ಪ್ರಕಟಣೆ

ಜು.20 ರಂದು ಗಿಡ‌ ನೆಡುವ ಕಾರ್ಯಕ್ರಮ

ಕುಶಾಲನಗರ ವಾಸವಿ ಯುವಜನ ಸಂಘ ಆಶ್ರಯ

ಕುಶಾಲನಗರ, ಜು 19:
ಕುಶಾಲನಗರದ ವಾಸವಿ ಯುವಜನ ಸಂಘ ಮತ್ತು ವಾಸವಿ ಯುವಜನ ಚಾರಿಟೇಬಲ್ ಟ್ರಸ್ಟ್ ನ ವತಿಯಿಂದ ಆಜಾದಿ ಕಾ ಅಮೃತ ಮಹೋತ್ಸವ ಮತ್ತು ಸಂಘದ 55ನೇ ವರ್ಷದ ವಾರ್ಷಿಕೋತ್ಸವದ ನೆನಪಿಗಾಗಿ ಕುಶಾಲನಗರದ ಪ್ರಥಮ ದರ್ಜೆಯ ಕಾಲೇಜಿನ ಸಹಯೋಗದೊಂದಿಗೆ ಜುಲೈ 20 ರಂದು ಬುಧವಾರ ಬೆಳಿಗ್ಗೆ 10.30ಕ್ಕೆ ಕಾಲೇಜಿನ ಆವರಣದಲ್ಲಿ ಗಿಡ ನೆಡುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.
ಕಾರ್ಯಕ್ರಮದ ಉದ್ಘಾಟನೆಯನ್ನು ಶಾಸಕರಾದ ಎಂ.ಪಿ.ಅಪ್ಪಚ್ಚು ರಂಜನ್ ನೆರವೇರಿಸಲಿದ್ದಾರೆ ಎಂದು ಸಂಘದ ಅಧ್ಯಕ್ಷರಾದ ಪ್ರವೀಣ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related Articles

Leave a Reply

Your email address will not be published. Required fields are marked *

Back to top button
error: Content is protected !!