ಕುಶಾಲನಗರ ಸೆ 18 : ಮಕ್ಕಳಲ್ಲಿ ಅಡಗಿರುವ ಅಂತರಿಕ ಪ್ರತಿಭೆಯನ್ನು ಗುರುತಿಸಿ ಪ್ರೋತ್ಸಾಹಿಸಲು ಪ್ರತಿಭಾ ಕಾರಂಜಿ ಸಾಂಸ್ಕೃತಿಕ ಕಾಲೋತ್ಸವ ಸ್ಪರ್ಧೆಗಳು ಉತ್ತಮ ವೇದಿಕೆಯಾಗಿವೆ ಎಂದು ಕೊಡ್ಲಿಪೇಟೆ ಕಿರಿಕೊಡ್ಲಿ ಮಠದ ಶ್ರೀ ಸದಾಶಿವ ಸ್ವಾಮೀಜಿ ಹೇಳಿದರು.
ಕೊಡಗು ಜಿಲ್ಲಾ ಪಂಚಾಯಿತಿ,ಶಾಲಾ ಶಿಕ್ಷಣ ಇಲಾಖೆ,ಕ್ಷೇತ್ರ ಶಿಕ್ಷಣಾಧಿಕಾರಿಗಳ ಮತ್ತು ಸಮನ್ವಯಾಧಿಕಾರಿಗಳ ಕಚೇರಿ ಸೋಮವಾರಪೇಟೆ, ಸಮೂಹ ಸಂಪನ್ಮೂಲ ಕೇಂದ್ರ ಕೊಡ್ಲಿಪೇಟೆ ಸಂಯುಕ್ತಾಶ್ರಯದಲ್ಲಿ ಕೊಡ್ಲಿಪೇಟೆ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಬುಧವಾರ ಏರ್ಪಡಿಸಿದ್ದ ಪ್ರತಿಭಾ ಕಾರಂಜಿ ಸಾಂಸ್ಕೃತಿಕ ಕಾಲೋತ್ಸವ ಸ್ಪರ್ಧಾ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ವಿದ್ಯಾರ್ಥಿಗಳಿಗೆ ಕೇವಲ ಶಿಕ್ಷಣ, ಕ್ರೀಡೆ ಕೊಟ್ಟರೆ ಸಾಲದು ಜೊತೆಗೆ ಮಕ್ಕಳಲ್ಲಿ ಅಂತರಿಕವಾಗಿ ಅಡಗಿರುವ ಪ್ರತಿಭೆಯನ್ನು ಹೊರತರುವ ಕೆಲಸವನ್ನು ಮಾಡಬೇಕು.
ಶಾಲಾಭಿವೃದ್ಧಿ ಸಮಿತಿ, ಪೋಷಕರು ಹಾಗೂ ಶಿಕ್ಷಕ ಸಮನ್ವಯತೆ ಕೆಲಸ ಮಾಡಿದರೆ ಗುಣಮಟ್ಟದ ಶಿಕ್ಷಣದೊಂದಿಗೆ ಉತ್ತಮ ಶಾಲೆಯಾಗಿ ರೂಪುಗೊಳಿಸಲು ಸಾಧ್ಯವಾಗುತ್ತದೆ ಎಂದರು. ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾರ್ಥಿಗಳನ್ನು
ಶೇಕಡಾವಾರು ಅಂಕಗಳಲ್ಲಿ ಗುರುತಿಸುವ ಕೆಲಸ ಮಾಡುತ್ತಿರುವುದು ಸರಿಯಲ್ಲ.ಬದಲಿಗೆ ಅವರಲ್ಲಿ ಇರುವ ಪ್ರತಿಭೆಯನ್ನು ಗುರುತಿಸಿ ಪ್ರೋತ್ಸಾಹಿಸುವ ಮೂಲಕ ಉತ್ತಮ ಭವಿಷ್ಯ ರೂಪಿಸಬೇಕಾಗಿದೆ ಎಂದರು.
