ಸುದ್ದಿಗೋಷ್ಠಿ

ಸೆ.25 ಕ್ಕೆ ಕುಶಾಲನಗರ ಹೋಬಳಿ ಕಾರ್ಯನಿರತ ಪತ್ರಕರ್ತರ ಸಂಘದ ಬೆಳ್ಳಿ ಮಹೋತ್ಸವ

ಕುಶಾಲನಗರ, ಸೆ 19; ಕುಶಾಲನಗರ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಆಶ್ರಯದಲ್ಲಿ ಕುಶಾಲನಗರ ಹೋಬಳಿ ಪತ್ರಕರ್ತರ ಸಂಘದ ಬೆಳ್ಳಿ ಮಹೋತ್ಸವ ಸೆಪ್ಟೆಂಬರ್ 25ರಂದು ಕುಶಾಲನಗರದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಕುಶಾಲನಗರ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾದ ಎಂ ಎನ್ ಚಂದ್ರಮೋಹನ್ ತಿಳಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 1999 ರಲ್ಲಿ ಆರಂಭಗೊಂಡ ಸಂಘ ಇದೀಗ 25 ವರ್ಷ ಪೂರೈಸಿದೆ. ಈಗಾಗಲೇ ಬೆಳ್ಳಿಹಬ್ಬದ ಅಂಗವಾಗಿ 25 ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು. ಕೊಡಗು ಜಿಲ್ಲಾ ಸಂಘದ ಸದಸ್ಯರುಗಳಿಗೆ ಜಿಲ್ಲಾ ಮಟ್ಟದ ಕ್ರಿಕೆಟ್ ಪಂದ್ಯಾಟ ಸೇರಿದಂತೆ ಹಲವು ಸಾಮಾಜಿಕ ಚಟುವಟಿಕೆಗಳನ್ನು ಕೈಗೊಳ್ಳಲಾಗಿದೆ ಎಂದು ಹೇಳಿದರು.
ಕುಶಾಲನಗರ ತಾಲ್ಲೂಕು ಪತ್ರಕರ್ತರ ಸಂಘದ ಕಾರ್ಯದರ್ಶಿ ನಾಗರಾಜಶೆಟ್ಟಿ ಮಾತನಾಡಿ, ಸೆಪ್ಟೆಂಬರ್ 25ರಂದು ಕುಶಾಲನಗರ ಎಪಿಸಿಎಂಎಸ್ ಸುವರ್ಣ ಮಹೋತ್ಸವ ಸಭಾಂಗಣದಲ್ಲಿ ನಡೆಯಲಿರುವ ಬೆಳ್ಳಿ ಹಬ್ಬ ಸಮಾರಂಭದ ಉದ್ಘಾಟನೆಯನ್ನು ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್ ಬೋಸರಾಜು ನೆರವೇರಿಸಲಿದ್ದಾರೆ. ಕುಶಾಲನಗರ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾದ ಎಂ ಎನ್ ಚಂದ್ರಮೋಹನ್ ಅಧ್ಯಕ್ಷತೆಯಲ್ಲಿ ನಡೆಯುವ ಸಮಾರಂಭದಲ್ಲಿ ಮಡಿಕೇರಿ ವಿಧಾನ ಸಭಾ ಕ್ಷೇತ್ರ ಶಾಸಕರಾದ ಡಾ. ಮಂಥರ್ ಗೌಡ ಮತ್ತು ಮಾಜಿ ಸಚಿವರಾದ ಎಂ.ಪಿ ಅಪ್ಪಚ್ಚು ರಂಜನ್ ಸ್ಮರಣ ಸಂಚಿಕೆ ಬಿಡುಗಡೆ ಮಾಡಲಿದ್ದಾರೆ. ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಮತ್ತು ವಿರಾಜಪೇಟೆ ವಿಧಾನ ಸಭಾ ಕ್ಷೇತ್ರ ಶಾಸಕರಾದ ಎ.ಎಸ್ ಪೊನ್ನಣ್ಣ ಮತ್ತು ಕೊಡಗು-ಮೈಸೂರು ಲೋಕಸಭಾ ಕ್ಷೇತ್ರದ ಸಂಸದರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ 25 ವರ್ಷಗಳ ಕಾಲ ಸಂಘದ ಅದ್ಯಕ್ಷರುಗಳಾಗಿ ಸೇವೆ ಸಲ್ಲಿಸಿದ ಪ್ರಮುಖರಿಗೆ ಸನ್ಮಾನಿಸಿ ಗೌರವಿಸಲಿದ್ದಾರೆ ಎಂದು ತಿಳಿಸಿದರು.
