ಕುಶಾಲನಗರ, ಅ 15:ಕುಶಾಲನಗರದಲ್ಲಿರುವ ಆಯುಷ್ ಇಲಾಖೆಯ ಆಯುರ್ವೇದ ಮತ್ತು ಹೋಮಿಯೋಪತಿ ಸಂಯುಕ್ತ ಆಸ್ಪತ್ರೆಗೆ ಸಂಬಂಧಿಸಿದಂತೆ ರೂ 30 ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ಹೆಚ್ಚುವರಿ ಕಟ್ಟಡ ಕಾಮಗಾರಿಗೆ ಮಡಿಕೇರಿ ವಿಧಾನಸಭಾ ಕ್ಷೇತ್ರ ಶಾಸಕ ಡಾ. ಮಂತರ್ ಗೌಡ ಅವರು ಭೂಮಿ ಪೂಜೆ ನೆರವೇರಿಸಿದರು.
ಜಿಲ್ಲಾ ಪಂಚಾಯತಿ ವತಿಯಿಂದ ನಡೆಯುವ ಕಾಮಗಾರಿಯಲ್ಲಿ ಎರಡು ಅಂತಸ್ತಿನ ಕಟ್ಟಡ ನಿರ್ಮಾಣವಾಗಲಿದ್ದು ಆಯುರ್ವೇದ ಚಿಕಿತ್ಸೆಗೆ ಸಂಬಂಧಪಟ್ಟಂತೆ ರೋಗಿಗಳಿಗೆ ಹೆಚ್ಚಿನ ಸವಲತ್ತುಗಳನ್ನು ಒದಗಿಸುವ ಯೋಜನೆ ಇದಾಗಿದೆ ಎಂದು ಶಾಸಕರು ಮಾಹಿತಿ ಒದಗಿಸಿದರು.
ಆಯುರ್ವೇದ ಚಿಕಿತ್ಸೆಗೆ ಹೆಚ್ಚಿನ ಮಂದಿ ಮೈಸೂರು ಮಂಗಳೂರು ಆಸ್ಪತ್ರೆಗಳನ್ನು ಅವಲಂಬಿಸುತ್ತಿದ್ದು ಮುಂದಿನ ದಿನಗಳಲ್ಲಿ ಕುಶಾಲನಗರದಲ್ಲಿ ಎಲ್ಲಾ ಸೌಲಭ್ಯಗಳೊಂದಿಗೆ ಆಯುರ್ವೇದ ಚಿಕಿತ್ಸೆಗೆ ಅವಕಾಶ ಲಭಿಸಲಿದೆ ಎಂದು ಹೇಳಿದರು.
ಜನರು ಇದರ ಸದುಪಯೋಗವನ್ನು ಪಡೆದುಕೊಳ್ಳಬೇಕು. ವೈದ್ಯರು ಸಮರ್ಪಕ ಚಿಕಿತ್ಸೆ ಕಲ್ಪಿಸುವ ನಿಟ್ಟಿನಲ್ಲಿ ಕೆಲಸ ನಿರ್ವಹಿಸಬೇಕು ಎಂದರಲ್ಲದೆ ಗುಣಮಟ್ಟದ ಕಾಮಗಾರಿ ನಡೆಸುವಂತೆ ಸಂಬಂಧಿಸಿದ ಇಂಜಿನಿಯರ್ ಮತ್ತು ಗುತ್ತಿಗೆದಾರರಿಗೆ ಕಿವಿ ಮಾತು ಹೇಳಿದರು.
ಇದೇ ಸಂದರ್ಭ ಆಸ್ಪತ್ರೆಯ ನಿರ್ವಹಣೆಗಾಗಿ ಹೆಚ್ಚುವರಿ 10 ಲಕ್ಷ ರೂಗಳ ಅನುದಾನ ಕಲ್ಪಿಸಲಾಗಿದೆ ಎಂದು ಶಾಸಕರು ತಿಳಿಸಿದರು.
ಈ ಸಂದರ್ಭ ಕುಶಾಲನಗರ ಯೋಜನಾ ಪ್ರಾಧಿಕಾರ ಅಧ್ಯಕ್ಷ ಪ್ರಮೋದ್ ಮುತ್ತಪ್ಪ, ಗ್ಯಾರಂಟಿ ಅನುಷ್ಠಾನ ಸಮಿತಿಯ ತಾಲೂಕು ಅಧ್ಯಕ್ಷ ವಿ ಪಿ ಶಶಿಧರ್, ಕುಶಾಲನಗರ ನಗರ ಕಾಂಗ್ರೆಸ್ ಅಧ್ಯಕ್ಷ ಜೋಸೆಫ್ ವಿಕ್ಟರ್ ಸೋನ್ಸ್,
ಪಟ್ಟಣ ಪಂಚಾಯತಿ ಸದಸ್ಯ ವಿ.ಎಸ್ ಆನಂದಕುಮಾರ್, ನವೀನ್, ಶಿವಶಂಕರ್, ಪ್ರಕಾಶ್, ಜಿಲ್ಲಾ ಆಯುಷ್ ವೈದ್ಯಾಧಿಕಾರಿ ಡಾ ರೇಣುಕಾ, ಡಾ. ಆಶ್ರಿತ, ಜಿಪಂ ಮಾಜಿ ಸದಸ್ಯೆ ಸುನಿತಾ ಸೇರಿದಂತೆ ಸ್ಥಳೀಯ ಜನಪ್ರತಿನಿಧಿಗಳು ಇದ್ದರು.
Back to top button
error: Content is protected !!