ಕೊಡ್ಲಿಪೇಟೆ ಗ್ರಾಮ ಪಂಚಾಯತಿ ಸದಸ್ಯ ಚಂದ್ರಶೇಖರ್ ಮಾತನಾಡಿ,ಪ್ರತಿಭಾ ಕಾರಂಜಿ ಸ್ಪರ್ಧೆಯು ಮಕ್ಕಳಲ್ಲಿ ಶಿಕ್ಷಣ, ಮನರಂಜನೆ ಹಾಗೂ ಅಭಿವೃದ್ಧಿಗೆ ಉತ್ತೇಜಿಸುವುದರೊಂದಿಗೆ ಮಕ್ಕಳಲ್ಲಿನ ಪ್ರತಿಭೆ ಗುರುತಿಸಲು ಅನುಕೂಲವಾಗಲಿದೆ ಎಂದರು. ಇದೇ ಶಾಲೆಯಲ್ಲಿ ವ್ಯಾಸಂಗ ಮಾಡಿದ ಹಳೆಯ ವಿದ್ಯಾರ್ಥಿ ಎಸ್.ಆರ್.ಅಮೃತಾ ಅವರು ಕ್ರೀಡಾ ಕ್ಷೇತ್ರದಲ್ಲಿ ಉತ್ತಮ ಸಾಧನೆ ಮಾಡಿ ಚಿನ್ನ,ಬೆಳ್ಳಿ ಪದಕ ಗಳಿಸಿದ್ದಾರೆ. ಮುಂದೆ ಇನ್ನು ಹೆಚ್ಚಿನ ಸಾಧನೆ ಮಾಡಲಿ ಅವರಿಗೆ ಎಲ್ಲ ರೀತಿಯ ಸಹಕಾರ ನೀಡಲು ನಾವು ಬದ್ಧರಾಗಿದ್ದೇವೆ ಎಂದರು.
ಕೊಡ್ಲಿಪೇಟೆ ಪ್ರಾಥಮಿಕ ಶಾಲಾ ಎಲ್.ಕೆ.ಜಿ.ಯು.ಕೆ.ಜಿ.ವಿಭಾಗದ ಅಧ್ಯಕ್ಷ
ಕೆಂಚೇಶ್ವರ್ ಮಾತನಾಡಿ, ಸರ್ಕಾರಿ ಶಾಲೆಯಲ್ಲಿ ಗುಣಮಟ್ಟ ಶಿಕ್ಷಣ ದೊರೆಯುತ್ತಿದೆ.ಜೊತೆಗೆ ಅನೇಕ ಸೌಲಭ್ಯಗಳನ್ನು ಉಚಿತವಾಗಿ ನೀಡುತ್ತಿದೆ.ಆದ್ದರಿಂದ ಪೋಷಕರು ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗೆ ಸೇರಿಸಲು ಒತ್ತು ನೀಡಬೇಕು ಎಂದರು.
ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಕೊಡಗು ಜಿಲ್ಲಾ ಘಟಕದ ನಿರ್ದೇಶಕ ಎಸ್.ಎಂ.ಸುರೇಶ್ ಮಾತನಾಡಿ,ಪ್ರತಿಭಾ ಕಾರಂಜಿ ಸ್ಪರ್ಧೆಯು ಮಕ್ಕಳಲ್ಲಿ ಶಿಕ್ಷಣ, ಮನರಂಜನೆ ಹಾಗೂ ಅಭಿವೃದ್ಧಿಗೆ ಉತ್ತೇಜಿಸುವುದರೊಂದಿಗೆ ಮಕ್ಕಳಲ್ಲಿನ ಪ್ರತಿಭೆ ಗುರುತಿಸಲು ಅನುಕೂಲವಾಗಲಿದೆ ಎಂದರು.
ಕೊಡ್ಲಿಪೇಟೆ ಕ್ಲಸ್ಟರ್ ಸಮೂಹ ಸಂಪನ್ಮೂಲ ಕೇಂದ್ರದ ಸಂಪನ್ಮೂಲ ವ್ಯಕ್ತಿ ರವೀಶ್ ,ಮಕ್ಕಳ ಪ್ರತಿಭೆಯ ಸ್ಪರ್ಧೆಗಳ ಕುರಿತು ಮಾಹಿತಿ ನೀಡಿದರು.
