸಂಘದ ಉಪಾಧ್ಯಕ್ಷ ಚಂದ್ರೇಗೌಡ, ನಿರ್ದೆಶಕರಾದ ಟಿ.ಜೆ.ಆನಂದ್, ಶ್ರೀನಿವಾಸ್, ಮಲ್ಲಪ್ಪ , ಕಾಳೇಗೌಡ, ಕುಮಾರ್, ಆನಂದ್, ಶಿವಣ್ಣ, ಪ್ರೇಮಮ್ಮ, ಮಂಜುಳಾ ಪ್ರಕಾಶ್, ಬೊಮ್ಮರಾಯಿ, ಪರಮೇಶ್ ಮುಖ್ಯ ಕಾರ್ಯನಿರ್ವಾಹಕ ಕೀರ್ತಿ ಕುಮಾರ್ ಸೇರಿದಂತೆ ಗ್ರಾಮಸ್ಥರು ಹಾಗೂ ಹಾಲು ಉತ್ಪಾದಕರ ಸಹಕಾರ ಸಂಘದ ಸಿಬ್ಬಂದಿಗಳು ಉಪಸ್ಥಿತದ್ದರು.

Related Articles

Leave a Reply

Your email address will not be published. Required fields are marked *

Back to top button
error: Content is protected !!