ಕುಶಾಲನಗರ, ಸೆ.19: ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯಲ್ಲಿ ವಿದ್ಯಾರ್ಥಿಗಳು ಶಿಕ್ಷಣದ ಜೊತೆಗೆ ಶಿಸ್ತು- ಸಂಯಮ, ಉತ್ತಮ ನಾಯಕತ್ವ ಗುಣ, ರಾಷ್ಟ್ರೀಯ ಭಾವೈಕ್ಯತೆ ಹಾಗೂ
ಮಾನವೀಯ ಮೌಲ್ಯಗಳನ್ನು ಕಲಿಯುವ ಮೂಲಕ ದೇಶದಲ್ಲಿ ಭಾವೈಕ್ಯತೆ ಬೆಳೆಯಲು ಸಹಾಯವಾಗುತ್ತದೆ ಎಂದು ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ನ ಕೊಡಗು ಜಿಲ್ಲಾ ಸಂಸ್ಥೆಯ ಪ್ರಧಾನ ಆಯುಕ್ತ ಕೆ.ಟಿ.ಬೇಬಿಮ್ಯಾಥ್ಯೂ ಗುರುವಾರ ಹೇಳಿದರು.
ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯ ಕುಶಾಲನಗರ ತಾಲ್ಲೂಕು ಸ್ಥಳೀಯ ಸಂಸ್ಥೆಯ ವತಿಯಿಂದ ಮುಳ್ಳುಸೋಗೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸಭಾಂಗಣದಲ್ಲಿ ಗುರುವಾರ ವಿದ್ಯಾರ್ಥಿಗಳಿಗೆ ಏರ್ಪಡಿಸಿದ್ದ ದೇಶಭಕ್ತಿ ಗೀತೆ ಗಾಯನ ಸ್ಪರ್ಧಾ ಕಾರ್ಯಕ್ರಮ ಹಾಗೂ ಸಂಸ್ಥೆಯ ವಾರ್ಷಿಕ ಮಹಾಸಭೆಯನ್ನು ಉದ್ಘಾಟಿಸಿ ಮಾತನಾಡಿದರು.
ಮಕ್ಕಳಲ್ಲಿ ಕ್ರಿಯಾಶೀಲತೆ ಬೆಳೆಸಲು ಸಹಕಾರಿಯಾಗಿರುವ
ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯು ಶಾಲಾ ಶಿಕ್ಷಣ ಇಲಾಖೆಯ ಅವಿಭಾಜ್ಯ ಅಂಗವಾಗಿದೆ. ವಿದ್ಯಾರ್ಥಿಗಳಲ್ಲಿ ದೇಶಪ್ರೇಮ ಮತ್ತು ನಾಯಕತ್ವ, ಶಿಸ್ತು ಬೆಳೆಯಲು ಸೂಕ್ತ ವೇದಿಕೆ’ ಒದಗಿಸುತ್ತಿದೆ . ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಸ್ಕೌಟ್ ಮತ್ತು ಗೈಡ್ ಸಹಕಾರಿಯಾಗಲಿದೆ ಎಂದರು.
ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳು
ಸದಾಕಾಲ ಸೇವಾ ಚಟುವಟಿಕೆಗಳಲ್ಲಿ ಭಾಗಿಗಳಾಗಿರುತ್ತಾರೆ. ಕೋವಿಡ್ ಸಂದರ್ಭದಲ್ಲಿ ಸ್ವಯಂ ಸೇವಕರು ಆರೋಗ್ಯ ಇಲಾಖೆ ಮತ್ತು ಪೊಲೀಸ್
ಇಲಾಖೆಯವರೊಂದಿಗೆ ಹಗಲಿರುಳು ಶ್ರಮಿಸಿದ್ದಾರೆ ಎಂದು ಬೇಬಿಮ್ಯಾಥ್ಯೂ
ಶ್ಲಾಘಿಸಿದರು.
ಅಧ್ಯಕ್ಷತೆ ವಹಿಸಿದ್ದ ಸ್ಥಳೀಯ
ಸಂಸ್ಥೆಯ ಅಧ್ಯಕ್ಷ ಡಾ ಪ್ರವೀಣ್ ದೇವರಗುಂಡ ಸೋಮಪ್ಪ ಮಾತನಾಡಿ,
ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳು
ಸಾಮಾಜಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಲು ಉತ್ತಮ ವೇದಿಕೆ ಒದಗಿಸುತ್ತದೆ ಎಂದು ತಿಳಿಸಿದರು.
ಇಂತಹ ಸ್ಪರ್ಧೆಗಳು ಮಕ್ಕಳಲ್ಲಿ ದೇಶಪ್ರೇಮ ಹಾಗೂ ರಾಷ್ಟ್ರೀಯ ಭಾವೈಕ್ಯತೆ ಬೆಳೆಸಲು ಸಹಕಾರಿಯಾಗಿವೆ ಎಂದರು.
