ಕಾರ್ಯಕ್ರಮ

ಕುಶಾಲನಗರದಲ್ಲಿ ಸ್ಕೌಟ್ಸ್ ಮತ್ತು ಗೈಡ್ಸ್ ವತಿಯಿಂದ ಗಾಂಧಿ ಜಯಂತಿ

ಕುಶಾಲನಗರ, ಅ.2: ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯ ಕುಶಾಲನಗರ ಸ್ಥಳೀಯ ಸಂಸ್ಥೆ , ಕುಶಾಲನಗರ ಪುರಸಭೆಯ ಕಾರ್ಯಾಲಯ ಹಾಗೂ ಕುಶಾಲನಗರ ಫಾತಿಮ ಪ್ರೌಢಶಾಲೆಯ ಸಂಯುಕ್ತಾಶ್ರಯದಲ್ಲಿ ಶಾಲಾ ಶಿಕ್ಷಣ ಇಲಾಖೆಯ ರಾಷ್ಟ್ರೀಯ ಹಸಿರು ಪಡೆಯ ಇಕೋ ಕ್ಲಬ್ ನ ಸಹಯೋಗದೊಂದಿಗೆ ಕುಶಾಲನಗರ ಫಾತಿಮ ಪ್ರೌಢಶಾಲೆಯಲ್ಲಿ ಬುಧವಾರ 155 ನೇ ವರ್ಷದ ಮಹಾತ್ಮ ಗಾಂಧಿ ಜಯಂತಿ ಹಾಗೂ ಲಾಲ್ ಬಹಾದ್ದೂರ್ ಶಾಸ್ತ್ರಿ ಜಯಂತಿ ಆಚರಣೆ ಮತ್ತು ಸ್ವಚ್ಚತಾ ಹೀ ಸೇವಾ ಶ್ರಮದಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಫಾತಿಮ ಶಾಲಾವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಹಾತ್ಮ
ಗಾಂಧಿ ಹಾಗೂ ಲಾಲ್ ಬಹಾದ್ದೂರ್ ಶಾಸ್ತ್ರಿ ಅವರ ಭಾವಚಿತ್ರಕ್ಕೆ ಪುಷ್ಪ ಅರ್ಪಿಸಿ ಶಾಲಾವರಣದಲ್ಲಿ ಅಮ್ಮನ ಹೆಸರಿನಲ್ಲಿ ಗಿಡನೆಡುವ ಮೂಲಕ ಸ್ವಚ್ಚತಾ ಆಂದೋಲನಕ್ಕೆ ಚಾಲನೆ
ನೀಡಲಾಯಿತು.
ಶಾಲಾವರಣದಲ್ಲಿ ಗಿಡ ನೆಡುವ ಮೂಲಕ ಸ್ವಚ್ಚತಾ ಶ್ರಮದಾನ ಕಾರ್ಯಕ್ಕೆ ಚಾಲನೆ ನೀಡಿದ ಸ್ಕೌಟ್ಸ್, ಗೈಡ್ಸ್ ನ ಸ್ಥಳೀಯ
ಸಂಸ್ಥೆಯ ಅಧ್ಯಕ್ಷ ಡಾ ಪ್ರವೀಣ್ ದೇವರಗುಂಡ ಸೋಮಪ್ಪ ಮಾತನಾಡಿ, ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳು ತಮ್ಮನ್ನು
ಸದಾಕಾಲ ಸೇವಾ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಬೇಕು
ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಸ್ಕೌಟ್ ಮತ್ತು ಗೈಡ್ ಸಹಕಾರಿಯಾಗಲಿದೆ ಎಂದರು.
