ಸುದ್ದಿಗೋಷ್ಠಿ

ಕರವೇ ಜಿಲ್ಲಾ ಸಂಚಾಲಕ ರಾಜೀನಾಮೆ, ಮಹಿಳಾ ಘಟಕ ತಟಸ್ಥ

ಕುಶಾಲನಗರ, ಜ 08: ಹೆಚ್.ಶಿವರಾಮೇಗೌಡರ ಕರ್ನಾಟಕ ರಕ್ಷಣಾ ವೇದಿಕೆಯ ಜಿಲ್ಲಾ ಸಂಚಾಲಕರ ರಾಜೀನಾಮೆಯನ್ನು ಅಂಗೀಕರಿಸಲಾಗಿದೆ ಎಂದು ಕರವೇ ಜಿಲ್ಲಾ ಉಪಾಧ್ಯಕ್ಷ ರಾಜಶೇಖರ ಗೌಡ ವಿ.ಎಸ್.ಅವರು ತಿಳಿಸಿದ್ದಾರೆ.

ಕುಶಾಲನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲಾ ಸಂಚಾಲಕರಾಗಿದ್ದ ಗೋವಿಂದರಾಜ್ ದಾಸ್ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಜಿಲ್ಲಾಧ್ಯಕ್ಷ ಬಿ.ಎ.ದಿನೇಶ್ ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ಕುಶಾಲನಗರದಲ್ಲಿ ಇತ್ತೀಚಿಗೆ ನಡೆದ ಜಿಲ್ಲಾಮಟ್ಟದ ಸರ್ವ ಸದಸ್ಯರ ಸಭೆಯಲ್ಲಿ ಚರ್ಚಿಸಿ ಜಿಲ್ಲಾ ಸಂಚಾಲಕರ ರಾಜೀನಾಮೆಯನ್ನು ಅಂಗೀಕರಿಸಲಾಗಿದೆ. ಇನ್ನು ಮುಂದೆ ಅವರು ಈ ಸಂಘಟನೆ ಹೆಸರನ್ನು ದುರ್ಬಳಕೆ ಮಾಡದಂತೆ ಸೂಚಿಸಿದರು. ಸಭೆಯ ತೀರ್ಮಾನದಂತೆ ಜಿಲ್ಲಾ ಹಾಗೂ ತಾಲೂಕು ಮಹಿಳಾ ಘಟಕಗಳನ್ನು ತಟಸ್ಥಗೊಳಿಸಲಾಗಿದೆ ಎಂದು ತಿಳಿಸಿದರು.
ಕುಶಾಲನಗರ ಘಟಕ ಅಧ್ಯಕ್ಷ ಎಂ.ಎಸ್.ಮಣಿಕಂಠ ಮಾತನಾಡಿ, ಜಿಲ್ಲಾ ಸಂಚಾಲಕ ಗೋವಿಂದರಾಜ್ ದಾಸ್ ಅವರು ಕರವೇ ಜಿಲ್ಲಾಧ್ಯಕ್ಷರು ಹಾಗೂ ರಾಜ್ಯಾಧ್ಯಕ್ಷರಿಗೆ ವಾಟ್ಸಾಪ್ ಮೂಲಕ ರಾಜೀನಾಮೆ ಪತ್ರ ರವಾನಿಸಿದ್ದರು. ಜಿಲ್ಲಾಮಟ್ಟದ ಸರ್ವ ಸದಸ್ಯ ಸಭೆಗೂ ಕೂಡ ಆಗಮಿಸಿರಲಿಲ್ಲ. ಈ ಹಿನ್ನೆಲೆಯಲ್ಲಿ ಅವರ ರಾಜೀನಾಮೆ ಅಂಗೀಕರಿಸಲಾಗಿದೆ. ಪ್ರತ್ಯೇಕ ಮಹಿಳಾ ಘಟಕಗಳನ್ನು ತಟಸ್ಥಗೊಳಿಸಿದ್ದು ಮಹಿಳೆಯರು ಜಿಲ್ಲಾ ಸಂಘಟನೆ ಒಳಗೆ ಕಾರ್ಯಾನಿರ್ವಹಿಸಲಿದ್ದಾರೆ ಎಂದು ತಿಳಿಸಿದರು.
ಗೋಷ್ಠಿಯಲ್ಲಿ ಕರವೇ ಜಿಲ್ಲಾ ಗೌರವಾಧ್ಯಕ್ಷ ಕೆ.ಚಂದ್ರು, ಕುಶಾಲನಗರ ತಾಲೂಕು ಅಧ್ಯಕ್ಷ ಕೆ.ಎಸ್.ಶಿವ, ಉಪಾಧ್ಯಕ್ಷ ಕೆ.ಟಿ.ಲಿಂಗರಾಜು, ತಾಲೂಕು ಸಂಚಾಲಕ ಜಯರಾಜ್ ಆಚಾರ್ಯ ಇದ್ದರು.

Related Articles

Leave a Reply

Your email address will not be published. Required fields are marked *

Back to top button
error: Content is protected !!