ಕುಶಾಲನಗರ, ಸೆ.22: ಕೂಡಿಗೆಯಲ್ಲಿರುವ ರಾಮೇಶ್ವರ ಕೂಡುಮಂಗಳೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ರಾಜ್ಯ ಅಪೆಕ್ಸ್ ಬ್ಯಾಂಕ್ ಮತ್ತು ಕೊಡಗು ಜಿಲ್ಲಾ ಕೇಂದ್ರ ಬ್ಯಾಂಕ್ ವತಿಯಿಂದ ಕೃಷಿ ಪತ್ತಿನ ಸಹಕಾರ ಸಂಘಗಳಿಗೆ ನೀಡುವ ಬಹುಮಾನಕ್ಕೆ ಭಾಜನವಾಗಿದೆ.
ಕೃಷಿ ಪತ್ತಿನ ಸಹಕಾರ ಸಂಘಗಳ ವ್ಯವಹಾರ, ನಿರ್ವಹಣೆ, ಸಾಲ ಮರುಪಾವತಿ ಸೇರಿದಂತೆ ಇಲಾಖೆಯ ನಿಯಮಾನುಸಾರ ಕೈಗೊಂಡು ಆಡಳಿತ ವ್ಯವಸ್ಥೆ ಆಧಾರ ಮೇಲೆ ನೀಡಲಾಗುವ ಪ್ರಶಸ್ತಿಯಲ್ಲಿ ರಾಜ್ಯ ಅಪೆಕ್ಸ್ ಬ್ಯಾಂಕ್ ನಿಂದ ಪ್ರಥಮ ಮತ್ತು ಜಿಲ್ಲಾ ಕೇಂದ್ರ ಬ್ಯಾಂಕ್ ನಿಂದ ದ್ವಿತೀಯ ಪ್ರಶಸ್ತಿ ನೀಡಲಾಗಿದೆ.
ಸಂಘದ ಅಧ್ಯಕ್ಷ ಕೆ.ಕೆ ಹೇಮಂತ್ ಕುಮಾರ್ ಅವರು ಪ್ರಶಸ್ತಿ ಪಡೆದುಕೊಂಡದ್ದಾರೆ.
Back to top button
error: Content is protected !!