ಕುಶಾಲನಗರ, ಜು 09: ಕುಶಾಲನಗರ ತಾಲೂಕು ಒಕ್ಕಲಿಗರ ಸಂಘದಿಂದ ಮುಳ್ಳುಸೋಗೆ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗೆ ಪುಸ್ತಕಗಳನ್ನು ವಿತರಣೆ ಮಾಡಲಾಯಿತು.
ಸಂಘದ ಅಧ್ಯಕ್ಷ ಎಂ.ಕೆ.ದಿನೇಶ್ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ
ಮಡಿಕೇರಿ ಕ್ಷೇತ್ರ ಶಾಸಕ ಡಾ.ಮಂತರ್ ಗೌಡ ಮಕ್ಕಳಿಗೆ ಕಲಿಕಾ ಸಾಮಗ್ರಿಗಳನ್ನು ವಿತರಿಸಿದರು.
ಈ ಸಂದರ್ಭ ಸಂಘದ ವಿಶೇಷ ಆಹ್ವಾನಿತರಾದ ವಿ.ಪಿ.ಶಶಿಧರ್, ಕಾರ್ಯದರ್ಶಿ ಎಂ.ಎಂ.ಪ್ರಕಾಶ್, ನಿರ್ದೇಶಕರಾದ ಜಿ.ಬಿ.ಜಗದೀಶ್, ವಿ.ಜೆ.ನವೀನ್ ಗೌಡ, ಮಧುಕುಮಾರ್, ಸರೋಜಮ್ಮ, ಗೌರಿ, ಸದಸ್ಯರಾದ ಅನಿಲ್ ಮುಳ್ಳುಸೋಗೆ, ಆನಂದ್, ಶಾಲಾ ಮುಖ್ಯ ಶಿಕ್ಷಕಿ ಭಾಗ್ಯ ಇದ್ದರು.
Back to top button
error: Content is protected !!