ಜಿಲ್ಲಾ ಸಂಸ್ಥೆಯ ಕಾರ್ಯದರ್ಶಿ ಎಂ.ಎಂ.ವಸಂತಿ ಮಾತನಾಡಿ, ಎಲ್ಲರೂ ಜತೆಗೂಡಿ ಈ ಸಂಸ್ಥೆಯನ್ನು ಮುನ್ನಡೆಸಬೇಕು ಎಂದರು.
ಜಿಲ್ಲಾ ಪ್ರೌಢಶಾಲಾ ದೈಹಿಕ ಶಿಕ್ಷಣ ಶಿಕ್ಷಕರ ಗ್ರೇಡ್ -1 ರ ಸಂಘದ ಅಧ್ಯಕ್ಷ
ಡಾ ಸದಾಶಿವಯ್ಯ ಎಸ್.
ಪಲ್ಲೇದ್ ಮಾತನಾಡಿ,
ಸಂಸ್ಥೆಯ ಸೇವಾ ಚಟುವಟಿಕೆಗಳ ಕುರಿತು ಶ್ಲಾಘಿಸಿದರು.
ಸಂಸ್ಥೆಯ ಜಿಲ್ಲಾ ಕೇಂದ್ರ ಸ್ಥಾನೀಕ ಆಯುಕ್ತ
ಎಚ್.ಆರ್.ಮುತ್ತಪ್ಪ, ಜಿಲ್ಲಾ
ಸ್ಕೌಟ್ಸ್ ಸಂಸ್ಥೆಯ ಸಹಾಯಕ ಆಯುಕ್ತ ಟಿ.ಜಿ.ಪ್ರೇಮಕುಮಾರ್, ಜಿಲ್ಲಾ
ಗೈಡ್ಸ್ ಸಂಸ್ಥೆಯ ಸಹಾಯಕ ಆಯುಕ್ತೆ ಸಿ.ಎಂ.ಸುಲೋಚನ, ಸಂಸ್ಥೆಯ ಜಿಲ್ಲಾ ಸಂಘಟಕಿ ಯು.ಸಿ.ದಮಯಂತಿ,
ಸ್ಥಳೀಯ ಸಂಸ್ಥೆಯ ಕಾರ್ಯಾಧ್ಯಕ್ಷ ಎ.ಎಸ್. ತಮ್ಮಯ್ಯ, ಉಪಾಧ್ಯಕ್ಷರಾದ ರಾಜೇಗೌಡ, ಕೆ.ಆರ್.ರೋಹಿಣಿ, ಎ.ಸಿ. ಶಾಂತಿ,
ಜಿ.ಎಸ್.
ತೀರ್ಥೇಶ್ ಕುಮಾರ್, ಕೆ.ಪಿ.ರಾಜು, ಕೆ.ವಿ.ಅರುಣ, ಕಾರ್ಯದರ್ಶಿ ಎಂ.ಎಸ್.ಗಣೇಶ್ , ಸಹ ಕಾರ್ಯದರ್ಶಿ ಎಸ್.ಆರ್. ಶಿವಲಿಂಗ, ಕೋಶಾಧಿಕಾರಿ ಎನ್.ಎಸ್.
ನರೇಶ್ ಕುಮಾರ್,
ಸದಸ್ಯರಾದ
ಕೆ.ಎಸ್.ಶಿವಕುಮಾರ್,
ಕೆ.ಎಸ್.ಹರಿಪ್ರಸಾದ್,
ಶಾಲೆಯ ಮುಖ್ಯ ಶಿಕ್ಷಕಿ ಭಾಗ್ಯ ,
ಸಂಸ್ಥೆಯ ವಿವಿಧ ಶಾಲಾ ದಳಗಳ ಕ್ಯಾಪ್ಟನ್ ಗಳು , ಸಂಸ್ಥೆಯ ವಿವಿಧ ಹಂತದ ಪದಾಧಿಕಾರಿಗಳು ಸೇರಿದಂತೆ ಸ್ಕೌಟ್ಸ್ ಮತ್ತು ಗೈಡ್ಸ್ ನ ಶಿಕ್ಷಕರು ಹಾಗೂ ಶಿಕ್ಷಕಿಯರು ಇದ್ದರು.
*ಮುಖ್ಯ ಶಿಕ್ಷಕಿಗೆ ಸನ್ಮಾನ*:
ಈ ಸಂದರ್ಭದಲ್ಲಿ ಸ್ಕೌಟ್ಸ್, ಗೈಡ್ಸ್ ಚಟುವಟಿಕೆಗಳಿಗೆ ಹೆಚ್ಚಿನ ಸಹಕಾರ ನೀಡುತ್ತಿರುವ
ಮುಳ್ಳುಸೋಗೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿ ಭಾಗ್ಯ ಅವರನ್ನು ಸಂಸ್ಥೆಯ ವತಿಯಿಂದ ಸಂಸ್ಥೆಯ ಜಿಲ್ಲಾ ಪ್ರಧಾನ ಆಯುಕ್ತ ಕೆ.ಟಿ.ಬೇಬಿಮ್ಯಾಥ್ಯೂ ಸನ್ಮಾನಿಸಲಾಯಿತು.
Back to top button
error: Content is protected !!