ಪ್ರತಿಯೊಬ್ಬರೂ ತಮ್ಮ ಸುತ್ತಲಿನ ಪರಿಸರವನ್ನು
ಶ್ರಮದಾನದ ಮೂಲಕ ಸ್ವಚ್ಚತಾ ಕಾರ್ಯ ಕೈಗೊಂಡು ಪರಿಸರವನ್ನು ಸ್ವಚ್ಛಗೊಳಿಸಬೇಕು ಎಂದು
ಡಾ ಪ್ರವೀಣ್ ಹೇಳಿದರು.
ಸ್ವಚ್ಛ ಭಾರತ್ ಮಿಷನ್ ಮತ್ತು ಸ್ವಚ್ಚತಾ ಹೀ ಸೇವಾ ಅಭಿಯಾನದ ಮಹತ್ವ ಕುರಿತು ಮಾಹಿತಿ ನೀಡಿ
ಸ್ವಚ್ಛತೆಯೇ ಸೇವೆ ಕುರಿತು ಪರಿಸರ ಪ್ರತಿಜ್ಞಾ ವಿಧಿ ಬೋಧಿಸಿದ
ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ನ ಕೊಡಗು ಜಿಲ್ಲಾ ಸಂಸ್ಥೆಯ ಜಿಲ್ಲಾ ಸಾರ್ವಜನಿಕ ಸಂಪರ್ಕಾಧಿಕಾರಿ ಟಿ.ಜಿ.ಪ್ರೇಮಕುಮಾರ್, ಪ್ರತಿಯೊಬ್ಬರೂ ತಮ್ಮ ಸುತ್ತಲಿನ ಪರಿಸರವನ್ನು ಸ್ವಚ್ಛಗೊಳಿಸಿ ಸ್ವಚ್ಛ ಭಾರತ ಅಭಿಯಾನದ ಮೂಲಕ ಸುಂದರ ಹಾಗೂ ಹಸಿರು ಪರಿಸರ ನಿರ್ಮಾಣಕ್ಕೆ ಕೈಜೋಡಿಸಬೇಕು. ಈ ದಿಸೆಯಲ್ಲಿ ವಿದ್ಯಾರ್ಥಿಗಳ ಪಾತ್ರ ಮಹತ್ತರವಾದುದು ಎಂದರು.
ಪುರಸಭೆಯ ಹಿರಿಯ ಆರೋಗ್ಯ ನಿರೀಕ್ಷಕ ಎಂ.ಸಿ.ಉದಯಕುಮಾರ್ ಮಾತನಾಡಿ, ಪ್ರತಿಯೊಬ್ಬರೂ ನಗರ ಸ್ವಚ್ಚತೆಗೆ ಹೆಚ್ಚಿನ ಆದ್ಯತೆ ನೀಡಬೇಕು
ಎಂದು ಮನವಿ ಮಾಡಿದರು.
ಫಾತಿಮ ಪ್ರೌಢಶಾಲೆಯ ಮುಖ್ಯ ಶಿಕ್ಷಕ ಜಫ್ರಿ ಡಿ’ಸಿಲ್ವ ಮಾತನಾಡಿ, ವಿದ್ಯಾರ್ಥಿಗಳು ಸ್ವಚ್ಚತೆ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಬೇಕು ಎಂದರು.
ಜಿಲ್ಲಾ ಗೈಡ್ಸ್ ಸಂಸ್ಥೆಯ ಸಹಾಯಕ ಆಯುಕ್ತೆ ಸಿ.ಎಂ.ಸುಲೋಚನ, ಸ್ಥಳೀಯ ಸಂಸ್ಥೆಯ ಕಾರ್ಯಾಧ್ಯಕ್ಷ
ತಮ್ಮಯ್ಯ, ಕಾರ್ಯದರ್ಶಿ
ಎಂ.ಎಸ್.ಗಣೇಶ್, ಕೋಶಾಧಿಕಾರಿ ನರೇಶ್ ಕುಮಾರ್,
ಲಯನ್ಸ್ ಕ್ಲಬ್ ನ ವಲಯಾಧಿಕಾರಿ ಸುಮನ್ ಬಾಲಚಂದ್ರ, ಲಯನ್ಸ್ ಸಂಸ್ಥೆಯ ಪ್ರಮುಖರಾದ ಕೊಡಗನ ಹರ್ಷ, ಕಿರಣ್, ಸತೀಶ್, ಮನೋಹರ್, ರವಿ, ರಾಜೇಶ್,
, ಲಯನ್ಸ್ ಕ್ಲಬ್ ನ
