ಕಾಮಗಾರಿ

ಯೋಜನೆಗಳ ಜನಪ್ರಿಯತೆ, ಇಲ್ಲಸಲ್ಲದ ಆರೋಪ: ವಿರೋಧ ಪಕ್ಷಗಳಿಂದ ಮೊಸರಲ್ಲಿ ಕಲ್ಲು ಹುಡುಕುವ ಕೆಲಸ: ಸಚಿವ ಕೆ.ವೆಂಕಟೇಶ್

ಪಿರಿಯಾಪಟ್ಟಣ, ಸೆ: 21: ಸರ್ಕಾರ ಜನಸಾಮಾನ್ಯರ ನಾಡಿಮಿಡಿತವನ್ನು ಅರಿತು ಶಾಶ್ವತವಾದ ಯೋಜನೆಗಳನ್ನು ಜಾರಿಗೆ ತಂದು ಎಲ್ಲಾ ಕ್ಷೇತ್ರಗಳಲ್ಲೂ ಅಮೂಲಾಗ್ರವಾದ ಬದಲಾವಣೆ ತರುತ್ತಿರುವುದನ್ನು ಸಹಿಸದೆ ವಿರೋಧ ಪಕ್ಷಗಳು ಅನಗತ್ಯ ಆರೋಪ ಮಾಡುತ್ತಿವೆ ಎಂದು ಪಶುಸಂಗೋಪನೆ ಮತ್ತು ರೇಷ್ಮೆ ಖಾತೆ ಸಚಿವ ಕೆ.ವೆಂಕಟೇಶ್ ತಿಳಿಸಿದರು.

