ಕುಶಾಲನಗರ, ಸೆ 25 : ದೇಶಕಂಡ ಮಹಾನ್ ಪತ್ರಕರ್ತರಾದ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಹಾಗೂ ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಅವರ ಆದರ್ಶ ವ್ಯಕ್ತಿತ್ವವನ್ನು ಪ್ರತಿಯೊಬ್ಬರು ಮೈಗೂಡಿಸಿಕೊಳ್ಳಬೇಕು ಎಂದು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷರಾದ ಶಿವಾನಂದ ತಗಡೂರು ಹೇಳಿದರು.
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ
ಕುಶಾಲನಗರ ತಾಲ್ಲೂಕು ಘಟಕದ ವತಿಯಿಂದ ಇಲ್ಲಿನ ಎಪಿಸಿಎಂಎಸ್ಸಿ ಸುವರ್ಣ ಮಹೋತ್ಸವ ಸಭಾಂಗಣದಲ್ಲಿ ಬುಧವಾರ ಏರ್ಪಡಿಸಿದ್ದ ಹೋಬಳಿ ಕಾರ್ಯನಿರತ ಪತ್ರಕರ್ತರ ಸಂಘದ ಬೆಳ್ಳಿ ಮಹೋತ್ಸವ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಸ್ವಾತಂತ್ರ್ಯ ಪೂರ್ವದಲ್ಲಿ ಮಹಾತ್ಮಗಾಂಧಿ ಪತ್ರಿಕೋದ್ಯಮದ ಮೂಲಕ ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಟ ನಡೆಸಿದರು.ಅದೇ ರೀತಿ ಅಂಬೇಡ್ಕರ್ ಅವರು ಐದು ಪತ್ರಿಕೆಗಳ ಸಂಪಾದಕರಾಗಿ ಸೇವೆ ಸಲ್ಲಿಸಿದ್ದರು.ಅದೇ ರೀತಿ ರಾಷ್ಟ್ರಪತಿ ಎಪಿಜೆ ಅಬ್ದುಲ್ ಕಲಾಮ್ ಅವರು ಪತ್ರಿಕಾ ವಿತಕರರಾಗಿ ಹೋರಾಟದ ಬದುಕ,ಬೆಳೆದು ಬಂದ ದಾರಿ ನಮ್ಮೇಲ್ಲರ ಸ್ಪೂರ್ತಿಯಾಗಬೇಕು.ಇಂತಹ ಮಹಾನ್ ನಾಯಕರ ಆದರ್ಶ ನಮಗೆ ಬೆಳಕಾಗಬೇಕು ಎಂದು ಹೇಳಿದರು.
80 ಕಾಲಘಟ್ಟದಲ್ಲಿ ಪತ್ರಿಕೆಗಳ ಸ್ವರೂಪ ಬದಲಾವಣೆ ಕಂಡಿತು.ಮಲ್ಟಿ ನ್ಯಾಷನಲ್ ಕಂಪನಿಗಳ ಪ್ರವೇಶದ ನಂತರ ಎಲ್ಲಾ ಕ್ಷೇತ್ರಗಳು ಉದ್ಯಮವಾಗಿ ರೂಪುಗೊಂಡವು.ಅದೇ ರೀತಿ ಪತ್ರಿಕೋದ್ಯಮ, ಕ್ರೀಡಾ ಕ್ಷೇತ್ರಗಳು ಕೂಡ ಉದ್ಯಮವಾಗಿ ಬದಲಾವಣೆಯಾಗಿವೆ ಎಂದರು.
ಇಂದು ಬ್ಲಾಕ್‌ಮೇಲ್ ಪತ್ರಕರ್ತರಿಂದ ನೈಜ ಪತ್ರಕರ್ತ ಕಳೆದು ಹೋಗುವ ಸ್ಥಿತಿ ಉಂಟಾಗಿದೆ. ಬ್ಲಾಕ್ ಮೇಲ್ ಪತ್ರಕರ್ತರ ಸಂಖ್ಯೆ ಹೆಚ್ವಾಗಿದ್ದು, ಇಂತಹವರಿಂದ ಸಮಾಜಕ್ಕೆ ಕೆಷ್ಟ ಹೆಸರು ಬರುತ್ತಿದೆ.ಇಂತಹ ವ್ಯಕ್ತಿಗಳನ್ನು ಸಮಾಜ ದಿಂದ ಪತ್ರಿಕೋದ್ಯಮದಿಂದ ದೂರ ಇಡುವ ಕೆಲಸವನ್ನು ನಾವುಗಳೇ ಮಾಡಬೇಕು ಕರೆ ನೀಡಿದರು. ಪತ್ರಕರ್ತರು ಸಮಾಜದ, ಶೋಷಿತರ ,ಸಮಸ್ಯೆಗಳ ಧ್ವನಿಯಾಗಿ ಕೆಲಸ ಮಾಡಬೇಕು ಎಂದು ಸಲಹೆ ನೀಡಿದರು.
