ಕುಶಾಲನಗರ, ಸೆ 27: ಕುಶಾಲನಗರ ತಾಲೂಕು ಪಂಚಾಯಿತಿ ತ್ರೈಮಾಸಿಕ ಕೆಡಿಪಿ ಸಭೆ ಶಾಸಕ ಮಂತರ್ ಗೌಡ ಅಧ್ಯಕ್ಷತೆಯಲ್ಲಿ ಕೂಡುಮಂಗಳೂರು ಗ್ರಾಪಂ ಸಭಾಂಗಣದಲ್ಲಿ ನಡೆಯಿತು.
ಅಧ್ಯಕ್ಷತೆ ವಹಿಸಿ ಮಾತನಾಡಿದ ಶಾಸಕ ಮಂತರ್ ಗೌಡ, ಸಾರ್ವಜನಿಕರ ಸಮಸ್ಯೆ ಅಹವಾಲುಗಳನ್ನು ಆಲಿಸಿ ಪರಿಹಾರ ಒದಗಿಸಲು ಆದ್ಯತೆ ನೀಡುವಂತೆ ಅಧಿಕಾರಿ ವೃಂದಕ್ಕೆ ಸೂಚನೆ ನೀಡಿದರು.
ಸಭೆಯಲ್ಲಿ ಇಲಾಖಾವಾರು, ಗ್ರಾಮಪಂಚಾಯ್ತಿಗಳ ಪ್ರಗತಿ ಪರಿಶೀಲನೆ, ವಿವಿಧ ಇಲಾಖೆಗಳ ಕನ್ನಡ ಅನುಷ್ಠಾನದ ಪ್ರಗತಿ ಪರಿಶೀಲನೆ ಬಗ್ಗೆ ಚರ್ಚೆ ನಡೆಯಿತು.
ಅರ್ಹ ಫಲಾನುಭವಿಗಳ ಪಡಿತರ ಚೀಟಿ ರದ್ದುಗೊಳಿಸಿರುವ ಬಗ್ಗೆ ಚರ್ಚೆ ನಡೆಯಿತು. ಈ ಬಗ್ಗೆ ಮನೆಮನೆ ಪರಿಶೀಲನೆ ನಡೆಸುವಂತೆ ಆಹಾರ ನಿರೀಕ್ಷಕರಿಗೆ ಸೂಚಿಸಲಾಯಿತು.
ಮದ್ಯದಂಗಡಿಗಳಲ್ಲಿ ನಿಯಮ ಉಲ್ಲಂಘನೆ, ಅಕ್ರಮ ಮದ್ಯ ಮಾರಾಟ, ಮಾದಕ ವಸ್ತುಗಳ ಮಾರಾಟದ ಬಗ್ಗೆ ನಿಗಾವಹಿಸಿ ಉಲ್ಲಂಘನೆ ಕಂಡುಬಂದಲ್ಲಿ ಕಾನೂನು ಕ್ರಮ ಜರುಗಿಸುವಂತೆ ಅಬಕಾರಿ ಹಾಗೂ ಪೊಲೀಸ್ ಅಧಿಕಾರಿಗಳಿಗೆ ಶಾಸಕರು ಸೂಚಿಸಿದರು.
ಕುಶಾಲನಗರ ತಹಸೀಲ್ದಾರ್ ಕಿರಣ್ ಗೌರಯ್ಯ, ತಾಪಂ ಆಡಳಿತಾಧಿಕಾರಿ ಝೀವಲ್ ಖಾನ್, ತಾಪಂ ಇಒ ಪರಮೇಶ್ವರ ಕುಮಾರ್ ಸೇರಿದಂತೆ
ಗ್ಯಾರೆಂಟಿ ಯೋಜನೆಗಳ ಅನುಷ್ಠಾನ ಸಮಿತಿ ತಾಲೂಕು ಅಧ್ಯಕ್ಷ ವಿ.ಪಿ.ಶಶಿಧರ್, ನಾಮನಿರ್ದೇಶಿತ ಸದಸ್ಯರಾದ ಹನೀಫ್, ಸ್ವಾಮಿ, ಟಿ.ಬಿ.ಜಗದೀಶ್, ಹಮೀದ್, ಜ್ಯೋತಿ, ಕೂಡುಮಂಗಳೂರು ಗ್ರಾಪಂ ಅಧ್ಯಕ್ಷ ಭಾಸ್ಕರ್ ನಾಯಕ್ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿ ವರ್ಗ, ಗ್ರಾಪಂ ಪಿಡಿಒಗಳು ಇದ್ದರು.
Back to top button
error: Content is protected !!