ತಾಲೂಕಿನ ಅರಳಿಮರದ ಕೊಪ್ಪಲು, ಕೂರ್ಗಲ್ಲು ಗ್ರಾಮಗಳಲ್ಲಿ ವಿವಿಧ ಕಾಮಗಾರಿಗಳಿಗೆ ಚಾಲನೆ ನೀಡಿ ಮಾತನಾಡಿದರು.
ಶ್ರೀ ಸಾಮಾನ್ಯರಿಗೆ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಲು ಸರ್ಕಾರ ಅನ್ನಭಾಗ್ಯ,
ಶಕ್ತಿ ಯೋಜನೆ , ಯೂವನಿಧಿ, ಉಚಿತ ವಿದ್ಯುತ್ ಸೇರಿದಂತೆ ಅನೇಕ ಜನಪರ ಕಾರ್ಯಕ್ರಮಗಳನ್ನು ನೀಡುವಲ್ಲಿ ಯಶಸ್ವಿಯಾಗಿದೆ ಇದನ್ನು ಕಂಡು ಬಿಜೆಪಿ, ಜೆಡಿಎಸ್ ಪಕ್ಷದ ನಾಯಕರು ಜನರ ಗಮನವನ್ನು ಬೇರೆಡೆ ಸೆಳೆದು ಸರ್ಕಾರದ ವಿರುದ್ಧ ವಿನಃ ಕಾರಣ ಅಪಪ್ರಚಾರ ಮಾಡುತ್ತಾ ಬೇರೆಡೆ ಸೆಳೆಯಲು ಯತ್ನಿಸುತ್ತಿದ್ದಾರೆ ಎಂದರು.
ತಾಲ್ಲೂಕಿನ ಅಭಿವೃದ್ಧಿಗಾಗಿ ನಾನಾ ಇಲಾಖೆಗಳಿಂದ ಅನುದಾನ ತಂದು ತಾಲ್ಲೂಕನ್ನು ಅಭಿವೃದ್ಧಿ ಪಥದಲ್ಲಿ ಕೊಂಡೊಯ್ಯುವ ಕೆಲಸ ಮಾಡುತ್ತಿದ್ದೇನೆ ಇದನ್ನು ಸಹಿಸದ ವಿರೋಧಿಗಳು ಮೊಸರಲ್ಲಿ ಕಲ್ಲು ಹುಡುಕುವ ಕೆಲಸ ಮಾಡುತ್ತಿವೆ. ನಾನು 2017 ರಲ್ಲಿ ಶಂಕುಸ್ಥಾಪನೆ ನೆರವೇರಿಸಿದ್ದ
ಕಾವೇರಿ ನದಿಯಿಂದ 79 ಗ್ರಾಮಗಳ 150 ಕೆರೆಗಳಿಗೆ ನೀರು ತುಂಬಿಸುವ ಯೋಜನೆಯನ್ನು ಪೂರ್ಚಾಣಗೊಳಿಸಲು 6 ವರ್ಷಗಳ ನಂತರ ನಾನೇ ಬರಬೇಕಾಯಿತು. ಕೇವಲ ಗ್ರಾಮ ಪಂಚಾಯಿತಿ ಅನುದಾನದಲ್ಲಿ ಬರುವ ಹಣ ಬಳಸಿಕೊಂಡು ರಸ್ತೆ , ಚರಂಡಿ ಮಾಡಿಸಿ ಇದೆ ಸಾಧನೆ ಎಂದು ಬೀಗುತ್ತಿರುವರು ಅಭಿವೃದ್ಧಿ ಪಾಠವನ್ನು ಹೇಳಲು ಹೊರಟಿದ್ದಾರೆ ಎಂದು ದೂರಿದರು. ತಾಲ್ಲೂಕಿನಲ್ಲಿ ಜನಸಾಮಾನ್ಯರ ಅಗತ್ಯತೆಗಳನ್ನು ಅರಿತು ಕೆಲಸ ಮಾಡುತ್ತಿದ್ದೇನೆ. ಶಾಶ್ವತವಾದ ಯೋಜನೆಗಳನ್ನು ರೂಪಿಸುವ ನಿಟ್ಟಿನಲ್ಲಿ ಕೆಲಸ ಮಾಡಿದ ತೃಪ್ತಿ ನನಗಿದೆ, ತಾಲೂಕಿನ ರೈತರಿಗಾಗಿ ಕರಡಿಲಕ್ಕನ ಕೆರೆ ಏತ ನೀರಾವರಿ ಮತ್ತು ಕಾವೇರಿ ನದಿಯಿಂದ 150 ಕೆರೆಗಳಿಗೆ ನೀರು ತುಂಬಿಸುವ ಯೋಜನೆ ಸೇರಿದಂತೆ ಹತ್ತು ಹಲವು ಯೋಜನೆಗಳನ್ನು ಜಾರಿಗೊಳಿಸುವ ಮೂಲಕ ಜನರ ಋಣ ತೀರಿಸುವ ಕೆಲಸ ಮಾಡಿದ್ದೇನೆ. ದೂರು ಶಿಕ್ಷಣ ಕೇಂದ್ರ, ಪಶು ಚಿಕಿತ್ಸಾಲಯ, ರಸ್ತೆಗಳು, ಸೇರಿದಂತೆ ಅನೇಕ ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ ನೀಡಿದ್ದೇನೆ. ಇನ್ನು ತಾಲೂಕಿನಲ್ಲಿ ವಿದ್ಯುತ್ ಸಮಸ್ಯೆಯನ್ನು ಬಗೆಹರಿಸಲು 150 ಎಕ್ಕರೆಯ ಜಾಗವನ್ನು ಗುರುತಿಸಿ ಕುಸುಮ್ ಯೋಜನೆಯ ಸೌರ ವಿದ್ಯುತ್ ಯೋಜನೆಯನ್ನು ಮಂಜೂರು ಮಾಡಿಸಿದ್ದೇನೆ. ಆ ಮೂಲಕ ತಾಲೂಕಿಗೆ ಸಾಕಷ್ಟು ವಿದ್ಯುತ್ ಪೂರೈಸಲು ಸಾಧ್ಯವಾಗುತ್ತದೆ. ಈ ಎಲ್ಲಾ ಯೋಜನೆಗಳು ಪರಿಪೂರ್ಣವಾಗಲು ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯರವರು ಸಾಕಷ್ಟು ಅನುದಾನವನ್ನು ತಾಲೂಕಿಗೆ ನೀಡಿದರ ಪರಿಣಾಮ ಅವರನ್ನು ಸದಾ ನೆನೆಯಬೇಕಾಗಿದೆ ಎಂದರು.
ಈ ಸಂದರ್ಭದಲ್ಲಿ ತಹಸೀಲ್ದಾರ್ ನಿಸರ್ಗ ಪ್ರಿಯಾ, ತಾಪಂ ಇಓ ಸುನಿಲ್ ಕುಮಾರ್, ಆಶ್ರಯ ಸಮಿತಿ ಅಧ್ಯಕ್ಷ ನಿತಿನ್ ವೆಂಕಟೇಶ್, ಇಇಗಳಾದ ವೆಂಕಟೇಶ್, ಪುಟ್ಟಸ್ವಾಮಿ, ನವೀನ್ , ರಘುಪತಿ, ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಪ್ರಸಾದ್, ಪಶುಪಾಲನಾ ಇಲಾಖೆ ಸಹಾಯಕ ನಿರ್ದೇಶಕ ಸೋಮಯ್ಯ , ರೇಷ್ಮೆ ಇಲಾಖೆ ಸಹಾಯಕ ನಿರ್ದೇಶಕ ಮಾದೇಶ್, ಮುಖಂಡರಾದ ಡಿ.ಟಿ.ಸ್ವಾಮಿ, ರಹಮತ್ ಜಾನ್ ಬಾಬು, ಈ.ಪಿ.ಲೋಕೇಶ್, ರಮೇಶ್ , ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

Related Articles

Leave a Reply

Your email address will not be published. Required fields are marked *

Back to top button
error: Content is protected !!