ಹೋಬಳಿ ಸಂಘದ ಬೆಳ್ಳಿ ಮಹೋತ್ಸವ ಅಂಗವಾಗಿ ಹೊರತರಲು ಉದ್ದೇಶಿರುವ ಬೆಳ್ಳಿ ಪಯಣ ಸ್ಮರಣ ಸಂಚಿಕೆಯ ಮುಖಪುಟ ಬಿಡುಗಡೆ ಮಾಡಿದ ಶಾಸಕ ಡಾ.ಮಂತರ್ ಗೌಡ ಮಾತನಾಡಿ, ಕುಶಾಲನಗರದಲ್ಲಿ ಪತ್ರಕರ್ತ ಭವನ ನಿರ್ಮಾಣ ಮಾಡಲು ಎಲ್ಲಾ ರೀತಿಯ ಸಹಕಾರ ನೀಡುವುದಾಗಿ ಭರವಸೆ ನೀಡಿದರು. ಶಾಸಕರ ಅನುದಾನದ ಜೊತೆಗೆ ದಾನಿಗಳಿಂದಲು ಸಹಕಾರ ಕೊಡಿಸಲು ಪ್ರಯತ್ನಿಸುತ್ತೇನೆ. ಈಗ ಇರುವ ಪತ್ರಕರ್ತ ಕಟ್ಟಡ ಜಾಗವನ್ನು ಪತ್ರಕರ್ತರ ಸಂಘದ ಹೆಸರಿಗೆ ಮಾಡಿಕೊಡಲು ಪುರಸಭೆ ಮುಖ್ಯಾಧಿಕಾರಿಗೆ ಸೂಚನೆ ನೀಡುತ್ತೇನೆ ಎಂದರು. ಪತ್ರಕರ್ತರು ನೈಜ ಹಾಗೂ ವಸ್ತು ಸ್ಥಿತಿ ವರದಿಗಳನ್ನು ಮಾಡುವ ಮೂಲಕ ಸಮಾಜದ ಏಳಿಗೆಗೆ ಒತ್ತು ನೀಡಬೇಕು ಎಂದರು.ಇಂದಿನ ಕಂಪ್ಯೂಟರ್ ಹಾಗೂ ಹೈಟೆಕ್ ತಂತ್ರಜ್ಞಾನ ವ್ಯವಸ್ಥೆಯಲ್ಲಿ
ಪತ್ರಕರ್ತರು ವೃತ್ತಿ ನೈಪುಣ್ಯತೆಯನ್ನು ಅಭಿವೃದ್ಧಿ ಪಡಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.
ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಮಾಜಿ ಸಚಿವ ಎಂ.ಪಿ.ಅಪ್ಪಚ್ಚುರಂಜನ್ ಮಾಜಿ ಅಧ್ಯಕ್ಷರುಗಳನ್ನು ಸನ್ಮಾನಿಸಿ
ಮಾತನಾಡಿ, ಕುಶಾಲನಗರ ಹೋಬಳಿ ಪತ್ರಕರ್ತರ ಬೆಳ್ಳಿ ಹಬ್ಬ ಆಚರಣೆ ಮಾಡುತ್ತಿರುವುದು ತುಂಬ ಸಂತೋಷದ ವಿಚಾರವಾಗಿದೆ.ಪತ್ರಕರ್ತರು ಸಮಾಜದಲ್ಲಿನ ಅಂಕುಡೊಂಕುಗಳನ್ನು ತಿದ್ದುವ ಹಾಗೂ ಸಮಸ್ಯೆಗಳನ್ನು ಬಿಂಬಿಸುವಂತ ಲೇಖನಗಳನ್ನು ಹೆಚ್ಚು ಮಡುವತ್ತ ಗಮನ ಹರಿಸಬೇಕು ಎಂದು ಸಲಹೆ ನೀಡಿದರು.