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷರಾದ ಶಿವಾನಂದ ತಗಡೂರು ಅವರು ಆಶಯ ಭಾಷಣ ಮಾಡುವರು. ಶಕ್ತಿ ಪ್ರಧಾನ ಸಂಪಾದಕರಾದ ಜಿ ರಾಜೇಂದ್ರ, ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾದ ಬಿ ಆರ್ ಸವಿರಾ ರೈ, ರಾಜ್ಯ ಉಪಾಧ್ಯಕ್ಷರುಗಳಾದ ರಮೇಶ್ ಕುಟ್ಟಪ್ಪರವರು ಸಾಧಕರಿಗೆ ಸನ್ಮಾನ ಕಾರ್ಯಕ್ರಮ ನಡೆಸಿಕೊಡಲಿದ್ದಾರೆ.
ತಾಲೂಕು ಸಂಘದ ಪತ್ರಕರ್ತರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ವಿಧಾನ ಪರಿಷತ್ ಸದಸ್ಯರಾದ ಸುಜಾ ಕುಶಾಲಪ್ಪ ಮತ್ತು ಕುಶಾಲನಗರ ತಾಲೂಕು ಗ್ಯಾರೆಂಟಿ ಅನುಷ್ಟಾನ ಸಮಿತಿಯ ಅಧ್ಯಕ್ಷರಾದ ವಿ.ಪಿ ಶಶಿಧರ್ ಅವರು ನೆರವೇರಿಸುವರು.
ಪತ್ರಕರ್ತರ ಜಿಲ್ಲಾ ಮಟ್ಟದ ಕ್ರಿಕೆಟ್ ಪಂದ್ಯಾಟದಲ್ಲಿ ವಿಜೇತರಾದ ತಂಡದ ಆಟಗಾರರಿಗೆ ರಾಜ್ಯ ವನ್ಯಜೀವಿ ಮಂಡಳಿ ಸದಸ್ಯರಾದ ಮೇರಿಯಂಡ ಸಂಕೇತ್ ಪೂವಯ್ಯ, ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಬಿ ಸಿ ಲೋಕೇಶ್ ಹಾಗೂ ಕುಶಾಲನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷರಾದ ಪ್ರಮೋದ್ ಮತ್ತಪ್ಪ ಬಹುಮಾನ ವಿತರಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಕೊಡಗು ಪ್ರೆಸ್ ಕ್ಲಬ್ ಅಧ್ಯಕ್ಷರಾದ ಬೊಳ್ಳಜಿರ ಅಯ್ಯಪ್ಪ, ಸಂಘದ ರಾಷ್ಟೀಯ ಸಮಿತಿ ಸದಸ್ಯರಾದ ಸುನಿಲ್ ಪೊನ್ನೆಟ್ಟಿ, ರಾಜ್ಯ ಸಮಿತಿ ಸದಸ್ಯರಾದ ಟಿ ಎನ್ ಮಂಜುನಾಥ್ ಪಾಲ್ಗೊಳ್ಳಲಿದ್ದಾರೆ ಎಂದರು.
ಈ ಸಂದರ್ಭ ಗೋಷ್ಟಿಯಲ್ಲಿ ಸಂಘದ ಪ್ರಧಾನ ಕಾರ್ಯದರ್ಶಿ ವನಿತಾ ಚಂದ್ರಮೋಹನ್, ಕ್ರೀಡಾ ಸಮಿತಿಯ ಸಂಚಾಲಕರಾದ ಕೆ.ಜೆ. ಶಿವರಾಜ್,
ಬೆಳ್ಳಿ ಹಬ್ಬ ಸ್ವಾಗತ ಸಮಿತಿ ಸಹ ಸಂಚಾಲಕರಾದ ವಿನೋದ್ ಹೆಚ್.ವಿ, ಪ್ರಚಾರ ಸಮಿತಿ ಸಂಚಾಲಕರಾದ ರಘು ಹೆಬ್ಬಾಲೆ, ಹಾಜರಿದ್ದರು.

Related Articles

Leave a Reply

Your email address will not be published. Required fields are marked *

Back to top button
error: Content is protected !!