ಕಾರ್ಯಕ್ರಮ

ಸ್ಕೌಟ್ಸ್, ಗೈಡ್ಸ್ ನ ಕುಶಾಲನಗರ ತಾಲ್ಲೂಕು ಅಧ್ಯಕ್ಷ ಡಾ.ಪ್ರವೀಣ್ ಅವರಿಗೆ ಅಧಿಕಾರ ಹಸ್ತಾಂತರ

ಕುಶಾಲನಗರ, ಸೆ.18 :
ಭಾರತ್ ಸ್ಕೌಟ್ಸ್, ಗೈಡ್ಸ್ ನ ಜಿಲ್ಲಾ ಸಂಸ್ಥೆಯ ವತಿಯಿಂದ ಕುಶಾಲನಗರ ತಾಲ್ಲೂಕು ಮುಳ್ಳುಸೋಗೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ‌ಏರ್ಪಡಿಸಿದ್ದ ಸ್ಕೌಟ್ಸ್, ಗೈಡ್ಸ್ ನ
ಕುಶಾಲನಗರ ತಾಲ್ಲೂಕು ಸ್ಥಳೀಯ ಸಂಸ್ಥೆಯ ಸಭೆಯಲ್ಲಿ ಸಂಸ್ಥೆಯ ಕುಶಾಲನಗರ ತಾಲ್ಲೂಕು ಸ್ಥಳೀಯ
ಅಧ್ಯಕ್ಷರಾಗಿ ಆಯ್ಕೆಗೊಂಡ ದೇವರಗುಂಡ
ಡಾ ಪ್ರವೀಣ್ ಸೋಮಪ್ಪ
ಅವರಿಗೆ ಸ್ಕೌಟ್ಸ್, ಗೈಡ್ಸ್ ನ ಕೊಡಗು ಸಂಸ್ಥೆಯ ಜಿಲ್ಲಾ ಪ್ರಧಾನ ಆಯುಕ್ತ
ಕೆ.ಟಿ.ಬೇಬಿಮ್ಯಾಥ್ಯೂ
ಅಧಿಕಾರ ಹಸ್ತಾಂತರ ಮಾಡಿದರು.
ಈ ಸಂದರ್ಭದಲ್ಲಿ ಸಂಸ್ಥೆಯ ಪದಾಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಕೆ.ಟಿ.ಬೇಬಿಮ್ಯಾಥ್ಯೂ ,
ವಿಶ್ವವ್ಯಾಪಿಯಾಗಿರುವ ಸ್ಕೌಟ್ ಚಳುವಳಿಯು ಒಂದು ಯುವ ಜನಾಂಗದ ಕೂಟ. ಈ ಚಳುವಳಿಯ ಉದ್ದೇಶವು ಯುವ ಪೀಳಿಗೆಯಲ್ಲಿ ಶಿಸ್ತು- ಸಂಯಮ ಹಾಗೂ ಉತ್ತಮ ನಾಯಕತ್ವ ಗುಣ ಬೆಳೆಸುವುದರೊಂದಿಗೆ ಅವರಲ್ಲಿ
ದೈಹಿಕ, ಮಾನಸಿಕ ಮತ್ತು ಆಧ್ಯಾತ್ಮಿಕ ಬೆಳವಣಿಗೆ ಹೊಂದಲು ಸಹಕಾರಿಯಾಗಿದೆ.
ಈ ಚಳುವಳಿಯ ಆರಂಭ ಹಾಗೂ ಸೇವಾ ಚಟುವಟಿಕೆಗಳ
ಕುರಿತು ಮಾಹಿತಿ ನೀಡಿದ ಬೇಬಿಮ್ಯಾಥ್ಯೂ ಅವರು, ಈ ಚಳುವಳಿಯನ್ನು
1907 ರಲ್ಲಿ ಇಂಗ್ಲೆಂಡ್ ನಲ್ಲಿ
ರಾಬರ್ಟ್ ಬೇಡೆನ್ ಪೊವೆಲ್ ಎಂಬುವರು ಪ್ರಾರಂಭಿಸಿದ್ದು, ಈ ಸಂಸ್ಥೆಯು ಇಂದು ಹಲವಾರು ದೇಶಗಳಲ್ಲಿ ತನ್ನ ಕಾರ್ಯಚಟುವಟಿಕೆಗಳನ್ನು ನಡೆಸುತ್ತಿದೆ . ಕೊಡಗು ಜಿಲ್ಲೆಯಲ್ಲಿಯೂ ಶಾಲಾ- ಕಾಲೇಜುಗಳು ಹಾಗೂ ಸಮುದಾಯದಲ್ಲಿ ಸಾಮಾಜಿಕ ಸೇವಾ ಕಾರ್ಯಗಳ ಜತೆಗೆ
ವೈವಿಧ್ಯಮಯ ಕಾರ್ಯಚಟುವಟಿಕೆಗಳನ್ನು ನಡೆಸಲಾಗುತ್ತಿದೆ
ಎಂದರು.
ಜಿಲ್ಲೆಯಲ್ಲಿ ಕುಶಾಲನಗರ ತಾಲ್ಲೂಕು
ಸ್ಥಳೀಯ ಸಂಸ್ಥೆಯ ವತಿಯಿಂದ ಸ್ಕೌಟ್ಸ್ ಮತ್ತು ಗೈಡ್ಸ್ ಚಟುವಟಿಕೆಗಳು ಉತ್ತಮವಾಗಿ ಸಂಘಟನೆಗೊಳ್ಳಲು ಎಲ್ಲರೂ ಸಹಕರಿಸಬೇಕು ಎಂದರು.
ಸಂಸ್ಥೆಯ ಕುಶಾಲನಗರ ತಾಲ್ಲೂಕು ಸ್ಥಳೀಯ ಸಂಸ್ಥೆಯ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡು ಮಾತನಾಡಿದ ದೇವರಗುಂಡ
ಡಾ ಪ್ರವೀಣ್ ಸೋಮಪ್ಪ ,
ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯ ಮೂಲಕ ವಿದ್ಯಾರ್ಥಿಗಳು ಹಾಗೂ ಸಮುದಾಯದಲ್ಲಿ ಸೇವಾ ಮನೋಭಾವ ಹಾಗೂ ರಾಷ್ಟ್ರೀಯ ಭಾವೈಕ್ಯತೆಯಂತಹ ಸಮಾಜಮುಖಿ ಕಾರ್ಯಗಳ ಮೂಲಕ ಈ
ಚಳವಳಿಯನ್ನು ವಿಸ್ತಾರಗೊಳಿಸಲು ಎಲ್ಲರೂ ಸಹಕರಿಸಬೇಕು ಎಂದು ಮನವಿ ಮಾಡಿದರು.
ಸಂಸ್ಥೆಯ ಜಿಲ್ಲಾ ತರಗತಿ ಆಯುಕ್ತ
, ಕೆ.ಯು.ರಂಜಿತ್ ಮಾತನಾಡಿದರು.

Related Articles

Leave a Reply

Your email address will not be published. Required fields are marked *

Back to top button
error: Content is protected !!