ಹಿರಿಯ ಪ್ರಾಥಮಿಕ ಶಾಲಾ ಅಭಿವೃದ್ಧಿ ಸಮಿತಿ ವಸಂತ ಅಧ್ಯಕ್ಷತೆ ವಹಿಸಿದ್ದರು. ಸರ್ಕಾರಿ ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕಿ ಆಶಾ, ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಕೊಡಗು ಜಿಲ್ಲಾಧ್ಯಕ್ಷ ಎನ್.ಎನ್.ಮಂಜುನಾಥ್, ಎಸ್.ಕೆ.ಎಸ್.ಪಿಯು ಕಾಲೇಜು ಪ್ರಾಂಸುಪಾಲೆ ತನುಜ,ದಲಿತ ಸಂಘಟನೆ ಮುಖಂಡರಾದ ಡಿ.ಬಿ. ಜಗದೀಶ್, ವಿವಿಧ ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕರಾದ ಮುಜಮಿಲ್ ಅಕ್ತರ್, ಆಶಾ,ಫಯಾಜ್ , ರಾಧ , ಮೂರ್ತಿ, ರಿಜ್ವಾನ ಬಾನು, ಭಾಗ್ಯ,ರಮೇಶ್ ಹಾಗೂ ಶಿಕ್ಷಕರು ,ಪೋಷಕರು, ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.
ಅನಾವರಣಗೊಂಡ ಮಕ್ಕಳ ಪ್ರತಿಭಾ ಪ್ರದರ್ಶನ : ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಅನಾವರಣಗೊಂಡ ಮಕ್ಕಳ ಪ್ರತಿಭಾ ಪ್ರದರ್ಶನ ಪ್ರೇಕ್ಷಕರ ಗಮನ ಸೆಳೆಯಿತು.
ಮಕ್ಕಳು ವಿವಿಧ ವೈಯಕ್ತಿಕ ಹಾಗೂ ಗುಂಪು ಸ್ಪರ್ಧೆಗಳಲ್ಲಿ ಭಾಗವಹಿಸಿ ಉತ್ತಮ ಪ್ರದರ್ಶನ ನೀಡಿದ ಮಕ್ಕಳಿಗೆ ಬಹುಮಾನ ನೀಡಿ ಗೌರವಿಸಲಾಯಿತು.
ಮಕ್ಕಳು ಕಂಠಪಾಠ, ಧಾರ್ಮಿಕ ಪಠಣ, ಛದ್ಮವೇಷ ಸ್ಪರ್ಧೆ, ರಸಪ್ರಶ್ನೆ, ರಂಗೋಲಿ, ಜಾನಪದ ಗೀತೆ, ಕವ್ವಾಲಿ, ಕ್ಲೇ ಮಾಡಲಿಂಗ್, ಭಾಷಣ ಮತ್ತು ಪ್ರಬಂಧ ಸ್ಪರ್ಧೆ ಸೇರಿದಂತೆ ಮುಂತಾದ ಸ್ಪರ್ಧೆಗಳಲ್ಲಿ ಭಾಗವಹಿಸಿ ಪ್ರತಿಭೆ ಅನಾವರಣಗೊಳಿಸಿದರು.
ರಾಜ್ಯಮಟ್ಟದ ವೈಟ್ ಲಿಪ್ಟಿಂಗ್ ನಲ್ಲಿ ಚಿನ್ನದ ಪದಕಗಳಿಸಿದ ಹಳೆಯ ವಿದ್ಯಾರ್ಥಿ ಅಮೃತಾ, ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪಡೆದ ಎಸ್.ಕೆ.ಎಸ್.ಶಾಲೆ ಮುಖ್ಯ ಶಿಕಕಿ ತನುಜ, ಶಾಲಾಭಿವೃದ್ಧ ಸಮಿತಿ ಅಧ್ಯಕ್ಷ ವಸಂತ, ಕ್ರೀಡಾ ಪ್ರತಿಭೆ ನಾಗೇಶ್ ಹಾಗೂ ಶ್ರೀ ಸದಾಶಿವ ಸ್ವಾಮೀಜಿ ಅವರನ್ನು ವೇದಿಕೆ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು. ಇದೇ ಸಂದರ್ಭ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಅತಿಥಿಗಳು ಬಹುಮಾನ ವಿತರಿಸಿದರು.
Back to top button
error: Content is protected !!