ತಾಲ್ಲೂಕು ದೈಹಿಕ ಶಿಕ್ಷಣ ಪರಿವೀಕ್ಷಕಿ ಎಂ.ಎಲ್.ಸುಕುಮಾರಿ, ಶಾಲೆಯ ಇಕೋ ಕ್ಲಬ್ ನ ಉಸ್ತುವಾರಿ ಶಿಕ್ಷಕ ಕಿರಣ್, ಸ್ಕೌಟ್ಸ್ ಮಾಸ್ಟರ್ ಎಂ.ಎಲ್.ಜಾನ್ ಸನ್,
ಗೈಡ್ಸ್ ನ ಶಿಕ್ಷಕಿ ಬಿ.ಎಂ.ಶಿಫಾನ,
ಪುರಸಭೆಯ ಸಿಬ್ಬಂದಿಗಳಾದ ನಂಜುಂಡ, ಕೀರ್ತಿ, ದ್ರಾಕ್ಷಾಯಿಣಿ, ಸ್ವಚ್ಚತಾ ಮೇಲ್ವಿಚಾರಕ ಎಚ್.ಎನ್.ಮೋಹನ್ ಕುಮಾರ್, ಪೌರ ಕಾರ್ಮಿಕರು, ಸ್ಕೌಟ್ಸ್ ಮತ್ತು ಗೈಡ್ಸ್ ನ ಪದಾಧಿಕಾರಿಗಳು, ಸ್ವಯಂ ಸೇವಕರು, ‌‍ ಶಾಲಾ ವಿದ್ಯಾರ್ಥಿಗಳು ಇದ್ದರು.
ನಂತರ ಫಾತಿಮ ಪ್ರೌಢಶಾಲಾ ಆವರಣ, ಅಂಚೆ ಕಛೇರಿಯ ರಸ್ತೆ ಹಾಗೂ ಕಾವೇರಿ ನದಿಗೆ ತೆರಳುವ ಅಯ್ಯಪ್ಪಸ್ವಾಮಿ ದೇವಸ್ಥಾನ ರಸ್ತೆಯಲ್ಲಿ ಗಾಂಧಿ ಜಯಂತಿ ಹಾಗೂ
ಸ್ವಚ್ಛ ಭಾರತ್ ಅಭಿಯಾನದಡಿ ಸ್ವಚ್ಛತಾ ಹೀ ಸೇವಾ ಕಾರ್ಯಕ್ರಮದ
ಅಂಗವಾಗಿ ಪುರಸಭೆಯ
ಪೌರ ಕಾರ್ಮಿಕರ ಜತೆಗೂಡಿದ ಶಿಕ್ಷಕರು, ಸ್ಕೌಟ್ಸ್, ಗೈಡ್ಸ್ ನ ಸ್ವಯಂ ಸೇವಕರು,
ವಿದ್ಯಾರ್ಥಿಗಳು
ಶ್ರಮದಾನ ಕಾರ್ಯದಲ್ಲಿ ಭಾಗಿಯಾಗಿ ಸ್ವಚ್ಚತೆ ಕೈಗೊಂಡರು.
ಪೌರ ಕಾರ್ಮಿಕರ ಜತೆಗೂಡಿದ
ಸ್ಕೌಟ್ಸ್, ಗೈಡ್ಸ್ ನ ವಿದ್ಯಾರ್ಥಿಗಳು
ಅಂಚೆ ಕಛೇರಿ ಬಳಿಯಿಂದ ರಸ್ತೆಯ
ಇಕ್ಕೆಡೆಗಳಲ್ಲಿ ಬೆಳೆದಿದ್ದ ಗಿಡ ಗಂಟೆಗಳನ್ನು ತೆರವುಗೊಳಿಸಿದರು. ರಸ್ತೆಯಂಚಿನಲ್ಲಿ ಹರಡಿದ್ದ ಪ್ಲಾಸ್ಟಿಕ್ ತ್ಯಾಜ್ಯ ಸೇರಿದಂತೆ ಕಸ ಕಡ್ಡಿಗಳನ್ನು ಹೆರಕುವ ಮೂಲಕ ಸುತ್ತಲಿನ ಪರಿಸರವನ್ನು ಸ್ವಚ್ಛಗೊಳಿಸುವ
ಮೂಲಕ ಜನರಲ್ಲಿ ಪರಿಸರ ಜಾಗೃತಿ ಮೂಡಿಸಿದರು.

Related Articles

Leave a Reply

Your email address will not be published. Required fields are marked *

Back to top button
error: Content is protected !!