ಕುಶಾಲನಗರ, ಸೆ 24: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ ಸಿ ಟ್ರಸ್ಟ್ ಸೋಮವಾರಪೇಟೆ
ಮಹಿಳಾ ಜ್ಞಾನವಿಕಾಸ ಕಾರ್ಯಕ್ರಮದಡಿಯಲ್ಲಿ ಶಾಂತಳ್ಳಿ ವಲಯದ ಕಿಬ್ಬೆಟ್ಟ ಗ್ರಾಮದಲ್ಲಿ ಸರಸ್ವತಿ ಜ್ಞಾನವಿಕಾಸ ಕೇಂದ್ರದ ವಾರ್ಷಿಕೋತ್ಸವ ಕಾರ್ಯಕ್ರಮ ನಡೆಸಲಾಯಿತು
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಒಕ್ಕೂಟದ ಅಧ್ಯಕ್ಷರಾದ ಶ್ರೀಮತಿ ರೇಷ್ಮಾ ರವರು ವಹಿಸಿಕೊಂಡಿದ್ದರು. ಕಾರ್ಯಕ್ರಮದ ಉದ್ಘಾಟನೆಯನ್ನು ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾ ಅಧ್ಯಕ್ಷರಾದ ದೀಪಕ್ ರವರು ನೆರವೇರಿಸಿ ಯೋಜನೆಯಿಂದ ಸಿಕ್ಕಿರುವಂತಹ ಹಲವು ಅನುದಾನಗಳ ಬಗ್ಗೆ ಹಾಗೂ ಕಾರ್ಯಕ್ರಮಗಳು ಹಾಗೂ ಕುಟುಂಬ ನಿರ್ವಹಣೆ ಎಲ್ಲಿ ಮಹಿಳೆಯರ ಜವಾಬ್ದಾರಿಗಳ ಮಾಹಿತಿ ನೀಡಿದರು ಹಾಗೂ ಜ್ಞಾನವಿಕಾಸ ಕಾರ್ಯಕ್ರಮದ ಮೂಲಕ ಮಹಿಳೆಯರ ಸಾಮಾಜಿಕ ಆರ್ಥಿಕವಾಗಿ ಶೈಕ್ಷಣಿಕವಾಗಿ ಪ್ರಬುದ್ಧತೆಯನ್ನು ಹೊಂದಿದ ವಿಕಾಸ ಕಾರ್ಯಕ್ರಮಗಳ ಬಗ್ಗೆ ಬಹಳ ಹೆಮ್ಮೆ ಇದೆ ಎಂದು ತಿಳಿಸಿದರು ಹಾಗೂ ಒಕ್ಕೂಟದ ಮಾಜಿ ಅಧ್ಯಕ್ಷ ರಾದ ಸುಂದರ್ ರವರು ಕುಟುಂಬದ ನಿರ್ವಹಣೆಯಲ್ಲಿ ಮಹಿಳೆಯರ ಪಾತ್ರವೇನು ಕಾರ್ಯಕ್ರಮಗಳ ಕಾರ್ಯಕ್ರಮಗಳಲ್ಲಿ ಭಾಗವಹಿಸುವಿಕೆ ಕುರಿತು ಮಾಹಿತಿಯನ್ನು ನೀಡಿದರು ಇದೇ ಸಂದರ್ಭದಲ್ಲಿ ಮಹಾ ಮಳೆಗೆ ಮನೆ ಕಳೆದುಕೊಂಡ ತನುಶ್ರೀ ರವರಿಗೆ ಮನೆ ನಿರ್ಮಾಣದ ಪತ್ರವನ್ನು ವಿತರಿಸಲಾಯಿತು. ವಲಯದ ಮೇಲ್ವಿಚಾರಕರಾದ ಲಕ್ಷ್ಮಣ್ ರವರು ಜ್ಞಾನ ವಿಕಾಸ ಕಾರ್ಯಕ್ರಮ ಉದ್ದೇಶಗಳ ಬಗ್ಗೆ ತಿಳಿಸಿದರು. ಕಾರ್ಯಕ್ರಮದಲ್ಲಿ ಅಯ್ಯಪ್ಪಸ್ವಾಮಿ ದೇವಸ್ಥಾನದ ಅಧ್ಯಕ್ಷರಾದ ಜಗನ್ನಾಥ್ ಪಂಚಾಯಿತಿ ಮಾಜಿ ಸದಸ್ಯರಾದ ಜಾನಕಿ ಭಾಗವಹಿಸಿ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು ಜ್ಞಾನ ವಿಕಾಸ ಸಮನ್ವಯಾಧಿಕಾರಿ ಕವನ ಸೇವಾ ಪ್ರತಿನಿಧಿ ನಿಖಿತಾ ಜ್ಞಾನವಿಕಾಸ ತಂಡದ ಸದಸ್ಯರು ಭಾಗವಹಿಸಿದ್ದರು ಆಟೋಟ ಸ್ಪರ್ಧೆ ಆಡಿ ಬಹುಮಾನ ವಿತರಣೆ ಮಾಡಲಾಯಿತು
Back to top button
error: Content is protected !!