ಕುಶಾಲನಗರ, ಅ 26: ಕೂಡುಮಂಗಳೂರು ಗ್ರಾಮ ಪಂಚಾಯ್ತಿಯ ಮಾಸಿಕ ಸಭೆ ಗ್ರಾಪಂ ಅಧ್ಯಕ್ಷ ಭಾಸ್ಕರ್ ನಾಯಕ್ ಅಧ್ಯಕ್ಷತೆಯಲ್ಲಿ ಪಂಚಾಯ್ತಿ ಸಭಾಂಗಣದಲ್ಲಿ ನಡೆಯಿತು.
ಸಭೆಯಲ್ಲಿ 15 ನೇ ಹಣಕಾಸು ಯೋಜನೆಯ ಕಾಮಗಾರಿಯ ಕ್ರಿಯಾ ಯೋಜನೆ ಅನುಗುಣವಾಗಿ ಈಗಾಗಲೇ ಎಲ್ಲಾ ವಾರ್ಡ್ ಗಳಲ್ಲಿ ಮುಖ್ಯವಾದ ಕಾಮಗಾರಿಗಳು ನಡೆಯುತ್ತಿವೆ, ಅವುಗಳನ್ನು ಅತಿ ಶೀಘ್ರವಾಗಿ ಪೂರ್ಣಗೊಳಿಸುವಂತೆ ಹಾಜರಿದ್ದ ಸದಸ್ಯರು ತಮ್ಮ ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದರು.
ಮುಂದಿನ ತಿಂಗಳಲ್ಲಿ ವಾರ್ಡ್ ಸಭೆ, ಗ್ರಾಮ ಸಭೆಯನ್ನು ನಡೆಸುವ ಬಗ್ಗೆ, ಪಂಚಾಯ್ತಿ ವ್ಯಾಪ್ತಿಯ ಎಲ್ಲಾ ವಾರ್ಡಗಳಲ್ಲಿ ಮೂಲಭೂತ ಸೌಕರ್ಯಗಳ ಒದಗಿಸುವ ಬಗ್ಗೆ ಸುದೀರ್ಘ ಚರ್ಚೆಗಳು ನಡೆದವು.
ಸಭೆಯ ಅಧ್ಯಕ್ಷತೆ ವಹಿಸಿದ್ದ ಭಾಸ್ಕರ್ ನಾಯಕ್ ಮಾತನಾಡಿ, ಸಭೆಯಲ್ಲಿ ಚರ್ಚೆಯಾದ ಎಲ್ಲಾ ವಿಷಯಗಳನ್ನು ನೊಂದಣಿ ಮಾಡಲಾಗಿದೆ. ಅದರ ಅನುಗುಣವಾಗಿ ಹಂತ ಹಂತವಾಗಿ ಕಾರ್ಯಗತಗೊಳಿಸಲು ಕ್ರಮ ವಹಿಸಲಾಗುವುದು. ಅಲ್ಲದೆ ಶುಚಿತ್ವ ಮತ್ತು ಕುಡಿಯುವ ನೀರಿನ ಪೂರೈಕೆಗೆ ಹೆಚ್ಚಿನ ಅದ್ಯತೆ ಒದಗಿಲಾಗುವುದು ಎಂದರು. ಸಭೆಗೆ ಬಂದ ಸಾರ್ವಜನಿಕರ ಅರ್ಜಿಗಳನ್ನು ಸಭೆಯ ಗಮನಕ್ಕೆ ತಂದು ವಿಲೇವಾರಿ ಮಾಡುವ ಕ್ರಮವನ್ನು ಕೈಗೊಳ್ಳಲಾಯಿತು.
ಅಭಿವೃದ್ಧಿ ಅಧಿಕಾರಿ ಸಂತೋಷ್, ಸರಕಾರದ ಹೊಸ ಹೊಸ ಯೋಜನೆಯ ಬಗ್ಗೆ ಸವಿಸ್ತಾರವಾದ ಮಾಹಿತಿಯನ್ನು ಸಭೆಗೆ ತಿಳಿಸಿದರು. ಸಭೆಯಲ್ಲಿ ಸದಸ್ಯರು ಹಾಜರಿದ್ದರು.
Back to top button
error: Content is protected !!