ಸಾರ್ವಜನಿಕ ಸಭೆಯಲ್ಲಿ ರಾಜಕಾರಣಿಗಳು,ಪತ್ರಕರ್ತರು ಯಾವ ರೀತಿ ಸಾಮಾಜಕ್ಕೆ ಬೆಳಕು ಚೆಲ್ಲುತ್ತಾರೆ ಎಂಬುದನ್ನು ವಿದ್ಯಾರ್ಥಿಗಳು ಅರಿತುಗೊಳ್ಳಬೇಕು ಎಂದರು.ವಿದ್ಯಾರ್ಥಿ ಶಿಸ್ತು, ಸಮಯ ಪ್ರಜ್ಞೆ ಮೈಗೂಡಿಸಿಕೊಳ್ಳಬೇಕು.ಗುರಿಯೊಂದಿಗೆ ಕಠಿಣ ಪರಿಶ್ರಮ, ಕನಸು ನೆನಸು ಮಾಡಿಕೊಳ್ಳುವತ್ತ ಪ್ರಯತ್ನ ಮಾಡಬೇಕು ಎಂದರ. ಪ್ರತಿಯೊಬ್ಬರು ಪರಿಸರ ರಕ್ಷಣೆಯಲ್ಲಿ ತಮ್ಮನ್ನು ತೊಡಗಿಸಿಕೊಳ್ಳಬೇಕು.ಈ ನಿಟ್ಟಿನಲ್ಲಿ ಚಂದ್ರಮೋಹನ್ ಅವರು ತೊಡಗಿಸಿಕೊಂಡಿದ್ದಾರೆ. ಇವರೊಂದೊಗೆ ನಾನು ಕೂಡ ಅನೇಕ ಸಸಿಗಳನ್ನು ನೆಟ್ಟಿದ್ದೇನೆ ಎಂದರು.
ಶಕ್ತಿ ಪ್ರಧಾನ ಸಂಪಾದಕ ಜಿ ರಾಜೇಂದ್ರ ಅವರು ಸಂಘದ ಸದಸ್ಯರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ನೆರವೇರಿಸಿ ಮಾತನಾಡಿ, ಸಂವಿಧಾನದ ನಾಲ್ಕನೇ ಅಂಗವಾಗಿರುವ ಮಾದ್ಯಮರಂಗ್ಕೆ ತುಂಬ ಮಹತ್ವ ಇದೆ. ಸಮಾಜದ ಏಳಿಗೆಯಲ್ಲಿ ಪತ್ರಿಕಾ ಕ್ಷೇತ್ರದ ಕೊಡುಗೆ ಮಹತ್ವದಾಗಿದೆ.ಹೋಬಳಿ ಬೆಳ್ಳಿ ಮಹೋತ್ಸವ ಆಚರಣೆ
ಸಂತೋಷ ತರುವ ಸಂಗತಿ.ಬೆಳೆದು ಬಂದ ದಾರಿಯನ್ನು ಮೆಲಕು ಹಾಕಿಕೊಳ್ಳುವುದರ ಜೊತೆಗೆ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದವರನ್ನು ನೆನಪಿಸಿಕೊಂಡು ಗೌರವಿಸಿರುವುದು ಉತ್ತಮ ಕಾರ್ಯವಾಗಿದೆ ಎಂದರು.
ಕುಶಾಲನಗರ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಎಂ ಎನ್ ಚಂದ್ರಮೋಹನ್ ಅಧ್ಯಕ್ಷತೆ ವಹಿಸುವುದರೊಂದಿಗೆ ಪ್ರಾಸ್ತಾವಿಕವಾಗಿ ಮಾತನಾಡಿ,
ಪತ್ರಕರ್ತರು ಸಮಾಜಮುಖಿಯಾಗಿ ಕೆಲಸಮಾಡಬೇಕು.ಪತ್ರಕರ್ತರ ಸಮಸ್ಯೆಗಳಿಗೆ ಸ್ಪಂದಿಸುವ ಕೆಲಸ ಆಗಬೇಕು. ಆದರೆ ರಾಜಕಾರಣಿಗಳು ಹಾಗೂ ಅಧಿಕಾರಿಗಳು ಪತ್ರಕರ್ತರನ್ನು ನಿರ್ಲಕ್ಷ್ಯ ಭಾವನೆಯಿಂದ ಕಾಣುವ ಸ್ಥಿತಿ ಇದೆ. ಇಂತಹ ಪರಿಸ್ಥಿತಿಯನ್ನು ಮನಗಂಡ ಹಿರಿಯ ಪತ್ರಕರ್ತ ಬಿ.ಆರ್.ನಾರಾಯಣ ಅವರು ಹೋಬಳಿ ಸಂಘವನ್ನು ಸ್ಥಾಪಿಸುವ ಮೂಲಕ ಪತ್ರಕರ್ತ ಶ್ರೇಯೋವೃದ್ಧಿಗೆ ವಿಶೇಷ ಒತ್ತು ನೀಡಿದರು ಎಂದರು.
ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾದ ಬಿ ಆರ್ ಸವಿರಾ ರೈ ಅವರು ಸಾಧಕರನ್ನು ಸನ್ಮಾನಿಸಿ ಗೌರವಿಸಿದರು.
ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ಉಪಾಧ್ಯಕ್ಷ ರಮೇಶ್ ಕುಟ್ಟಪ್ಪ, ಕೊಡಗು ಪ್ರೆಸ್ ಕ್ಲಬ್ ಅಧ್ಯಕ್ಷ ಬೊಳ್ಳಜಿರ ಅಯ್ಯಪ್ಪ, ಸಂಘದ ರಾಷ್ಟ್ರೀಯ ಸಮಿತಿ ಸದಸ್ಯರಾದ ಸುನಿಲ್ ಪೊನ್ನೆಟ್ಟಿ ಅವರು
ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸದಸ್ಯರ ನಡುವೆ ನಡೆದ ಜಿಲ್ಲಾ ಮಟ್ಟದ ಕ್ರಿಕೆಟ್ ಪಂದ್ಯಾಟದಲ್ಲಿ ವಿಜೇತರಾದ ತಂಡದ ಸದಸ್ಯರಿಗೆ ಬಹುಮಾನ ವಿತರಿಸಿದರು.
ಸನ್ಮಾನ : ಹೋಬಳಿ ಸಂಘದ ಅಧ್ಯಕ್ಷರಾಗಿ ಸೇವೆ ಸಲ್ಲಿಸಿ ಸಂಘದ ಏಳಿಗೆಗಾಗಿ ಶ್ರಮಿಸಿದ ಸ್ಥಾಪಕ ಅಧ್ಯಕ್ಷ ಬಿ.ಆರ್.ನಾರಾಯಣ, ಎಂ.ಇ.ಮೊಹಿದ್ದೀನ್, ಕೆ.ಕೆ.ನಾಗರಾಜ ಶೆಟ್ಟಿ, ಕೆ.ಎಸ್.ಮೂರ್ತಿ, ಎಂ.ಎನ್.ಚಂದ್ರಮೋಹನ್, ಸಬಲಂ ಬೋಜಣ್ಣ ರೆಡ್ಡಿ, ರಘುಹೆಬ್ಬಾಲೆ ಅವರನ್ನು ಸಂಘದ ವತಿಯಿಂದ ಸನ್ಮಾನಿಸಿ ನೆನಪಿನ ಕಾಣಿಕೆ ನೀಡಿ ಆತ್ಮೀಯವಾಗಿ ಗೌರವಿಸಲಾಯಿತು. ಜೊತೆಗೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವ ಡಾ.ಕಿಶೋರ್ ಕುಮಾರ್, ಪುರಸಭೆಯ ಮೇಸ್ತ್ರಿ ಮೋಹನ್‌ಕುಮಾರ್, ಸಮಾಜ ಸೇವಕ ಮುನೀರ್, ಸಮಾಜ ಸೇವಕಿ ಪದ್ಮಪುರುಷೋತ್ತಮ,ಪತ್ರಿಕಾ ವಿತರಕ ವಿ.ಪಿ.ಪ್ರಕಾಶ್ ಹಾಗೂ ನಿವೃತ್ತಿ ಮುಖ್ಯ ಶಿಕ್ಷಕ ನಜೀರ್ ಅಹ್ಮದ್, ಕರ್ನಾಟಕ ಕೊಡವ ಅಕಾಡೆಮಿ ಮಾಜಿ ಅಧ್ಯಕ್ಷರೂ ಸಾಹಿತಿ ಬಾಚರಾಣಿಯಂಡ ಪಿ.ಅಪ್ಪಣ,ಬಸಪ್ಪ ಅವರನ್ನು ಸಂಘದ ವತಿಯಿಂದ ಸನ್ಮಾಸಿ ಗೌರವಿಸಲಾಯಿತು.
ಕೊಡವ ಸಮಾಜದ ನಿರ್ದೇಶಕಿ ಧರಣಿಸೋಮಯ್ಯ ಪ್ರಾರ್ಥಿಸಿದರು.ಸಂಘದ ಪ್ರಧಾನ ಕಾರ್ಯದರ್ಶಿ ವಿನಿತಾಚಂದ್ರಮೋಹನ್ ಸ್ವಾಗತಿಸಿದರು.ಕೊಡವ ವಿವಿ ಉಪನ್ಯಾಸಕ ಜಮೀರ್ ಅಹಮ್ಮದ್ ಹಾಗೂ ಜಿಲ್ಲಾ ಪತ್ರಕರ್ತರ ಸಂಘದ ನಿರ್ದೇಶಕ ಟಿ.ಆರ್.ಪ್ರಭುದೇವ್ ನಿರೂಪಿಸಿದರು, ಕಾರ್ಯದರ್ಶಿ ನಾಗರಾಜಶೆಟ್ಟಿ ವಂದಿಸಿದರು.
Back to top button
error: Content is protected !!