ಸೋಮವಾರಪೇಟೆ, ಸೆ 26: ಕೊಡಗು ಜಿಲ್ಲೆಯ ಇಬ್ಬರು ಮಹಿಳೆಯರು ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭೆಯ ರಾಜ್ಯಘಟಕದ ನಿರ್ದೇಶಕರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಇತ್ತೀಚೆಗೆ ಬೆಂಗಳೂರಿನಲ್ಲಿ ನಡೆದ 2024/29ನೆ ಸಾಲಿನ ರಾಜ್ಯ ಘಟಕದ ಆಡಳಿತ ಮಂಡಳಿಯ ನಿರ್ದೇಶಕರ ಚುನಾವಣೆಯಲ್ಲಿ ಕೊಡ್ಲಿಪೇಟೆಯ ರಾಜೇಶ್ವರಿ ನಾಗರಾಜ್ ಹಾಗು ವಿರಾಜಪೇಟೆಯ ಅನುಚಂದ್ರಶೇಖರ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಇತ್ತೀಚೆಗೆ ಬೆಂಗಳೂರಿನ ವೀರಶೈವ ಲಿಂಗಾಯತ ಮಹಾಸಭಾದ ಹಾನಗಲ್ಲ ಶಿವಕುಮಾರ ಸ್ವಾಮೀಜಿ
ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಮಹಾಸಭೆಯ ಚುನಾಯಿತ ರಾಷ್ಟ್ರಾಧ್ಯಕ್ಷರು,ರಾಜ್ಯಾಧ್ಯಕ್ಷರು, ಜಿಲ್ಲಾಧ್ಯಕ್ಷರು ಹಾಗು ಕಾರ್ಯನಿರ್ವಾಹಕ ಸಮಿತಿಯ ಸದಸ್ಯರುಗಳಿಗೆ ಅಭಿನಂದನೆ ಸಮಾರಂಭ ಹಾಗೂ ಚುನಾವಣಾ ಧೃಡೀಕರಣ ಪತ್ರ ವಿತರಣೆ ಕಾರ್ಯಕ್ರಮ ನಡೆಯಿತು.
ಈ ಸಂದರ್ಭಮೂರನೇ ಬಾರಿಗೆ ಅವಿರೋಧ ವಾಗಿ ಆಯ್ಕೆ ಅದ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ರಾಷ್ಟೀಯ ಅಧ್ಯಕ್ಷರು, ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕರು ಡಾ. ಶಾಮನೂರು ಶಿವಶಂಕರಪ್ಪ ಅವರಿಗೆ ಮಹಾಸಭಾ ದಿಂದ ಅಭಿನಂದನೆ ಸಲ್ಲಿಸಿ, ದೃಡೀಕರಣ ಪತ್ರ ವಿತರಣೆ ಮಾಡಿದರು. ಸಚಿವರರಾದ ಈಶ್ವರ್ ಖಂಡ್ರೆಜಿಯವರು,ರಾಜ್ಯ ಘಟಕದ ಅಧ್ಯಕ್ಷರಾದ ಶ್ರೀ ಶಂಕರ ಬಿದರಿಯವರು ,ಮುಖ್ಯ ಚುನಾವಣ ಅಧಿಕಾರಿಗಳಾದ ದ್ಯಾಬೇರಿಯವರು, ಸಚಿವರಾದ ಶರಣ ಬಸಪ್ಪ ದರ್ಶನಾಪುರ , ಮಾಜಿ ಸಚಿವರು ರಾಜಶೇಖರ್ ಪಾಟೀಲ್, ಸಂಸದರಾದ ರಾಘವೇಂದ್ರ ಯಡಿಯೂರಪ್ಪ ಹಾಗೂ ಮುಂತಾದವರು ಉಪಸ್ಥಿತರಿದ್ದರು.
Back to top button
error: Content is protected !!