ಕುಶಾಲನಗರ, ಸೆ 28:ಕೂಡಿಗೆಯಲ್ಲಿರುವ ಕೊಡಗು ಸೈನಿಕ ಶಾಲೆಯ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿದ್ಯಾರ್ಥಿಗಳು ಕೂಡಿಗೆಯ ರಾಮೇಶ್ವರ ಕೂಡುಮಂಗಳೂರು ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಭೇಟಿ ನೀಡಿ ಸಹಕಾರ ಸಂಘದ ಬಗ್ಗೆ ಸಂವಾದ ನಡೆಸಿದರು.
ವಿದ್ಯಾರ್ಥಿಗಳೊಂದಿಗೆ ಸಹಕಾರ ಸಂಘದ ಅಧ್ಯಕ್ಷ ಕೆ.ಕೆ.ಹೇಮಂತ್ ಕುಮಾರ್ ಸಂವಾದ ನಡೆಸಿದರು. ಸಹಕಾರ ಸಂಘದ ರಚನೆ, ಅದರ ಬೆಳವಣಿಗೆ ಬಗ್ಗೆ ತಿಳಿಸಲಾಯಿತು.
ರೈತರ ಅಭಿವೃದ್ಧಿಗೆ ಪೂರಕವಾಗಿ ತಿಂಗಳಿಗೊಮ್ಮೆ ಸಭೆ ನಡೆಸಿ, ಸಹಕಾರ ಕಾಯ್ದೆಯ ಅನುಗುಣವಾಗಿ ಸಾಲ ಸೌಲಭ್ಯಗಳನ್ನು ರೈತರಿಗೆ ನೀಡುವ ಮುಖೇನ ಅವರನ್ನು ಆರ್ಥಿಕವಾಗಿ ಸದೃಢಗೊಳಿಸಲು ಸಹಕಾರ ಸಂಘಗಳು ಎಲ್ಲಾ ರೀತಿಯ ಸಹಕಾರವನ್ನು ನೀಡುತ್ತವೆ ಎಂಬ ಮಾಹಿತಿಯನ್ನು ವಿದ್ಯಾರ್ಥಿಗಳಿಗೆ ನೀಡಿದರು.
ವಿದ್ಯಾರ್ಥಿಗಳು ಸಂವಾದದಲ್ಲಿ ಕೇಳಿದ ವಿಷಯಗಳಿಗೆ ಅಧ್ಯಕ್ಷ ಕೆ.ಕೆ. ಹೇಮಂತ್ ಕುಮಾರ್ ಉತ್ತರಿಸಿದರು. ವಿವಿಧ ರೀತಿಯ ಸಾಲ ಸೌಲಭ್ಯಗಳ ಬಗ್ಗೆ ತಿಳಿಸಿದರು.
ಇದೇ ಸಂದರ್ಭದಲ್ಲಿ ವಿದ್ಯಾರ್ಥಿಗಳು ಕೂಡಿಗೆ ಡೇರಿ ಮತ್ತು ಗ್ರಾಮ ಪಂಚಾಯಿತಿಗೆ ಭೇಟಿ ನೀಡಿ ಮಾಹಿತಿಯನ್ನು ಪಡೆದುಕೊಂಡರು.
ಈ ಸಂದರ್ಭದಲ್ಲಿ ಸಹಕಾರ ಸಂಘದ ನಿರ್ದೇಶಕರಾದ ಜಯಶ್ರೀ, ಕೆ.ಬಿ. ರಾಮಚಂದ್ರ, ಕೆ.ಪಿ.ರಾಜು, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಂ.ಪಿ. ಮೀನಾ, ಸೈನಿಕ ಶಾಲೆಯ ಶಿಕ್ಷಕರಾದ ರಾಘವೇಂದ್ರ ರಾಜ್ ಅರಸ್, ವೆಂಕಟರಮಣ, ಆಶೋಕನ್, ಮಹತೇಶ್, ಸುವಿತ್, ಮಹಾಲಕ್ಷಿ, ಪಾರ್ವತಿ, ಸುಬ್ಬರಂಗಯ್ಯ ಮತ್ತಿತರರು ಇದ್ದರು.
Back to top button
error: Content is protected !!