ಕುಶಾಲನಗರ, ಅ 24 : ತಾಲ್ಲೂಕು ಕೂಡಿಗೆ ಗ್ರಾಮ ಪಂಚಾಯತಿ ವ್ಯಾಪ್ತಿಯ ಹಳೇ ಕೂಡಿಗೆಯ ಪರಿಶಿಷ್ಟ ಜಾತಿ ಸಮುದಾಯ ವಾಸ ಮಾಡುತ್ತಿರುವ ಕಾಲೋನಿ ಬಳಿ ಮದ್ಯದ ಅಂಗಡಿ ಆರಂಭಿಸಲು ಅನುಮತಿ ನೀಡಬಾರದು ಎಂದು ಗ್ರಾಮಸ್ಥರು ಹಾಗೂ ವಿವಿಧ ಸಂಘಟನೆಯ ಮುಖಂಡರು ಪಂಚಾಯತಿ ಅಧ್ಯಕ್ಷ ಗಿರೀಶ್ ಅವರಿಗೆ ಮನವಿ ಪತ್ರ ಸಲ್ಲಿಸಿದರು.
ಕರ್ನಾಟಕ ದಲಿತ ಸಂಘರ್ಷ ಸಮಿತಿ ಮತ್ತು ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾ ಕರ್ನಾಟಕ ಪಕ್ಷ ಹಾಗೂ ಕೂಡಿಗೆ ಡಾ ಬಿ ಆರ್ ಅಂಬೇಡ್ಕರ್ ಕ್ಷೇಮಾಭಿವೃದ್ಧಿ ಸಂಘದ ಪದಾಧಿಕಾರಿಗಳು, ಅಬಕಾರಿ ಕಾಯ್ದೆ ಮತ್ತು ಕಾನೂನು ಉಲ್ಲಂಘಿಸಿ ಮಧ್ಯದ ಅಂಗಡಿಯನ್ನು ತೆರೆಯಲು ಪ್ರಯತ್ನ ನಡೆಯುತ್ತಿದ್ದು,ಯಾವುದೇ ಕಾರಣಕ್ಕೂ ಅನುಮತಿ ನೀಡಬಾರದು ಎಂದು ಒತ್ತಾಯಿಸಿದರು.
ಅಂಬೇಡ್ಕರ್ ಕಾಲೋನಿಯ ಸಮೀಪದ ಸರ್ವೇ ನಂ 14/18, 14/17 ನಲ್ಲಿರುವ ಕಟ್ಟಡಕ್ಕೆ ಬೇರೆ ಕಡೆಯಿಂದ ಮಧ್ಯದ ಅಂಗಡಿಯನ್ನು ಸ್ಥಳಾಂತರ ಮಾಡುವ ಹುನ್ನಾರ ನಡೆಯುತ್ತಿದೆ. ಅಬಕಾರಿ ಕಾಯ್ದೆ ಕಾನೂನಿನ ಆದೇಶವನ್ನು ಉಲ್ಲಂಘಿಸಿ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡದ ಜನರು ವಾಸ ಮಾಡುವ 500 ಮೀಟರ್ ವ್ಯಾಪ್ತಿಯಲ್ಲಿ ಯಾವುದೇ ಮಧ್ಯದ ಅಂಗಡಿಗಳನ್ನು ತೆರೆಯುವಂತಿಲ್ಲ ಎಂಬ ನಿಯಮವಿದೆ.
ಆದರೂ ಅಬಕಾರಿ ಅಧಿಕಾರಿಗಳು ಆಮಿಷಕ್ಕೆ ಒಳಗಾಗಿ
ಮಧ್ಯದ ಅಂಗಡಿ ತೆರೆಯಲು ಅವಕಾಶ ನೀಡುತ್ತಿದ್ದಾರೆ. ಒಂದು ವೇಳ ಅನುಮತಿ ನೀಡಿದರೆ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಕೆ ನೀಡಿದ್ದಾರೆ.
ಈ ಸಂದರ್ಭ ಕರ್ನಾಟಕ ದಲಿತ ಸಂಘರ್ಷ ಸಮಿತಿ ಸಂಚಾಲಕ ಕೆ.ಬಿ.ರಾಜು, ಗ್ರಾಮದ ಮುಖಂಡರಾದ ಗೋವಿಂದರಾಜು,ಕೃಷ್ಣ,ರೇಖಾ,ಮಣಿಕಂಠ,ಪ್ರಶಾಂತ್ ಕುಮಾರ್,ಕುಮಾರ್ ,ಹೊನ್ನಮ್ಮ ಪಾಲ್ಗೊಂಡಿದ್ದರು.
Back to top button
error: Content is protected !!