ಕುಶಾಲನಗರ, ಸೆ 18: ಸ್ಚಚ್ಚ ಭಾರತ್ ಮಿಷನ್, ನಗರಾಭಿವೃದ್ಧಿ ಇಲಾಖೆ, ಕುಶಾಲನಗರ ಪುರಸಭೆ ಹಾಗೂ ಕನ್ನಡ ಭಾರತಿ ಪದವಿ ಪೂರ್ವ ಕಾಲೇಜು ಇವರ ಆಶ್ರಯದಲ್ಲಿ “ಸ್ವಚ್ಚತೆಯೇ ಸೇವೆ ಅಮ್ಮನ ಹೆಸರಿನಲ್ಲಿ ಒಂದು ಗಿಡ” ನೆಡುವ ಕಾರ್ಯಕ್ರಮಕ್ಕೆ ಪುರಸಭೆ ಸದಸ್ಯ ವಿ.ಎಸ್ ಆನಂದ್ ಕುಮಾರ್ ಚಾಲನೆ ನೀಡಿದರು.
ನಂತರ ಮಾತನಾಡಿದ ಅವರು, ಪ್ರತಿಯೊಂದು ಜೀವ, ಜಲ, ಮನುಷ್ಯ, ಪ್ರಾಣಿ, ಪಕ್ಷಿ ಉಸಿರಾಡಬೇಕಾದರೆ ಪರಿಸರ ಅಷ್ಟೆ ಅತ್ಯವಶ್ಯಕವಾಗಿದೆ. ಅವುಗಳನ್ನು ಉಳಿಸಿಕೊಳ್ಳುವ ನಿಟ್ಟಿನಲ್ಲಿ ಗಿಡ ನೆಡುವುದರೊಂದಿಗೆ ಸಂರಕ್ಷಣೆ ಮಾಡಬೇಕಿದೆ. ಇಂದಿನಿಂದಲೇ ಪ್ರತಿಯೊಬ್ಬರು ತಮ್ಮ ಸುತ್ತ ಮುತ್ತಲಿನ ಪರಿಸರವನ್ನು ಕಾಪಾಡುವ ಸಂರಕ್ಷಿಸುವ ಪಣ ತೊಡಬೇಕು ಹೀಗಿದ್ದಾಗ ಮಾತ್ರ ಪರಿಸರ ಉಳಿಸಿಕೊಳ್ಳಲು ಸಾದ್ಯವಾಗುತ್ತದೆ ಎಂದರು.
ಪುರಸಭೆ ಆರೋಗ್ಯ ಅಧಿಕಾರಿ ಉದಯಕುಮಾರ್ ಮಾತನಾಡಿ, ಮರಗಿಡಗಳನ್ನು ಬೆಳೆಸುವ ಮೂಲಕ ಪ್ರಕೃತಿಯ ಸೌಂದರ್ಯವನ್ನು ಹೆಚ್ಚಿಸುವದರ ಜೊತೆಗೆ ಆರೋಗ್ಯಕರ ವಾತಾವರಣ ನಿರ್ಮಾಣ ಮಾಡಲು ಸಾಧ್ಯವಿದೆ. ಈ ನಿಟ್ಟಿನಲ್ಲಿ ಇಲಾಖೆ ರೂಪಿಸಿದ ಈ ಕಾರ್ಯಕ್ರಮ ಅರ್ಥಪೂರ್ಣವಾಗಿದೆ ಎಂದು ಹೇಳಿದರು.
ಕನ್ನಡ ಭಾರತಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಡಾ. ನಾಗೇಂದ್ರ ಸ್ವಾಮಿ ಮಾತನಾಡಿ, ಇಂದಿನ ದಿನಮಾನಗಳಲ್ಲಿ ಆರೋಗ್ಯಕರ ಬದುಕನ್ನು ನಡೆಸಲು ಉತ್ತಮ ಜೀವನ ಶೈಲಿಯೊಂದಿಗೆ ಸ್ವಚ್ಚ ಹಾಗೂ ಉತ್ತಮ ಪರಿಸರ ಅತಿ ಅಗತ್ಯವಾಗಿದ್ದು, ಅದಕ್ಕಾಗಿ ನಾವು ಮರ-ಗಿಡಗಳನ್ನು ಹೆಚ್ಚು ಹೆಚ್ಚಾಗಿ ಬೆಳೆಸುವ ಮೂಲಕ ಪ್ರಕೃತಿಗೆ ನಮ್ಮ ಕೊಡುಗೆ ನೀಡುವುದು ಪ್ರತಿಯೊಬ್ಬರ ಕರ್ತವ್ಯ ಎಂದರು.
ಈ ಸಂದರ್ಭ ಪುರಸಭೆ ಮುಖ್ಯಾಧಿಕಾರಿ ಕೃಷ್ಣಪ್ರಸಾದ್, ಪುರಸಭೆ ಸದಸ್ಯ ಜಯವರ್ದನ್, ಸಿಬ್ಬಂದಿಗಳಾದ ಕೀರ್ತಿ, ಮೋಹನ್ ಕುಮಾರ್, ಅಂಬೇಡ್ಕರ್ ಜನಪರ ವೇದಿಕೆಯ ತಾಲ್ಲೂಕು ಅಧ್ಯಕ್ಷ ಆದಂ, ಕನ್ನಡ ಭಾರತಿ ಪದವಿ ಪೂರ್ವ ಕಾಲೇಜಿನ ರುದ್ರಪ್ಪ, ಸತೀಶ್, ಲೋಹಿತ್, ಶಾಂತಕುಮಾರ್ ಸೇರಿದಂತೆ ಮತ್ತಿತರರು ಹಾಜರಿದ್ದರು.
Back to top button
error: Content is protected !!