ಕುಶಾಲನಗರ, ಸೆ 24: ಕುಶಾಲನಗರ ಪಟ್ಟಣ ಪಂಚಾಯಿತಿಯ ಎರಡನೆಯ ಅವಧಿಯ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನ ಕಾಂಗ್ರೆಸ್ ಪಾಲಾಗಲಿದೆ ಎಂದು ಕುಶಾಲನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ವಿ ಪಿ ಶಶಿಧರ್ ವಿಶ್ವಾಸ ವ್ಯಕ್ತಪಡಿಸಿದರು.
ಕಾಂಗ್ರೆಸ್ ಪಕ್ಷದ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,ನ್ಯಾಯಾಲಯದ ಮೂಲಕ ಚುನಾವಣೆಯನ್ನು ರದ್ದುಗೊಳಿಸಲು ನ್ಯಾಯಾಲಯದ ಕೆಲವರು ಪ್ರಯತ್ನ ನಡೆಸಿದ್ದು ಇದೀಗ ನ್ಯಾಯಾಲಯದಲ್ಲಿ ಅರ್ಜಿ ವಜಾಗೊಂಡಿದೆ. ಸೆ. 25 ರಂದು ಚುನಾವಣೆ ನಡೆಯಲಿದೆ ನಡೆಯಲಿದೆ. ಇದರಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಬಹುಮತದಿಂದ ಜಯಗಳಿಸಲಿದ್ದಾರೆ ಎಂದರು.
ಇತ್ತೀಚೆಗೆ ತಾಲೂಕು ತಹಸಿಲ್ದಾರ್ ಕಚೇರಿ ಮುಂಭಾಗ ಬಿಜೆಪಿ ಪ್ರಮುಖರು ಪ್ರತಿಭಟನೆ ನಡೆಸುತ್ತಿದ್ದ ವೇಳೆ ಅಲ್ಲಿಗೆ ಆಗಮಿಸಿದ ವಿರೋಧ ಪಕ್ಷದ ನಾಯಕ ಆರ್ ಅಶೋಕ್ ತಾಲೂಕು ದಂಡಾಧಿಕಾರಿಗಳೊಂದಿಗೆ ನಡೆದುಕೊಂಡ ರೀತಿ ಖಂಡಿಸಿದ ಅವರು, ಇದು ಅಶೋಕ್ ಅವರ ಹುದ್ದೆಯ ಘನತೆಗೆ ತಕ್ಕುದಲ್ಲ ಎಂದರು.
ದಾರಿ ಹೋಕರಂತೆ ತಾಲೂಕು ತಹಸಿಲ್ದಾರ್ ಅವರ ಮೇಲೆ ಪ್ರಹಾರ ಮಾಡುವ ಮೂಲಕ ಅವರ ಘನತೆಯನ್ನು ಅವರೇ ಕುಗ್ಗಿಸಿಕೊಂಡಿದ್ದಾರೆ. ಅಧಿಕಾರಿಗಳು ನಿಯಮ ಮೀರಿ ನಡೆದಲ್ಲಿ ಮೇಲಧಿಕಾರಿಗಳ ಗಮನಕ್ಕೆ ತರಬಹುದೆಂಬ ಕನಿಷ್ಠ ಜ್ಞಾನ ಪ್ರದರ್ಶಿಸಿದ ಹೋದರು ಎಂದು ಆರೋಪಿಸಿದರು.
ಕುಶಾಲನಗರ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪ್ರಮೋದ್ ಮುತ್ತಪ್ಪ ಮಾತನಾಡಿ, ಪಟ್ಟಣ ಪಂಚಾಯಿತಿ ಅಧ್ಯಕ್ಷ ಉಪಾಧ್ಯಕ್ಷ ಚುನಾವಣೆಯಲ್ಲಿ ತಮ್ಮ ಪಕ್ಷದ ಮೂಲಕ ಸ್ಪಷ್ಟ ಬಹುಮತ ಪಡೆಯುವುದರೊಂದಿಗೆ ಆಯ್ಕೆ ಆಗುವುದು ಖಚಿತ ಎಂದರು.
ಈಗಾಗಲೇ ತಮ್ಮ ಪಕ್ಷದಲ್ಲಿ ಅಗತ್ಯವಾಗಿ ಬೇಕಾಗಿರುವ ಬಹುಮತ ಸಂಖ್ಯೆ ಇರುವುದಾಗಿ ಅವರು ಅಂಕಿ ಅಂಶಗಳನ್ನು ನೀಡಿದರು.
ಜೆಡಿಎಸ್ ಪಕ್ಷದ ಸದಸ್ಯರು ತಮ್ಮೊಂದಿಗೆ ಬೆಂಬಲ ವ್ಯಕ್ತಪಡಿಸುವ ಸಾಧ್ಯತೆ ಬಗ್ಗೆ ಕೂಡ ಅವರು ಸ್ಪಷ್ಟನೆ ನೀಡಿದರು.
ಗೋಷ್ಠಿಯಲ್ಲಿ ಪುರಸಭೆ ಸದಸ್ಯರಾದ ಜಯಲಕ್ಷ್ಮಮ್ಮ ಜಯಲಕ್ಷ್ಮಿ ಚಂದ್ರ, ಎಂ. ಕೆ. ದಿನೇಶ್, ಕಲಿಮುಲ್ಲಾ, ನಾಮನಿರ್ದೇಶಿತ ಸದಸ್ಯರಾದ ಜಗದೀಶ್ ,ನವೀನ್, ಪದ್ಮ, ಕಾರ್ಮಿಕ ಘಟಕದ ಅಧ್ಯಕ್ಷ ಶಿವಶಂಕರ್ ಇದ್ದರು.
Back to top button
error: Content is protected !!